ಮುಂಬೈ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ – ಇಬ್ಬರು ಕಾರ್ಮಿಕರು ಸಜೀವ ದಹನ

Public TV
1 Min Read

ಮುಂಬೈ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟಗೊಂಡ ಪರಿಣಾಮ ಇಬ್ಬರು ಕಾರ್ಮಿಕರು ಸಜೀವ ದಹನಗೊಂಡಿರುವ ಘಟನೆ ಮಹಾರಾಷ್ಟ್ರದ (Maharashtra) ನಾಗ್ಪುರ ಜಿಲ್ಲೆಯ ಕತೋಲ್ ತಾಲೂಕಿನ ಕಾರ್ಖಾನೆಯಲ್ಲಿ ನಡೆದಿದೆ.

ನಾಗ್ಪುರ ಜಿಲ್ಲಾ ಕೇಂದ್ರದಿಂದ ಸುಮಾರು 50 ಕಿ.ಮೀ ದೂರದಲ್ಲಿರುವ ಕೊತ್ವಾಲ್‌ಬುರ್ಡಿಯ ಏಷಿಯನ್ ಪೈರ್‌ವರ್ಕ್ಸ್ ಕಾರ್ಖಾನೆಯಲ್ಲಿ ಭಾನುವಾರ ಮಧ್ಯಾಹ್ನ 1:30ರ ಸುಮಾರಿಗೆ ಅವಘಡ ಸಂಭವಿಸಿದೆ.ಇದನ್ನೂ ಓದಿ:

ಈ ವೇಳೆ ಕಾರ್ಖಾನೆಯಲ್ಲಿ ಸುಮಾರು 31 ಕಾರ್ಮಿಕರು ಕೆಲಸ ಮಾಡುತ್ತಿದ್ದು, ಸ್ಫೋಟದಿಂದಾಗಿ ಇಬ್ಬರು ಕಾರ್ಮಿಕರು ಸಜೀವ ದಹನಗೊಂಡಿದ್ದಾರೆ.

ಈ ಕುರಿತು ನಾಗ್ಪುರ ಗ್ರಾಮೀಣ ಎಸ್ಪಿ ಹರ್ಷ್ ಎ ಪೊದ್ದಾರ್ ಮಾತನಾಡಿ, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, ಸ್ಫೋಟಕ್ಕೆ ನಿಖರ ಕಾರಣವೇನು ಎಂದು ತನಿಖೆಯ ನಂತರ ತಿಳಿದುಬರಲಿದೆ. ಸದ್ಯ ಬೆಂಕಿ ನಂದಿಸುವಲ್ಲಿ ನಿರತವಾಗಿದ್ದೇವೆ ಎಂದು ತಿಳಿಸಿದರು.

ಸ್ಥಳಕ್ಕೆ ನಾಗ್ಪುರ (Nagpura) ಗ್ರಾಮೀಣ ಹಿರಿಯ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ದಳ ಆಗಮಿಸಿದ್ದು, ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ:

Share This Article