ಖ್ಯಾತ ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ ಪ್ರಕಟ

Public TV
1 Min Read

ನ್ನಡವೂ ಸೇರಿದಂತೆ ನಾನಾ ಭಾಷೆಗಳಲ್ಲಿ ನಟಿಸಿರುವ ಬಾಲಿವುಡ್ ನಟಿ ಜಯಪ್ರದಾ (Jayaprada) ಅವರಿಗೆ ಚೆನ್ನೈನ (Chennai) ಎಗ್ಮೋರ್ ನ್ಯಾಯಾಲಯವು ಆರು ತಿಂಗಳ ಕಾಲ ಜೈಲು ಶಿಕ್ಷೆ  ಪ್ರಕಟಿಸಿದೆ. ನಟಿಯ ವಿರುದ್ಧ ಸರಕಾರದ ಲೇಬರ್ ಇನ್ಶುರೆನ್ಸ್ ಕಾರ್ಪೋರೇಷನ್ ನ್ಯಾಯಾಲಯದಲ್ಲಿ ದೂರು ದಾಖಲಿಸಿತ್ತು. ಈ ಪ್ರಕರಣದಲ್ಲಿ ಜಯಪ್ರದಾಗೆ ಸೋಲಾಗಿದೆ.

ಭಾರತೀಯ ಸಿನಿಮಾ ರಂಗದಲ್ಲಿ ಖ್ಯಾತ ನಟಿಯಾಗಿ ಗುರುತಿಸಿಕೊಂಡಿರುವ ಜಯಪ್ರದಾ, ಸಿನಿಮಾ ಪ್ರದರ್ಶಕಿಯೂ ಹೌದು. ಚೆನ್ನೈನಲ್ಲೇ ಇವರ ಹೆಸರಿನಲ್ಲಿ ಎರಡು ಚಿತ್ರಮಂದಿರಗಳಿವೆ. ಈ ಎರಡು ಚಿತ್ರ ಮಂದಿರಗಳಲ್ಲಿ ಅನೇಕ ಕಾರ್ಮಿಕರು ಕೆಲಸ ಮಾಡುತ್ತಿದ್ದಾರೆ. ಈ ಕಾರ್ಮಿಕರ ಇ.ಎಸ್.ಐ ಹಣವನ್ನು ಕಡಿತ ಮಾಡಿಕೊಂಡು ಕಾರ್ಮಿಕ ಇಲಾಖೆಗೆ ಅದನ್ನು ಪಾವತಿಸಿಲ್ಲ ಎನ್ನುವ ಕಾರಣಕ್ಕಾಗಿ ದೂರು ನೀಡಲಾಗಿತ್ತು.

ಈಗಾಗಲೇ ಅವರು ಮಾಲೀಕರಾಗಿರುವ ಆ ಎರಡೂ ಚಿತ್ರಮಂದಿರಗಳ ಮೇಲೆ ಕೇಸ್ ದಾಖಲಾಗಿದೆ. ಆಸ್ತಿ ತೆರಿಗೆಯನ್ನು ಕಟ್ಟದೇ ಇರುವ ಕಾರಣಕ್ಕಾಗಿ ಜಪ್ತಿ ಕೂಡ ಮಾಡಲಾಗಿದೆ. ಆದರೂ ಇ.ಎಸ್.ಐ ಕಟ್ ಮಾಡಿಯೂ ಕಾರ್ಮಿಕ ಇಲಾಖೆಗೆ ಅವರು ಪಾವತಿ ಮಾಡಿರಲಿಲ್ಲ ಎನ್ನುವುದು ಅಧಿಕಾರಿಗಳ ಆರೋಪವಾಗಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್