ಒಂದೇ ದಿನ ರಾಜ್ಯದ 7 ಜಿಲ್ಲೆಗಳಿಗೆ ಹುಸಿ ಬಾಂಬ್ ಬೆದರಿಕೆ

1 Min Read

ಬೆಂಗಳೂರು: ರಾಜ್ಯದಲ್ಲಿ ಒಂದೇ ದಿನ ಹಲವು ಕಡೆ ಹುಸಿ ಬಾಂಬ್ ಇ-ಮೇಲ್ ಬಂದಿದ್ದು, ಆತಂಕ ಸೃಷ್ಟಿಸಿದೆ. ಬೆಂಗಳೂರು, ಮೈಸೂರು, ಹಾಸನ, ಬಾಗಲಕೋಟೆ, ಗದಗ, ಧಾರವಾಡ, ಹಾಸನ ಸೇರಿ 7 ಜಿಲ್ಲೆಗಳಿಗೆ ಬಾಂಬ್ ಬೆದರಿಕೆ (Bomb Threat) ಬಂದಿದೆ.

ಬೆಂಗಳೂರಿನ ಲಾಲ್‌ಬಾಗ್ ರಸ್ತೆಯಲ್ಲಿರುವ ಪಾಸ್‌ಪೋರ್ಟ್ ಕಚೇರಿ ಹಾಗೂ ಕೋರಮಂಗಲ ಬಳಿಯ ಪಾಸ್‌ಪೋರ್ಟ್ ಕಚೇರಿಗೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ ಸಂದೇಶ ಕಳುಹಿಸಲಾಗಿದೆ. ಹೀಗಾಗಿ, ಪಾಸ್‌ಪೋರ್ಟ್ ಕಚೇರಿ ಬಂದ್ ಮಾಡಲಾಯ್ತು. ಇತ್ತ, ಮೈಸೂರಿನ ಹಳೆ ಕೋರ್ಟ್, ಬಾಗಲಕೋಟೆ ಜಿಲ್ಲಾ ನ್ಯಾಯಾಲಯ ಹಾಗೂ ಧಾರವಾಡ ನ್ಯಾಯಾಲಯಕ್ಕೂ ಇ-ಮೇಲ್ ಮೂಲಕ ಬಾಂಬ್ ಬೆದರಿಕೆಯ ಸಂದೇಶ ಬಂದಿದ್ದು, ತಪಾಸಣೆ ನಡೆಸಲಾಗಿದೆ.ಇದನ್ನೂ ಓದಿ: ಬೆಂಗ್ಳೂರಿನ ಪಾಸ್‌ಪೋರ್ಟ್ ಕಚೇರಿಗೆ ಬಾಂಬ್ ಬೆದರಿಕೆ ಮೇಲ್

ಇನ್ನು, ಬಾಗಲಕೋಟೆ ಜಿಲ್ಲಾ ನ್ಯಾಯಾಲಯಕ್ಕೂ ಮಧ್ಯಾಹ್ನ ಇ-ಮೇಲ್ ಮೂಲಕ ಬೆದರಿಕೆಯ ಸಂದೇಶ ಬಂದಿದೆ. ನಿಮ್ಮ ಜಿಲ್ಲಾ ನ್ಯಾಯಾಲಯದ ಕ್ರಿಟಿಕಲ್ ಸ್ಥಳಗಳಲ್ಲಿ ಬಾಂಬ್ ಇಟ್ಟಿದ್ದೇವೆ, ಮಧ್ಯಾಹ್ನದ ಊಟದ ಅವಧಿಯಲ್ಲಿ ಸ್ಫೋಟ ಮಾಡುತ್ತೇವೆ ಎಂಬ ಎಚ್ಚರಿಕೆ ನೀಡಲಾಗಿತ್ತು. ಗದಗ ಜಿಲ್ಲಾ ನ್ಯಾಯಾಲಯಕ್ಕೂ ಬೆದರಿಕೆ ಬಂದಿದ್ದು, ಪರಿಶೀಲನೆ ನಡೆಸಿದ ಎಸ್‌ಪಿ ತಮಿಳುನಾಡು ಮೂಲದಿಂದ ಬಂದಿರುವ ಶಂಕೆ ವ್ಯಕ್ತವಾಗಿದೆ ಎಂದಿದ್ದಾರೆ.

ಸದ್ಯ ಎಲ್ಲವೂ ಹುಸಿ ಬಾಂಬ್ ಬೆದರಿಕೆ ಆಗಿದ್ದು, ಪೊಲೀಸರು ಹಾಗೂ ಬಾಂಬ್ ಸ್ಕಾ÷್ವಡ್ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಇದನ್ನೂ ಓದಿ: ವಿಮಾನ ನಿಲ್ದಾಣದಲ್ಲಿ ಹೊಸ ಪಾರ್ಕಿಂಗ್ ನಿಯಮದಿಂದ ಟ್ಯಾಕ್ಸಿ ಚಾಲಕರಿಗೆ ಸಮಸ್ಯೆ; ಯಥಾಸ್ಥಿತಿ ಕಾಯ್ದುಕೊಳ್ಳಲು ಸಂಸದ ಸುಧಾಕರ್‌ ಸೂಚನೆ

Share This Article