ಜಾಕ್ವೆಲಿನ್ ಕುತ್ತಿಗೆ ಮೇಲೆ ಲವ್ ಬೈಟ್ – ಫೋಟೋ ವೈರಲ್

Public TV
2 Min Read

ಮುಂಬೈ: ಬಾಲಿವುಡ್ ನಟಿ ಜಾಕ್ವೆಲಿನ್ ಫೆರ್ನಾಂಡಿಸ್ ಇತ್ತೀಚೆಗೆ ಹಲವು ವಿವಾದಗಳಲ್ಲಿ ಸಿಲುಕುತ್ತಿದ್ದಾರೆ. ಈಗ ಜಾಕ್ವೆಲಿನ್ ಕುತ್ತಿಗೆ ಮೇಲೆ ಲವ್ ಬೈಟ್ ಫೋಟೋ ಸೋಶಿಯಲ್ ಮಿಡಿಯಾದಲ್ಲಿ ಹರಿದಾಡುತ್ತಿದ್ದು, ಮತ್ತೆ ಸುದ್ದಿಯಾಗಿದ್ದಾರೆ.

ಈ ಹಿಂದೆ, ಸುಕೇಶ್ ಚಂದ್ರಶೇಖರ್ ಜೊತೆಗಿನ ಜಾಕ್ವೆಲಿನ್ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದವು. ಈಗ ಸುಕೇಶ್ ಜೊತೆಗಿನ ಮತ್ತೊಂದು ಫೋಟೋ ವೈರಲ್ ಆಗಿದ್ದು, ಈ ಫೋಟೋದಲ್ಲಿ ಜಾಕ್ವೆಲಿನ್ ಕುತ್ತಿಗೆ ಮೇಲೆ ಲವ್ ಬೈಟ್ ಇದೆ. ಸುಕೇಶ್ ಕೂಡ ಆಕೆಗೆ ಮುತ್ತು ನೀಡುತ್ತಿರುವಾಗಲೇ ಫೋಟೋವನ್ನು ಕ್ಲಿಕ್ ಮಾಡಲಾಗಿದೆ. ಇದನ್ನೂ ಓದಿ: ಅಭಿಮಾನಿ ಕೈಯಲ್ಲಿದ್ದ ಟ್ಯಾಟೂಗೆ ರಾಮ್ ಚರಣ್ ಬೌಲ್ಡ್

ಈ ಫೋಟೋ ನೋಡಿದ ನೆಟ್ಟಿಗರು ಇವರಿಬ್ಬರ ಮಧ್ಯೆ ಸಂಬಂಧವಿರುವುದು ಪಕ್ಕಾ ಎಂದು ಕಮೆಂಟ್ ಮಾಡುತ್ತಿದ್ದಾರೆ. 200 ಕೋಟಿ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಸುಕೇಶ್ ಚಂದ್ರಶೇಖರ್‌ನನ್ನು ಬಂಧಿಸಿದೆ. ಸುಕೇಶ್ ಜೊತೆ ಜಾಕ್ವೆಲಿನ್ ಫೆರ್ನಾಂಡಿಸ್ ಹಣಕಾಸಿನ ವಹಿವಾಟುಗಳನ್ನು ನಡೆಸಿರುವ ಪುರಾವೆಗಳನ್ನು ತನಿಖಾ ಸಂಸ್ಥೆ ಬಹಿರಂಗಪಡಿಸಿತ್ತು. ಇದಕ್ಕೆ ಸಂಬಂಧಿಸಿದಂತೆ ಇಡಿ ವಿಚಾರಣೆಗೆ ಹಾಜರಾಗುವಂತೆ ಜಾಕ್ವೆಲಿನ್ ಗೆ ಸಮನ್ಸ್ ಜಾರಿ ಮಾಡಿತ್ತು.

