ಪಟಾಕಿ ಗೋದಾಮಿನಲ್ಲಿ ಸ್ಫೋಟ – ಒಂದೇ ಕುಟುಂಬದ ನಾಲ್ವರು ಸೇರಿ 9 ಮಂದಿ ಸಾವು

By
1 Min Read

ಚೆನ್ನೈ: ತಮಿಳುನಾಡಿನ (Tamil Nadu) ಕೃಷ್ಣಗಿರಿ ಜಿಲ್ಲೆಯಲ್ಲಿ ಪಟಾಕಿ ಗೋದಾಮಿನಲ್ಲಿ (Firecracker Godown) ಸ್ಫೋಟ ಸಂಭವಿಸಿದ ಪರಿಣಾಮ ಕಟ್ಟಡ ಕುಸಿದು 9 ಮಂದಿ ದುರ್ಮರಣಕ್ಕೀಡಾಗಿದ್ದು, 15 ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಶನಿವಾರ ಬೆಳಗ್ಗೆ 9 ಗಂಟೆ ಸುಮಾರಿಗೆ ಈ ದಾರುಣ ಘಟನೆ ನಡೆದಿದೆ. ಮೃತರನ್ನು ಪಟಾಕಿ ಗೋದಾಮಿನ ಮಾಲೀಕ ರವಿ, ಅವರ ಪತ್ನಿ ಜಯಶ್ರೀ, ಪುತ್ರಿ ರುತಿಕ್ಕ ಮತ್ತು ಮಗ ರುತೀಶ್ ಎಂದು ಗುರುತಿಸಲಾಗಿದೆ. ಇದನ್ನೂ ಓದಿ: ಮಣಿಪುರದಲ್ಲಿ ಮಹಿಳೆಯರ ಬೆತ್ತಲೆ ಮೆರವಣಿಗೆ ಕೇಸ್‌ – ದೂರು ದಾಖಲಿಸಿಕೊಂಡು ತನಿಖೆ ಆರಂಭಿಸಿದ CBI

ಗೋದಾಮಿನ ಬಳಿ ರೆಸ್ಟೋರೆಂಟ್ ನಡೆಸುತ್ತಿದ್ದ ರಾಜೇಶ್ವರಿ, ವೆಲ್ಡಿಂಗ್ ಶಾಪ್ ಹೊಂದಿದ್ದ ಇಬ್ರಾಹಿಂ ಮತ್ತು ಇಬ್ರಾಹಿಂ, ವಾಟರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಸರಸು ಮತ್ತು ಜೇಮ್ಸ್ ಕೂಡ ಪ್ರಾಣ ಕಳೆದುಕೊಂಡಿದ್ದಾರೆ.

ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ದಳದ ಸಿಬ್ಬಂದಿ ಇದೀಗ ಕುಸಿದ ಕಟ್ಟಡದೊಳಗೆ ಸಿಲುಕಿರುವ ಜನರನ್ನು ರಕ್ಷಿಸುವ ಕಾರ್ಯಾಚರಣೆ ನಡೆಸುತ್ತಿದ್ದಾರೆ. ಅಲ್ಲದೇ ಕಟ್ಟಡದ ಅವಶೇಷಗಳನ್ನು ತೆರವುಗೊಳಿಸುತ್ತಿದ್ದಾರೆ. ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಕೃಷ್ಣಗಿರಿ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ರವಾನಿಸಲಾಗಿದೆ. ಇದನ್ನೂ ಓದಿ: ಸರ್ಕಾರಿ ಉದ್ಯೋಗಕ್ಕೆ ತರಬೇತಿ ನಡೆಸಿದ್ದ ಯುವತಿ -‌ ಕೊಲೆಗೆ 3 ದಿನಗಳ ಹಿಂದೆಯೇ ಸ್ಕೆಚ್‌ ಹಾಕಿದ್ದ ಪಾಪಿ ಪ್ರೇಮಿ!

ರಕ್ಷಣಾ ಕ್ರಮವನ್ನು ಪರಿಶೀಲಿಸುತ್ತಿರುವ ಜಿಲ್ಲಾಧಿಕಾರಿ ಕೆ.ಎಂ.ಸರಯೂ ಅವರು, ಅವಘಡದಲ್ಲಿ ಗಾಯಗೊಂಡ 15 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇನ್ನು 5 ಮಂದಿ ಅವಶೇಷಗಳೊಳಗೆ ಸಿಲುಕಿದ್ದು, ಓರ್ವ ವ್ಯಕ್ತಿಯನ್ನು ಜೀವಂತವಾಗಿ ರಕ್ಷಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್