ಗುಜರಾತ್ ವಿಧಾನಸಭೆ ಚುನಾವಣೆ – BJPಗೆ ಗುಡ್ ಬೈ ಹೇಳಿದ ಹಿರಿಯ ನಾಯಕ

Public TV
1 Min Read

ಅಹಮದಾಬಾದ್: ರಾಜ್ಯ ವಿಧಾನಸಭೆ ಚುನಾವಣೆ (Election) ಒಂದು ತಿಂಗಳು ಬಾಕಿ ಇರುವಾಗಲೇ ಮಾಜಿ ಸಚಿವ ಹಾಗೂ ಬಿಜೆಪಿ(BJP) ಹಿರಿಯ ನಾಯಕ ಜಯನಾರಾಯಣ ವ್ಯಾಸ್ (Jaynarayan Vyas) ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ.

ವೈಯಕ್ತಿಕ ಕಾರಣಗಳಿಂದ ಅವರು ರಾಜೀನಾಮೆ ನೀಡಿರುವುದಾಗಿ ಹೇಳಿದ್ದು, ಕಾಂಗ್ರೆಸ್ (Congress) ಸೇರ್ಪಡೆಯಾಗುವ ಸಾಧ್ಯತೆಗಳಿವೆ. ಇದನ್ನೂ ಓದಿ: ತುಮಕೂರಿನಲ್ಲಿ ಬಾಣಂತಿ, ನವಜಾತ ಶಿಶುಗಳ ಮರಣ ಪ್ರಕರಣ – ಸಚಿವ ಸುಧಾಕರ್ ರಾಜೀನಾಮೆಗೆ ಹೆಚ್‌ಡಿಕೆ ಆಗ್ರಹ

ರಾಜ್ಯ ಬಿಜೆಪಿ ಅಧ್ಯಕ್ಷ (BJP President) ಸಿ.ಆರ್.ಪಾಟೀಲ್‌ಗೆ (CR Patil) ಬರೆದಿರುವ ರಾಜೀನಾಮೆ ಪತ್ರದಲ್ಲಿ ವ್ಯಾಸ್ ಅವರು, ಕಳೆದ ಮೂರು ದಶಕಗಳಿಂದ ಬಿಜೆಪಿಯ (BJP) ಸಿದ್ಧಾಂತದಂತೆ ಸಕ್ರಿಯವಾಗಿ ಬಿಜೆಪಿಗೆ ಸೇವೆ ಸಲ್ಲಿಸಿದ್ದೇನೆ. ವೈಯಕ್ತಿಕ ಕಾರಣಗಳಿಗಾಗಿ ಇಂದು ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಸ್ವತಂತ್ರ ಭಾರತದ ಮೊದಲ ಮತದಾರ ಶ್ಯಾಮ್ ಸರಣ್ ನೇಗಿ ನಿಧನ

ಜಯನಾರಾಯಣ ವ್ಯಾಸ್, ನರೇಂದ್ರ ಮೋದಿ (Narendra Modi) ಅವರು ಮುಖ್ಯಮಂತ್ರಿಯಾಗಿದ್ದಾಗ ಗುಜರಾತ್‌ನ ಬಿಜೆಪಿ ಸರ್ಕಾರದಲ್ಲಿ ಸಚಿವರಾಗಿದ್ದರು. 2012 ಮತ್ತು 2017ರ ವಿಧಾನಸಭಾ ಚುನಾವಣೆಯಲ್ಲಿ (Assembly Polls) ಸಿಧ್‌ಪುರದಿಂದ ಸ್ಪರ್ಧಿಸಿ ಸೋತಿದ್ದರು.

ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದು, ಪಕ್ಷವು ಅದನ್ನು ಅಂಗೀಕರಿಸಿದೆ ಎಂದು ಬಿಜೆಪಿ ರಾಜ್ಯ ಘಟಕದ ಮುಖ್ಯಸ್ಥ ಪಾಟೀಲ್ ಹೇಳಿದ್ದಾರೆ. ಪದೇ ಪದೇ ಸೋಲು ಕಂಡರೂ ನಾವು ಅವರಿಗೆ ಹಲವು ಬಾರಿ ಟಿಕೆಟ್ ನೀಡಿದ್ದೆವು. 75 ವರ್ಷ ದಾಟಿದವರಿಗೆ ಟಿಕೆಟ್ ನೀಡಬಾರದು ಎಂಬ ನಿಯಮ ಪಕ್ಷದಲ್ಲಿದೆ. ಬಹುಶಃ ಚುನಾವಣಾ ಉಮೇದುವಾರಿಕೆ ಅಥವಾ ಇನ್ನಾವುದೋ ಕಾರಣಕ್ಕಾಗಿ ಅವರು ರಾಜೀನಾಮೆ ನೀಡಲು ನಿರ್ಧರಿಸಿರಬಹುದು ಎಂದು ಅವರು ಹೇಳಿದ್ದಾರೆ.

ಮೂಲಗಳ ಪ್ರಕಾರ ಅವರು ಕಾಂಗ್ರೆಸ್ (Congress) ಸೇರ್ಪಡೆಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ. ಇತ್ತೀಚೆಗೆ ಅವರು, ಕಾಂಗ್ರೆಸ್ ಮಾಜಿ ಅಧ್ಯಕ್ಷರಾದ ಸೋನಿಯಾ ಗಾಂಧಿ (Sonia Gandhi) ಹಾಗೂ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ (Ashok Gehlot), ಗುಜರಾತ್ ಕಾಂಗ್ರೆಸ್ ಉಸ್ತುವಾರಿ ರಘು ಶರ್ಮಾ ಅವರನ್ನು ಭೇಟಿ ಮಾಡಿದ್ದರು.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *