ಛೀ… 5 ವರ್ಷದ ಪುಟ್ಟ ಕಂದಮ್ಮನನ್ನೂ ಬಿಡಲಿಲ್ಲ ಪಾಪಿ..!

Public TV
1 Min Read

ಭುವನೇಶ್ವರ್: ಐದು ವರ್ಷದ ಪುಟ್ಟ ಬಾಲಕಿಯನ್ನ ಚಾಲಕ ಅತ್ಯಾಚಾರ ಮಾಡಿದ ಘಟನೆ ಒಡಿಶಾದ ಪುರಿ ಪಟ್ಟಣದಲ್ಲಿ ಬೆಳಕಿಗೆ ಬಂದಿದೆ.

ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ಯಾರೂ ಇಲ್ಲದಿರುವುದನ್ನು ಗಮನಿಸಿ, ಬಾಲಕಿಯನ್ನು ಮನೆಯ ಟೆರೇಸ್‍ಗೆ ಕರೆದುಕೊಂಡು ಹೋಗಿ ಅತ್ಯಾಚಾರವೆಸಗಿದ್ದಾನೆ. ಮನೆಗೆ ಬಂದ ಬಾಲಕಿಯ ಅಮ್ಮ ಮಗಳ ಕಿರುಚಾಟವನ್ನು ಕೇಳಿ ಟೆರೇಸ್ ಗೆ ಹೋಗಿ ನೋಡಿದಾಗ ಕೃತ್ಯ ಬೆಳಕಿಗೆ ಬಂದಿದೆ. ಆದರೆ ಅಲ್ಲಿಂದ ಆರೋಪಿ ತಪ್ಪಿಸಿಕೊಂಡಿದ್ದಾನೆ. ಇದನ್ನೂ ಓದಿ: ಪುಷ್ಪ ಸಿನಿಮಾ ನೋಡಿ 24 ವರ್ಷದ ಯುವಕನ ಬರ್ಬರ ಹತ್ಯೆ – ಮೂವರು ಅರೆಸ್ಟ್

ಬಾಲಕಿ ಪ್ರಸ್ತುತ ಕಟಕ್‍ನ ಎಸ್‍ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಜೀವನ್ಮರಣ ಹೋರಾಟ ನಡೆಸುತ್ತಿದ್ದಾಳೆ.

ಈ ಕುರಿತು ಮಾಹಿತಿ ನೀಡಿದ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಸಿಂಗ್, ಬಾಲಕಿಯ ಕುಟುಂಬಕ್ಕೆ ಪರಿಚಯವಿದ್ದ ವ್ಯಕ್ತಿಯೇ ಈ ಕೃತ್ಯವನ್ನ ಮಾಡಿದ್ದಾನೆ. ಆತ ಡ್ರೈವರ್ ವೃತ್ತಿ ಮಾಡುತ್ತಿದ್ದ ಎಂದು ಕುಟುಂಬದವರು ತಿಳಿಸಿದ್ದಾರೆ. ಬಾಲಕಿಯನ್ನು ಪುರಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಆಕೆಯ ಸ್ಥಿತಿ ಚಿಂತಜನಕವಾದ್ದರಿಂದ ಕಟಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ತಿಳಿಸಿದರು ಇದನ್ನೂ ಓದಿ: ಅಖಿಲೇಶ್ ಆಡಳಿತದಲ್ಲಿ ಗಲಭೆ, ಗೂಂಡಾಗಿರಿ, ವಲಸೆ ಹೆಚ್ಚಿತ್ತು: ಕೇಶವ್ ಪ್ರಸಾದ್ ಮೌರ್ಯ

ಆರೋಪಿಯನ್ನು ಬಂಧಿಸಲು ನಾಲ್ಕು ಪ್ರತ್ಯೇಕ ತಂಡಗಳನ್ನು ರಚಿಸಲಾಗಿದೆ. ಆರೋಪಿ ಜಗತ್‍ಸಿಂಗ್‍ಪುರ ಜಿಲ್ಲೆಯವನು ಎಂದು ತಿಳಿದುಬಂದಿದೆ. ಐಪಿಸಿ ಮತ್ತು ಪೋಕ್ಸೊ ಕಾಯ್ದೆಯ ಸಂಬಂಧಿತ ಸೆಕ್ಷನ್‍ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *