ವಿಧಾನಸೌಧ, ಶಾಸಕರ ಭವನ, ಕೆಕೆ ಗೆಸ್ಟ್ ಹೌಸ್‌ನಲ್ಲಿ ಏಜೆಂಟ್‌ಗಳು ಫುಲ್‌ ಬ್ಯುಸಿ – ಬೊಮ್ಮಾಯಿ ವರ್ಗಾವಣೆ ದಂಧೆ ಆರೋಪ

By
2 Min Read

ಬೆಂಗಳೂರು: ವರ್ಗಾವಣೆ ದಂಧೆ (Transfer Scam) ಅವ್ಯಾಹತವಾಗಿ ನಡೆಯುತ್ತಿದೆ. ಶಾಸಕರ ಭವನ, ಕುಮಾರಕೃಪಾ ಗೆಸ್ಟ್ ಹೌಸ್ ನಲ್ಲಿ ಜನ ತುಂಬಿಕೊಂಡಿದ್ದಾರೆ. ಇವರಿಂದ ಸ್ವಚ್ಛ ಆಡಳಿತ ನಿರೀಕ್ಷಿಸಲಾಗುತ್ತಾ? ಏಜೆಂಟರು ಎಷ್ಟು ಬ್ಯೂಸಿ ಇದ್ದಾರೆ ಅಂದ್ರೆ ಮಂತ್ರಿಗಳೇ ನಿಲ್ಲಿಸಿದ್ರೂ ನಿಲ್ಲಲ್ಲ, ಅಷ್ಟು ಸ್ಪೀಡಾಗಿದ್ದಾರೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು‌, ವಿಧಾನಸೌಧದ ಸುತ್ತ ಜನವೋ ಜನ ತುಂಬಿ ತುಳುಕುತ್ತಿದೆ. ಏಜೆಂಟ್‌ಗಳು ಫುಲ್‌ ಬ್ಯೂಸಿಯಾಗಿದ್ದಾರೆ. ಮಂತ್ರಿಗಳೇ ನಿಲ್ಲಿಸಿದ್ರೂ ನಿಲ್ಲೋದಿಲ್ಲ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ‌ವಿಧಾನಸೌಧದಲ್ಲಿ ನಮ್ಗೆ ಕಾರ್‌ ಪಾರ್ಕಿಂಗ್‌ ಮಾಡೋಕೆ ಸ್ಥಳ ಸಿಕ್ತಿಲ್ಲ – ಪರಿಷತ್ ನಲ್ಲಿ ಶಾಸಕರ ಅಳಲು

ವರ್ಗಾವಣೆಗೆ ಶಾಸಕರ ಭವನ, ಕುಮಾರಕೃಪಾ (Kumarakrupa Guest House) ಸುತ್ತಮುತ್ತ ಜನಜಂಗುಳಿ, ಹಫ್ತಾ ವಸೂಲಿಗೆ ಮೇಲಾಧಿಕಾರಿಗಳಿಂದ ಒತ್ತಡ ಹೆಚ್ಚಾಗಿ ಪೇದೆ ಆತ್ಮಹತ್ಯೆಗೆ ಯತ್ನ, ರಾಜ್ಯ ಸರ್ಕಾರದ ಭ್ರಷ್ಟಾಚಾರದ ಪರಿಯನ್ನು ಮಾಜಿ ಬಸವರಾಜ ಬೊಮ್ಮಾಯಿ ಬಿಚ್ಚಿಟ್ಟ ಪರಿ ಇದು. ಭ್ರಷ್ಟಾಚಾರ ಪ್ರಕರಣಗಳ ಕುರಿತು ತನಿಖೆ ನಡೆಸಬೇಕೆಂದರೆ 2013 ರಿಂದ 2023ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ ಎಂದು ಆಗ್ರಹಿಸಿದರು. ಇದನ್ನೂ ಓದಿ: ಆಶಾ ಕಾರ್ಯಕರ್ತೆಯರ ವೇತನ ಹೆಚ್ಚಳ ಸಾಧ್ಯವಿಲ್ಲ – ದಿನೇಶ್ ಗುಂಡೂರಾವ್

