ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ: ಈಶ್ವರಪ್ಪ

1 Min Read

ದಾವಣಗೆರೆ: ಬಿಜೆಪಿಗೆ (BJP) ಮರಳುವಂತೆ ಕಾರ್ಯಕರ್ತರು ಒತ್ತಾಯಿಸುತ್ತಿದ್ದಾರೆ ಎಂದು ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಕೆ.ಎಸ್‍ ಈಶ್ವರಪ್ಪ (K.S. Eshwarappa) ಹೇಳಿದ್ದಾರೆ.

ದಾವಣಗೆರೆಯ (Davanagere) ಹರಿಹರದ ಪಂಚಮಸಾಲಿ ಪೀಠದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ, ಬಿಜೆಪಿಗೆ ಮರಳುವ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಬಿಜೆಪಿಗೆ ಮರಳುವಂತೆ ಕಾರ್ಯಕರ್ತರಿಂದ ಒತ್ತಡ ಬರುತ್ತಿದೆ. ಪಕ್ಷದಲ್ಲಿ ಪರಿವರ್ತನೆ ಆಗಬೇಕು ಎಂದು ನಾನು ಹೊರಗೆ ಬಂದಿದ್ದೇನೆ. ಆ ಪರಿವರ್ತನೆ ಇವತ್ತಲ್ಲ ನಾಳೆ ಆಗುತ್ತೆ. ಬಿಜೆಪಿ ಕಾರ್ಯಕರ್ತರು ಪಕ್ಷದಲ್ಲಿ ಸಾಕಷ್ಟು ನೋವು ಅನುಭವಿಸುತ್ತಿದ್ದಾರೆ. ನನ್ನ ಮನಸ್ಸಲ್ಲೂ, ಯತ್ನಾಳ್‌ ಮನಸ್ಸಲ್ಲೂ ಇದೆ ವಿಚಾರ ಇದೆ ಎಂದಿದ್ದಾರೆ.

ನಮ್ಮ ಕುತ್ತಿಗೆ ಕೋಯ್ದರೂ ಹಿಂದುತ್ವ ಬಿಟ್ಟು ಬೇರೆ ಕಡೆ ಹೋಗಲ್ಲ. ಇವತ್ತಲ್ಲ ನಾಳೆ ಪಕ್ಷಕ್ಕೆ ಒಳ್ಳೆಯ ಸ್ಥಿತಿ ಬರುತ್ತೆ. ಬಿಜೆಪಿ ಪಾದಯಾತ್ರೆ ವಿಚಾರಕ್ಕೂ ನನಗೇನೂ ಸಂಬಂಧ ಇಲ್ಲ ಎಂದು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವಾಲ್ಮೀಕಿ ಭವನಕ್ಕೆ ವಿರೋಧ – ಸಮುದಾಯಗಳ ಮಧ್ಯೆ ಘರ್ಷಣೆ, ಕಲ್ಲು ತೂರಾಟ

ಶಿಡ್ಲಘಟ್ಟದಲ್ಲಿ ಮಹಿಳಾ ಅಧಿಕಾರಿಗೆ ಕಾಂಗ್ರೆಸ್ ಮುಖಂಡ ಅವಾಜ್ ಹಾಕಿರುವ ವಿಚಾರವಾಗಿ, ಕಾಂಗ್ರೆಸ್‌ನವರಿಗೆ ಮೈ ಮೇಲೆ ಜ್ಞಾನ ಇಲ್ಲ. ನಮ್ಮ ಸರ್ಕಾರ ಇದೆ ಎಂದು ಹೀಗೆ ಮಾಡ್ತಿದ್ದಾರೆ. ಅಧಿಕಾರದ ಮದ ಏರಿದಾಗ ಈ ರೀತಿ ಮಾಡ್ತಾರೆ. ರಾಜ್ಯದಲ್ಲಿ ಯಾವುದೇ ಮಹಿಳೆಯರಿಗೆ ಭದ್ರತೆ ಇಲ್ಲ. ಗೃಹ ಮಂತ್ರಿಗಳಿಗೆ ಹೇಳಿದ್ರೆ ಸಣ್ಣ ವಿಚಾರ ಬಿಡ್ರಿ ಅಂತಾರೆ. ಇಷ್ಟು ಹಗುರವಾಗಿ ತಗೆದುಕೊಳ್ಳುತ್ತಿದ್ದಾರೆ. ಅಧಿಕಾರ ಶಾಶ್ವತ ಎಂದುಕೊಂಡು ಈ ರೀತಿ ವರ್ತಿಸುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: ಬಳ್ಳಾರಿ ಬ್ಯಾನರ್‌ ಬಡಿದಾಟದ ವಿಡಿಯೋ ಇದ್ದಲ್ಲಿ ಸೆಂಡ್‌ ಮಾಡಿ – ಸಿಐಡಿ ಮನವಿ

Share This Article