ಯಾದವ ಸಮಾಜವನ್ನ ಕಡೆಗಣಿಸಿತು; ಬಿಜೆಪಿ ತೊರೆಯಲು ಕಾರಣ ತಿಳಿಸಿದ ಪೂರ್ಣಿಮಾ ಶ್ರೀನಿವಾಸ್‌

Public TV
2 Min Read

ಚಿತ್ರದುರ್ಗ: ಹಿರಿಯೂರು ಕ್ಷೇತ್ರದ ಬಿಜೆಪಿ ಮಾಜಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್‌ (Poornima Srinivas) ಕಾಂಗ್ರೆಸ್‌ ಸೇರಲು ನಿರ್ಧರಿಸಿದ್ದಾರೆ. ಇದೇ ತಿಂಗಳ ಅ.20 ರಂದು ಸೇರ್ಪಡೆಯಾಗುವ ಸಾಧ್ಯತೆಗಳಿದ್ದು, ಈ ಬಗ್ಗೆ ಅಧಿಕೃತ ಹೇಳಿಕೆ ನೀಡಿದ್ದಾರೆ.

ಚಿತ್ರದುರ್ಗದ (Chitradurga) ಕೃಷ್ಣ ಯಾದವಾನಂದ ಮಠಕ್ಕೆ ಭೇಟಿ ನೀಡಿದ್ದ ಮಾಜಿ ಶಾಸಕಿ ಸಮಾಜದ ಮುಖಂಡರೊಂದಿಗೆ ಸಭೆ ನಡೆಸಿದ್ದಾರೆ. ಕೃಷ್ಣ ಯಾದವಾನಂದ ಶ್ರೀ ಸಮ್ಮುಖದಲ್ಲಿ ಸಮಾಜದ ಮುಖಂಡರೊಂದಿಗೆ ಕಾಂಗ್ರೆಸ್‌ (Congress) ಸೇರ್ಪಡೆ ಬಗ್ಗೆ ಚರ್ಚೆ ನಡೆಸಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ, ಬಿಜೆಪಿ ಪಕ್ಷ ತೊರೆಯಲು ಕಾರಣ ತಿಳಿಸಿದ್ದಾರೆ. ಇದನ್ನೂ ಓದಿ: 2023ರ ಜಿಡಿಪಿ ದರ: ಚೀನಾಗೆ ಮತ್ತೆ ಶಾಕ್‌-ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಬೆಳವಣಿಗೆ ದಾಖಲಿಸಲಿದೆ ಭಾರತ

ಅಕ್ಟೋಬರ್‌ 20ಕ್ಕೆ ಕಾಂಗ್ರೆಸ್‌ ಸೇರ್ಪಡೆ ಬಹುತೇಕ ನಿರ್ಧಾರವಾಗಿದೆ. ನಮ್ಮ ಸಮಾಜದ ಮುಖಂಡರ ಆಲೋಚನೆಯಂತೆ ಪಕ್ಷ ಬದಲಾವಣೆಗೆ ನಿರ್ಧಾರ ಮಾಡಿದ್ದೇನೆ. ಪತಿ ಡಿ.ಟಿ ಶ್ರೀನಿವಾಸ್‌ಗೆ ವಿಧಾನಪರಿಷತ್‌ ಸದಸ್ಯ ಸ್ಥಾನಕ್ಕೆ ಆಗ್ನೇಯ ಶಿಕ್ಷಕರ ಕ್ಷೇತ್ರದಿಂದ ಟಿಕೆಟ್‌ ನೀಡಲು ಕಾಂಗ್ರೆಸ್‌ ಪಕ್ಷ ನಿರ್ಧರಿಸಿದೆ. ಕೆಪಿಸಿಸಿ ಅಧ್ಯಕ್ಷರು ಈಗಾಗಲೇ ಪಕ್ಷದ ಟಿಕೆಟ್‌ ನೀಡಲು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಜಾತಿ, ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದೇನೆ: ಮಂತ್ರಿ ಸ್ಥಾನಕ್ಕೆ ದಲಿತ ನಾಯಕಿ ರಾಜೀನಾಮೆ

ಕಾಂಗ್ರೆಸ್ ಪಕ್ಷ ಸೇರಲು ನಾನು ಯಾವುದೇ ಬೇಡಿಕೆಯಿಟ್ಟಿಲ್ಲ. ಬಿಜೆಪಿಯಲ್ಲಿ ನನ್ನನ್ನು ಕಡೆಗಣಿಸಲಾಯಿತು ಎಂದು ಹೇಳುವುದಿಲ್ಲ. ನನ್ನ ಕ್ಷೇತ್ರಕ್ಕೆ ಮಾಜಿ ಸಿಎಂಗಳಾದ ಬಿ.ಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಹೆಚ್ಚಿನ ಅನುದಾನ ನೀಡಿದ್ದಾರೆ. ಆದ್ರೆ ನಮ್ಮ ಯಾದವ ಸಮಾಜದ ಕಡೆಗಣನೆಯಾಗಿದೆ. ಅನೇಕ ಯಾದವ ಸಮುದಾಯ ಭವನ, ಹಾಸ್ಟೆಲ್‌ ಕಾಮಗಾರಿಗಳು ಅರ್ಧಕ್ಕೆ ನಿಂತಿವೆ. ಈ ಹಿಂದೆ ಪ್ರಮಾಣ ವಚನ ಸ್ವೀಕರಿಸಬೇಕು ಎನ್ನುವ ಕೊನೇ ಕ್ಷಣದಲ್ಲಿ ನನಗೆ ಸಚಿವ ಸ್ಥಾನ ಕೈತಪ್ಪಿಸಲಾಗಿತ್ತು. ಆಗಲೂ ನಾನು ಪಕ್ಷದ ವಿರುದ್ಧ ಮಾತನಾಡಿರಲಿಲ್ಲ. ಇದೀಗ ಸಮಾಜದ ಮುಖಂಡರ ನಿರ್ಧಾರದಂತೆ ಪಕ್ಷ ಬದಲಾವಣೆ ಮಾಡುತ್ತಿದ್ದೇನೆ ಎಂದು ವಿವರಿಸಿದ್ದಾರೆ. ಇದನ್ನೂ ಓದಿ: ನಾಳೆ CWRC ಸಭೆ – ಈ ಬಾರಿ ತಮಿಳುನಾಡು ಬೇಡಿಕೆಯಿಟ್ಟ ನೀರಿನ ಪ್ರಮಾಣ ಎಷ್ಟು ಗೊತ್ತಾ?

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್