ಬೆಂಗಳೂರು: ಮಾಜಿ ಸಚಿವ ಎಂ.ರಘುಪತಿ ಅವರು ಶನಿವಾರ ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸ ನಿಧನ ಹೊಂದಿದರು.
ಎಂ. ರಘುಪತಿ ಅವರು ರಾಮಕೃಷ್ಣ ಹೆಗಡೆ ಸಂಪುಟದಲ್ಲಿ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಅಷ್ಟೇ ಅಲ್ಲದೇ ಇವರು ಮಲ್ಲೇಶ್ವರಂ ಶಾಸಕರಾಗಿಯೂ ಸೇವೆ ಸಲ್ಲಿಸಿದ್ದರು. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ, ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿಯೂ ಕಾರ್ಯನಿರ್ವಹಿಸಿದ್ದರು. ಇದನ್ನೂ ಓದಿ: ಉಗ್ರರಿಂದ ಪೊಲೀಸ್ ಅಧಿಕಾರಿಯ ಮನೆಗೆ ನುಗ್ಗಿ ಹತ್ಯೆ
ಇಂದು ಮಲ್ಲೇಶ್ವರಂನ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ಸಾರ್ವಜನಿಕ ವ್ಯವಸ್ಥೆಯನ್ನು ಮಾಡಲಾಗಿದೆ. ನಾಳೆ ಬೆಳಗ್ಗೆ ಅಂತಿಮ ವಿಧಿವಿಧಾನ ನಡೆಯಲಿದೆ. ಎಂ. ರಘುಪತಿ ಅಗಲಿಕೆಗೆ ರಾಜಕೀಯ ನಾಯಕರು ಸಂತಾಪವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: 2023ರ ಚುನಾವಣೆಗೆ ಬಿಜೆಪಿ ಸಜ್ಜು- ಕೋಟೆನಾಡಿಗೆ ಇಂದು ಜೆ.ಪಿ. ನಡ್ಡಾ ಭೇಟಿ

 
			
 
		 
		 
                                
                              
		