Kolar | ಮಾವಿನ ಹಣ್ಣಿಗೆ ಬೆಲೆ ಕುಸಿತ – ಇಂದು ಶ್ರೀನಿವಾಸಪುರ ತಾಲೂಕು ಬಂದ್

Public TV
1 Min Read

-ರಸ್ತೆಯಲ್ಲಿ ಮಾವು ಸುರಿದು ರೈತರ ಆಕ್ರೋಶ

ಕೋಲಾರ: ಹಣ್ಣುಗಳ ರಾಜ ಮಾವಿನ ಹಣ್ಣಿಗೆ (Mango) ಬೆಲೆ ಕುಸಿದ ಹಿನ್ನೆಲೆ ಇಂದು ಕೋಲಾರದ (Kolar) ಶ್ರೀನೀವಾಸಪುರ (Srinivaspur) ತಾಲೂಕು ಬಂದ್‌ಗೆ ಕರೆ ನೀಡಲಾಗಿದೆ.

ಮಾವು ಬೆಳೆಗೆ ಬೆಂಬಲ ಬೆಲೆ ನೀಡುವಂತೆ ಆಗ್ರಹಿಸಿ ಬಂದ್‌ಗೆ ಕರೆ ನೀಡಿದ್ದು, ಮಾವು ಬೆಳೆಗಾರರರು ಸೇರಿದಂತೆ ವಿವಿಧ ಸಂಘಟನೆಗಳು ಬಂದ್‌ಗೆ ಸಾಥ್ ಕೊಟ್ಟಿವೆ. ಮಾವು ಬೆಳೆಗೆ ಬೆಲೆ ಕುಸಿತ ಹಿನ್ನೆಲೆ ಕಂಗಾಲಾಗಿರುವ ಮಾವು ಬೆಳೆಗಾರರು, ಆಂದ್ರಪ್ರದೇಶ ಮಾದರಿಯಲ್ಲಿ ರಾಜ್ಯ ಸರ್ಕಾರ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಬಂದ್‌ಗೆ ಕರೆ ಕೊಡಲಾಗಿದೆ. ಮಾವು ಬೆಳೆಗಾರರ ಬಂದ್‌ಗೆ ಬಿಜೆಪಿ, ಜೆಡಿಎಸ್ ಸೇರಿ ಹಲವು ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ. ಒಂದು ಟನ್ ಮಾವು 3 ರಿಂದ 4 ಸಾವಿರ ರೂ.ಗೆ ಮಾರಾಟ ಮಾಡಲಾಗುತ್ತಿದೆ. ಸರ್ಕಾರ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಲಾಗಿದೆ. ಇದನ್ನೂ ಓದಿ: ತಾಂತ್ರಿಕ ದೋಷ – ಶುಭಾಂಶು ಶುಕ್ಲಾ ಬಾಹ್ಯಾಕಾಶ ಯಾತ್ರೆ ಮುಂದೂಡಿಕೆ

ಇನ್ನು ಶ್ರೀನಿವಾಸಪುರದಲ್ಲಿ ಮಾವು ರಸ್ತೆಯಲ್ಲಿ ಸುರಿದು ರೈತರು ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಶ್ರೀನಿವಾಸಪುರದ ಬಸ್ ನಿಲ್ದಾಣದಲ್ಲಿ ಮಾವು ರಸ್ತೆಯಲ್ಲಿ ಸುರಿದು ಪ್ರತಿಭಟನೆ ನಡೆಸಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ. ಇದನ್ನೂ ಓದಿ: ಭಾರತದ ಜೊತೆ ಸಂಘರ್ಷ ನಡೆಸಿದ್ದ ಮಾಲ್ಡೀವ್ಸ್‌ ಪ್ರವಾಸೋದ್ಯಮಕ್ಕೆ ಕತ್ರಿನಾ ಕೈಫ್‌ ರಾಯಭಾರಿ

Share This Article