ಭ್ರಷ್ಟಾಚಾರ ನಿಯಂತ್ರಣಕ್ಕೆ‌ ಲೋಕಾಯುಕ್ತ ಇರುವಾಗ ಅದನ್ನ ನಿಷ್ಕ್ರೀಯಗೊಳಿಸಿ ಎಸಿಬಿ ರಚನೆ ಮಾಡಿದ್ದರು. ಭ್ರಷ್ಟಾಚಾರದಿಂದ ರಕ್ಷಣೆ ಪಡೆಯಲು ಎಸಿಬಿ ರಚನೆ ಮಾಡಿದ್ದರು ಅಂತಾ ಕೋರ್ಟ್ ಆದೇಶದಲ್ಲಿಯೇ ಇದೆ. ಭ್ರಷ್ಟಾಚಾರ ನಿಯಂತ್ರಣ ಮಾಡೋದಕ್ಕೆ 2013 ರಿಂದ 2023ರ ವರೆಗಿನ ಎಲ್ಲ ಪ್ರಕರಣಗಳ ತನಿಖೆ ನಡೆಸಿ, ಈ ಸಮಯದಲ್ಲಿ ನಡೆದ‌ ಹಗರಣಗಳ ಬಗ್ಗೆ ಯಾರೇ ದೂರು ಕೊಟ್ಟರೂ ತನಿಖೆ ನಡೆಸಿ. ಹಲವಾರು ಸಂದರ್ಭದಲ್ಲಿ ನ್ಯಾಯಾಂಗ ಆಯೋಗದ ತನಿಖೆಗಳನ್ನು ನೋಡಿದ್ದೇವೆ. ಮುಕ್ತವಾದ ಸತ್ಯ ಹೊರಬೇಕೆಂದರೆ ನಮ್ಮ ಕಾಲದ ನಿಮ್ಮ ಕಾಲದಲ್ಲಿ ನಡೆದಿರುವ ಭಷ್ಟ್ರಾಚಾರ ಹಗರಣಗಳ ಬಗ್ಗೆ ತನಿಖೆಯಾಗಲಿ ಎಂದು ಒತ್ತಾಯಿಸಿದರು.

ಹಫ್ತಾ ವಸೂಲಿಗೆ ಒತ್ತಡ:
ಅಧಿಕಾರಿಗಳ‌ ಮೇಲೆ, ಕಾನ್ ಸ್ಟೇಬಲ್ ಗಳ ಮೇಲೆ ಒತ್ತಡ ಹೇರಿ ಹಫ್ತಾ ವಸೂಲಿ ಮಾಡಲಾಗುತ್ತಿದೆ. ಬೀದರ್ ನಲ್ಲಿ ಒಬ್ಬ ಏಜೆಂಟನ್ನ ಹಫ್ತಾ ವಸೂಲಿ ಮಾಡಲಿಕ್ಕೆ ಇಟ್ಟುಕೊಂಡಿದ್ದಾರೆ. ಅವನು ಹಫ್ತಾ ವಸೂಲಿ ಮಾಡಿದರೂ ಮತ್ತೆ ಗಾಡಿ ನಿಲ್ಲಿಸಿ ಮತ್ತೆ ಹಫ್ತಾ ವಸೂಲಿ ಮಾಡುವಂತೆ ಕೊರವಿ ಎನ್ನುವ ಇನ್ಸ್ ಪೆಕ್ಟರ್ ಒತ್ತಡ ಹೇರಿದ್ದಾರೆ ಅಂತಾ ದೂರು ದಾಖಲಿಸಿದ್ದಾರೆ. ಎಫ್‌ಐಆರ್‌ ಕೂಡ ಆಗಿದೆ. ಕಲಬುರಗಿಯಲ್ಲಿ ಹಿರಿಯ ಅಧಿಕಾರಿಗಳೇ ಹಫ್ತಾ ವಸೂಲಿ ಮಾಡುವಂತೆ ಒತ್ತಡ ಹೇರಿದ್ದಕ್ಕೆ ಕಾನ್ ಸ್ಟೇಬಲ್‌ ಆತ್ಮಹತ್ಯೆಗೆ ಯತ್ನ ಮಾಡಿದ್ದಾನೆ. ಯಾವ ಅಧಿಕಾರಿ ಒತ್ತಡ ಹೇರಿದ್ದರು ಅಂತ ಅವರ ಹೆಸರುಕೂಡ ಪೇದೆ ಹೇಳಿದ್ದಾರೆ. ಅವರ ಮೇಲೆ ಒತ್ತಡ ತಂದು ಹೇಳಿಕೆ ತಿರುಚುವ ಪ್ರಯತ್ನ ಕೂಡ ಮಾಡಲಾಗಿದೆ ಎಂದು ಸರ್ಕಾರದ ವಿರುದ್ಧ ಸರಣಿ ಆರೋಪ ಮಾಡಿದರು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್