ರಾತ್ರಿ ವಿಮಾನಗಳು ಹಾರಾಡುತ್ತಿದ್ದು, ಶಬ್ಧ ಕೇಳಿ ಭಯದಲ್ಲಿ ನಿದ್ದೆ ಬಂದಿಲ್ಲ- ಪ್ರತ್ಯಕ್ಷದರ್ಶಿ

Public TV
2 Min Read

ನವದೆಹಲಿ: ಜಮ್ಮು-ಕಾಶ್ಮೀರದ ಪುಲ್ವಾಮಾ ದಾಳಿಗೆ ಪ್ರತಿಕಾರವಾಗಿ ಭಾರತೀಯ ಸೇನೆ ಇಂದು ಪಾಕ್ ನಲ್ಲಿರುವ ಉಗ್ರರ ಕ್ಯಾಂಪ್ ಗಳ ಮೇಲೆ ಬಾಂಬ್ ದಾಳಿ ನಡೆಸಿದೆ. ಸರ್ಜಿಕಲ್ ಸ್ಟ್ರೈಕ್ ಕುರಿತು ಗಡಿಭಾಗದ ಜನರು ರಾಷ್ಟ್ರೀಯ ಮಾಧ್ಯಮದ ಜೊತೆ ಮಾತನಾಡಿದ್ದಾರೆ.

ರಾತ್ರಿಯಿಡೀ ವಿಮಾನಗಳು ಹಾರಾಟ ನಡೆಸುತ್ತಿದ್ದವು. ಅಲ್ಲದೇ ಒಂದು ಬಾರಿ ದೊಡ್ಡ ಶಬ್ದ ಕೇಳ್ಪಟ್ಟಿತ್ತು. ಆ ಬಳಿಕ ನಮಗೆ ಭಯವಾಗಲು ಆರಂಭವಾಯಿತು, ಯಾಕಂದ್ರೆ ನಾವು ಗಡಿಭಾಗದಲ್ಲಿ ವಾಸಿಸುತ್ತಿದ್ದೇವೆ. ಹೀಗಾಗಿ ಹೆದರಿ ನಿದೆಯಲ್ಲಿದ್ದ ನಾವು ಎದ್ದು ಕುಳಿತೆವು. ಮಧ್ಯರಾತ್ರಿ 3 ಗಂಟೆಯ ನಂತರ ನಾವು ನಿದ್ದೆಯೇ ಮಾಡಲಿಲ್ಲ. ಬಾಂಬ್ ದಾಳಿಯಾಗುತ್ತಿರುವುದು ನಮಗೆ ಕಾಣಿಸಿದ್ದು, ಶಬ್ಧವೂ ಕೇಳಿಸಿದೆ ಎಂದು ಪ್ರತ್ಯಕ್ಷದರ್ಶಿ ಅಬ್ದುಲ್ ರೆಹಮಾನ್ ತಿಳಿಸಿದ್ದಾರೆ.

ನರೇಂದ್ರ ಕುಮಾರ್

ಪೂಂಛ್ ಜಿಲ್ಲೆಯ ಮೆಂಧಾರ್ ನಿವಾಸಿ ನರೇಂದ್ರ ಕುಮಾರ್ ಮಾತನಾಡಿ, ಮುಂಜಾನೆ 3 ಗಂಟೆಯ ಸುಮಾರಿಗೆ ವಿಮಾನಗಳು ಹಾರಾಡುತ್ತಿರುವ ಶಬ್ಧ ಕೇಳಿಸಿದೆ. ಈ ಶಬ್ಧ ಬೆಳಗ್ಗೆ 7 ಗಂಟೆಯವರೆಗೂ ನಮಗೆ ಕೇಳಿಸಿದೆ. ಆದ್ರೆ 8 ಗಂಟೆ ಸುಮಾರಿಗೆ ಭಾರತ ಪಾಕ್ ಮೇಲೆ ಸರ್ಜಿಕಲ್ ದಾಳಿ ನಡೆಸಿರುವ ಕುರಿತು ಮಾಹಿತಿ ಸಿಕ್ಕಿತು ಅಂದ್ರು. ಇನ್ನೂ ಓದಿ: ರಾತ್ರಿ ವಿಮಾನಗಳ ಶಬ್ಧ ಹೆಚ್ಚಿತ್ತು, ದಿಢೀರ್ ಒಂದು ಶಬ್ಧ ಬಂತು – ಬಾಲಕೋಟ್ ನಿವಾಸಿಗಳ ಪ್ರತಿಕ್ರಿಯೆ