ಈ ವೇಳೆ ಆಕೆ, ನಾನು ಸುಕೇಶ್ ಜೊತೆ ಡೇಟಿಂಗ್ ಮಾಡುತ್ತಿಲ್ಲ. ಸುಕೇಶ್ ಚಂದ್ರಶೇಖರ್ ತನ್ನನ್ನು ಶೇಖರ್ ರತ್ನ ವೇಲ ಎಂದು ಪರಿಚಯಿಸಿಕೊಂಡಿದ್ದ. ಅಲ್ಲದೆ ತಮಿಳುನಾಡಿನ ಮಾಜಿ ಸಿಎಂ ದಿ.ಜೆ.ಜಯಲಲಿತಾ ಅವರ ರಾಜಕೀಯ ಕುಟುಂಬದಿಂದ ಬಂದವನು ಎಂದು ಹೇಳಿಕೊಂಡಿದ್ದ ಎಂದು ವಿವರಿಸಿದ್ದರು.

ನಟಿ ಜಾಕ್ವೆಲಿನ್ ಫೆನಾರ್ಂಡಿಸ್ ಸ್ನೇಹ ಬಳಸಲು ಅಮಿತ್ ಶಾ ಅವರ ಕಚೇರಿ ಸಂಖ್ಯೆಯನ್ನೇ ಹೋಲುವಂತಹ ಸಂಖ್ಯೆಯಿಂದ ಸುಕೇಶ್ ವಂಚನೆಯ ಕರೆಗಳನ್ನು ಮಾಡುತ್ತಿದ್ದ ಎಂದು ಇಡಿ ತನ್ನ ಆರೋಪ ಪಟ್ಟಿಯಲ್ಲಿ ತಿಳಿಸಿದೆ. ಇದನ್ನೂ ಓದಿ: ರೂಲ್ಸ್ ಬ್ರೇಕ್ – ರಥೋತ್ಸವದಲ್ಲಿ ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಶಾಸಕರು ಭಾಗಿ

ಫೆಬ್ರವರಿಯಿಂದ ಆಗಸ್ಟ್ 7 ರಂದು ಸುಕೇಶ್‍ನ ಬಂಧನವಾಗುವ ತನಕವೂ ಜಾಕ್ವೆಲಿನ್ ಮತ್ತು ಸುಕೇಶ್ ಸಂಪರ್ಕದಲ್ಲಿ ಇದ್ದರು. ಜಾಕ್ವೆಲಿನ್‍ಗೆ ಉಡುಗೊರೆಗಳಾಗಿ ಅರೇಬಿಯನ್ ಕುದುರೆ, ವಜ್ರದ ಕಿವಿಯೋಲೆಗಳು, ಐಷಾರಾಮಿ ಕಾರುಗಳು, ಒಂದು ಜೋಡಿ ಲೂಯಿ ವಿಟಾನ್ ಶೂಗಳು ಸುಕೇಶ್ ನೀಡಿದ್ದ.

ಈ ಕುರಿತು ಪ್ರತಿಕ್ರಿಯಿಸಿದ ಸುಕೇಶ್, ನಾನು ಜಾಕ್ವೆಲಿನ್ ನೊಂದಿಗೆ ಡೇಟಿಂಗ್ ಮಾಡುತ್ತಿದ್ದೇನೆ. ಅದಕ್ಕಾಗಿಯೇ ನಾನು ಅವರಿಗೆ ಉಡುಗೊರೆಗಳನ್ನು ನೀಡಿದ್ದೇನೆ. ಅದು ನನ್ನ ವೈಯಕ್ತಿಕ ವಿಚಾರ. ಈ ಪ್ರಕರಣಕ್ಕೂ ಆಕೆಗೂ ಯಾವುದೇ ಸಂಬಂಧವಿಲ್ಲ ಎಂದು ತಿಳಿಸಿದ್ದ.

Share This Article
Leave a Comment

Leave a Reply

Your email address will not be published. Required fields are marked *