ಆಯುರ್ವೇದ ಚಿಕಿತ್ಸೆಗೆ ಕೇರಳಕ್ಕೆ ಬಂದಿದ್ದ ಕೀನ್ಯಾ ಮಾಜಿ ಪ್ರಧಾನಿ ಹೃದಯಸ್ತಂಭನದಿಂದ ನಿಧನ

Public TV
1 Min Read

ತಿರುವನಂತಪುರಂ: ಆಯುರ್ವೇದ ಚಿಕಿತ್ಸೆಗೆಂದು ಕೇರಳಕ್ಕೆ ಬಂದಿದ್ದ ಕೀನ್ಯಾ (Kenya) ಮಾಜಿ ಪ್ರಧಾನಿ ರೈಲಾ ಒಡಿಂಗಾ (Raila Odinga) ಹೃದಯಸ್ತಂಭನದಿಂದ (Cardiac Arrest) ಇಂದು ಮುಂಜಾನೆ ನಿಧನರಾಗಿದ್ದಾರೆ.

80 ವರ್ಷದ ರೈಲಾ ಒಡಿಂಗಾ ಆಯುರ್ವೇದ ಚಿಕಿತ್ಸೆಗಾಗಿ (Ayurvedic Treatment) ಕೇರಳದ ಎರ್ನಾಕುಲಂ (Ernakulam) ಜಿಲ್ಲೆಯ ಕೂಥಾಟುಕುಳಂಗೆ ಬಂದಿದ್ದರು. ಇಂದು ಮುಂಜಾನೆ ವಾಕಿಂಗ್ ಮಾಡುತ್ತಿದ್ದ ಸಂದರ್ಭ ಹಠಾತ್ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಕೂಥಾಟುಕುಳಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೇ ಬೆಳಗ್ಗೆ 9:25ರ ಸುಮಾರಿಗೆ ರೈಲಾ ಒಡಿಂಗಾ ಕೊನೆಯುಸಿರೆಳೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಬೀದರ್ | 45 ಲಕ್ಷ ಮೌಲ್ಯದ ಮಾದಕ ವಸ್ತು ಸೀಜ್ – ಇಬ್ಬರು ಅರೆಸ್ಟ್

ಸದ್ಯ ರೈಲಾ ಒಡಿಂಗಾ ಅವರ ಮೃತದೇಹವನ್ನು ಆಸ್ಪತ್ರೆಯಲ್ಲೇ ಇರಿಸಲಾಗಿದೆ. ಮೃತದೇಹ ಹಸ್ತಾಂತರ ಸೇರಿದಂತೆ ಮುಂದಿನ ಪ್ರಕ್ರಿಯೆಗಾಗಿ ಪ್ರಾದೇಶಿಕ ನೋಂದಣಿ ಕಚೇರಿಗೆ ಮಾಹಿತಿ ನೀಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಹಂಪಿಗೆ ಭೇಟಿ ನೀಡಿದ ನಿರ್ಮಲಾ ಸೀತಾರಾಮನ್‌ – ದೇಶದ ಹೆಸರಲ್ಲಿ ಪೂಜೆ

ರೈಲಾ ಒಡಿಂಗಾ ಕುಟುಂಬ ಇದಕ್ಕೂ ಮೊದಲು ಈ ಆಸ್ಪತ್ರೆಗೆ ಭೇಟಿ ನೀಡಿದ್ದರು. ಈ ಹಿಂದೆ ರೈಲಾ ಒಡಿಂಗಾ ಅವರ ಪುತ್ರಿ ಇದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕಣ್ಣಿನ ದೃಷ್ಟಿ ಮರಳಿ ಪಡೆದಿದ್ದರು. ಇದನ್ನೂ ಓದಿ: ಹೃದಯಸ್ತಂಭನ – ಗೋವಾ ಸಚಿವ, ಮಾಜಿ ಸಿಎಂ ರವಿ ನಾಯ್ಕ್ ನಿಧನ

Share This Article