ಇದೇ ಗ್ರಾಮದ ರಾಜಾ ಮೊಹಮ್ಮದ್ ಶರೀಫ್, ಮುಂಜಾನೆ 3.30ರ ಸುಮಾರಿಗೆ ವಿಮಾನಗಳು ಹಾರಾಟ ನಡೆಸುತ್ತಿರುವ ಶಬ್ಧ ಕೇಳಲ್ಪಟ್ಟೆ. ಅಲ್ಲದೇ ಬಾಂಬ್ ದಾಳಿಯಾಗಿರುವ ಸೌಂಡ್ ಕೂಡ ಕೇಳಿಸಿದೆ. ಭಾರತೀಯ ಸೇನೆ ತೆಗೆದುಕೊಂಡಿರುವ ಕ್ರಮದ ಬಗ್ಗೆ ನಮಗೆ ಖುಷಿ ಇದೆ. ಈ ಮೂಲಕ ನಮ್ಮ ಯೋಧರ ಬಲಿದಾನ ವ್ಯರ್ಥವಾಗಿಲ್ಲ ಎಂಬುದನ್ನು ಅರಿತುಕೊಳ್ಳಬೇಕು ಎಂದು ಅವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ರು.

ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಪಾಕ್ ಉಗ್ರ ನಡೆಸಿದ ಆತ್ಮಾಹುತಿ ದಾಳಿ ನಡೆಸಿ 40 ಯೋಧರನ್ನು ಬಲಿತೆಗೆದುಕೊಂಡ 12ನೇ ದಿನಕ್ಕೆ ಭಾರತ ಪಾಕಿಸ್ತಾನಕ್ಕೆ ತಕ್ಕ ಪಾಠ ಕಲಿಸಿದೆ. ಗಡಿ ಭಾಗದಲ್ಲಿ ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು, 21 ನಿಮಿಷದಲ್ಲಿ ಮೂರು ಉಗ್ರರ ತರಬೇತಿ ಶಿಬಿರಗಳ ಮೇಲೆ ದಾಳಿ ನಡೆಸಿದೆ. ಈ ದಾಳಿಯಲ್ಲಿ ಸುಮಾರು 200-300 ಉಗ್ರರು ಸಾವನ್ನಪ್ಪಿದ್ದಾರೆ ಎಂಬ ಮಾಹಿತಿ ಸದ್ಯಕ್ಕೆ ಲಭ್ಯವಾಗಿದೆ. ಮೊದಲಿಗೆ ಮುಂಜಾನೆ 3.45ರ ಸುಮಾರಿಗೆ ಬಾಲ್‍ಕೋಟ್ ಮೇಲೆ ದಾಳಿ ಮಾಡಿದೆ. ಬಳಿಕ ಮುಂಜಾನೆ 3.48ಕ್ಕೆ ಮುಜಾಫರಾಬಾದ್ ಮೇಲೆ ದಾಳಿ ಮಾಡಲಾಗಿದೆ. ಕೊನೆಗೆ ಮುಂಜಾನೆ 3.58ಕ್ಕೆ ಚಕೋಟಿ ಉಗ್ರರ ತರಬೇತಿ ಕೇಂದ್ರಗಳ ಮೇಲೆ ಭಾರತೀಯ ವಾಯುಸೇನೆ ದಾಳಿ ಮಾಡಿದೆ.

ಭಾರತೀಯ ವಾಯುಸೇನೆ ಏರ್ ಸರ್ಜಿಕಲ್ ಸ್ಟ್ರೈಕ್‍ಗಾಗಿ ಮಿರಾಜ್-2000 ಹೆಸರಿನ 12 ಜೆಟ್ ವಿಮಾನಗಳನ್ನು ಬಳಸಿಕೊಳ್ಳಲಾಗಿದೆ. ಕಾರ್ಗಿಲ್ ಯುದ್ಧದಲ್ಲಿ ನಿರ್ಣಾಯಕ ಪಾತ್ರ ವಹಿಸಿದ್ದ ಮಿರಾಜ್-2000, ಏಕಕಾಲಕ್ಕೆ 1000 ಕೆ.ಜಿ ಲೇಸರ್ ಗೈಡೆಡ್ ಬಾಂಬ್ ಹಾಕಬಹುದಾದ ಸಾಮಥ್ರ್ಯ ಹೊಂದಿದೆ. ಹೀಗಾಗಿ ಈ ವಿಮಾನಕ್ಕೆ ಭಾರತೀಯ ವಾಯು ಸೇನೆ `ವಜ್ರ’ ಎಂದು ಹೆಸರಿಟ್ಟಿದೆ. ಸದ್ಯ ದೇಶದ ಗಡಿ ಭಾಗ, ವಾಯುನೆಲೆಗಳಲ್ಲಿ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *