ವಾಷಿಂಗ್ಟನ್: ಏರ್ ಇಂಡಿಯಾ ದುರಂತದಲ್ಲಿ (Air India Crash) ಮೃತಪಟ್ಟ ಬ್ರಿಟನ್ (Britain) ಪ್ರಜೆಗಳ ಕುಟುಂಬಸ್ಥರು ಅಮೆರಿಕ (America) ಹಾಗೂ ಬ್ರಿಟನ್ನ (Britain) ನ್ಯಾಯಾಲಯದಲ್ಲಿ (Court) ವಿಮಾನಯಾನ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.
ಜೂ.12 ರಂದು ಅಹಮದಾಬಾದ್ನಲ್ಲಿ (Ahmedabad) ಟೇಕಾಫ್ ಆದ ಕೆಲವೇ ಕ್ಷಣಗಳಲ್ಲಿ ಬೋಯಿಂಗ್ 787-8 ಡ್ರೀಮ್ಲೈನರ್ ವಿಮಾನ ಅಪಘಾತಕ್ಕೆ ಈಡಾಗಿತ್ತು. ಈ ವಿಮಾನದಲ್ಲಿದ್ದ 242 ಜನರಲ್ಲಿ 241 ಜನ ಮೃತಪಟ್ಟು, ಒಬ್ಬರು ಮಾತ್ರ ಬದುಕುಳಿದಿದ್ದರು. ಈ ದುರಂತದಲ್ಲಿ 53 ಬ್ರಿಟನ್ ಪ್ರಜೆಗಳು ಮೃತಪಟ್ಟಿದ್ದರು. ಈ ಅವಘಡಕ್ಕೆ ಸಂಬಂಧಿಸಿದಂತೆ ಅಮೆರಿಕ ಮತ್ತು ಬ್ರಿಟನ್ನ ಕಾನೂನು ತಂಡಗಳು ಎರಡೂ ದೇಶಗಳಲ್ಲೂ ಮೊಕದ್ದಮೆ ಹೂಡಲು ಸಿದ್ಧತೆ ನಡೆಸುತ್ತಿವೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: Air India Plane crash | ಡೇಟಾ ರಿಕವರಿಗಾಗಿ ಬ್ಲ್ಯಾಕ್ ಬಾಕ್ಸ್ ಅಮೆರಿಕಕ್ಕೆ ರವಾನೆ
ಅಂತಾರರಾಷ್ಟ್ರೀಯ ಕಾನೂನು ತಂಡಗಳು ಅಪಘಾತದಲ್ಲಿ ಮೃತಪಟ್ಟ ಬ್ರಿಟನ್ ಪ್ರಯಾಣಿಕರ ಕುಟುಂಬಗಳೊಂದಿಗೆ ಮಾತುಕತೆ ನಡೆಸುತ್ತಿವೆ. ಎಲ್ಲಾ ಪುರಾವೆಗಳನ್ನು ಸೂಕ್ಷ್ಮವಾಗಿ ಪರಿಶೀಲಿಸಲಾಗುತ್ತಿದೆ. ಲಂಡನ್ನ ಹೈಕೋರ್ಟ್ನಲ್ಲಿ ಏರ್ ಇಂಡಿಯಾ ವಿರುದ್ಧ ಪ್ರಕರಣ ಹಾಗೂ ಅಮೆರಿಕದಲ್ಲಿ ಬೋಯಿಂಗ್ ವಿರುದ್ಧ ಮೊಕದ್ದಮೆ ಹೂಡಲು ಸಿದ್ಧತೆ ನಡೆದಿದೆ ಎನ್ನಲಾಗಿದೆ.
ಈ ಬಗ್ಗೆ ಅಭಿಪ್ರಾಯ ಹಂಚಿಕೊಂಡಿರುವ ಕಾನೂನು ತಜ್ಞರು, ಈ ದೇಶಗಳಲ್ಲಿನ ನ್ಯಾಯಾಲಯಗಳು ಸಾಮಾನ್ಯವಾಗಿ ಮೊಕದ್ದಮೆಗಳನ್ನು ಸಲ್ಲಿಸುವ ಜನರಿಗೆ ಹೆಚ್ಚು ಬೆಂಬಲ ನೀಡುತ್ತವೆ. ಈ ಪ್ರಕರಣಗಳು ನ್ಯಾಯವ್ಯಾಪ್ತಿಯ ಸಮಸ್ಯೆಗಳಿಂದಾಗಿ ವಿಳಂಬ ಆಗಬಹುದು ಎಂದು ಹೇಳಿದ್ದಾರೆ.
ಪತನಗೊಂಡ ವಿಮಾನದಲ್ಲಿ 169 ಭಾರತೀಯ ಪ್ರಯಾಣಿಕರು, 53 ಬ್ರಿಟನ್, 7 ಪೋರ್ಚುಗೀಸ್ ಮತ್ತು ಒಬ್ಬ ಕೆನಡಾದ ಪ್ರಯಾಣಿಕರಿದ್ದರು. ಅಲ್ಲದೇ 12 ಸಿಬ್ಬಂದಿ ಇದ್ದರು. ಈ ದುರಂತದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿಯವರು ಸಾವಿಗೀಡಾಗಿದ್ದರು.
ಇದೆಲ್ಲದರ ನಡುವೆ ವಿಮಾನ ಉತ್ತಮವಾಗಿ ನಿರ್ವಹಣೆ ಮಾಡಲಾಗಿತ್ತು. ಪೈಲಟ್ಗಳಿಗೆ ಸಾಕಷ್ಟು ಅನುಭವವಿತ್ತು ಎಂದು ವಿಮಾನಯಾನ ಸಂಸ್ಥೆ ಹೇಳಿಕೊಂಡಿದೆ. ಇದನ್ನೂ ಓದಿ: ವಿಮಾನ ದುರಂತವಾಗಿ ದಿನಗಳೂ ಕಳೆದಿರಲಿಲ್ಲ – ಪಾರ್ಟಿ ಮೂಡ್ನಲ್ಲಿದ್ದ ಉದ್ಯೋಗಿಗಳ ವಜಾಗೊಳಿಸಿದ Air India ವೆಂಚರ್