ಸಾಹಸಸಿಂಹ ಡಾ.ವಿಷ್ಣುವರ್ಧನ್ 69ನೇ ಜನ್ಮ ದಿನಾಚರಣೆ- ನೆಲಮಂಗಲ ವಿಷ್ಣು ಸೇನಾ ಸಂಸ್ಥೆಯಿಂದ ಆಚರಣೆ

Public TV
1 Min Read

ಬೆಂಗಳೂರು: ಸಾಹಸಸಿಂಹ ಅಭಿನವ ಭಾರ್ಗವ ಡಾ. ವಿಷ್ಣುವರ್ಧನ್ ಅವರ 69ನೇ ಜನ್ಮ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಅಭಿಮಾನಿಗಳು ಆಚರಿಸಿದರು.

ಬೆಂಗಳೂರು ಹೊರವಲಯ ನೆಲಮಂಗಲ ಪಟ್ಟಣದ ಹೊನ್ನಗಂಗಯ್ಯನ ಪಾಳ್ಯದಲ್ಲಿ ವಿಷ್ಣು ಸೇವಾ ಸಮಿತಿಯಿಂದ ಹುಟ್ಟುಹಬ್ಬದ ಆಚರಣೆಯನ್ನು ಅಭಿಮಾನಿಗಳು ಕೇಕ್ ಅನ್ನು ಕತ್ತರಿಸಿ, ಕಂಚಿನ ವಿಷ್ಣು ಪುತ್ಥಳಿಗೆ ಮಾಲಾರ್ಪಣೆ ಮಾಡಿ ತಮ್ಮ ನೆಚ್ಚಿನ ನಾಯಕ ನಟನ ಸ್ಮರಣೆ ಮಾಡಿದರು.

ಯಾವ ಸರ್ಕಾರ ಬಂದರೂ, ಯಾರೇ ಮುಖ್ಯಮಂತ್ರಿ ಆದರೂ ಇದುವರೆಗೆ, ಬೆಂಗಳೂರು ನಗರದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಮಾಡದೇ ಇರುವುದು ಬೇಸರದ ಸಂಗತಿಯಾಗಿದೆ. ಇನ್ನಾದರೂ ಜನ ಪ್ರತಿನಿಧಿಗಳು ಸ್ಮಾರಕ ನಿರ್ಮಾಣ ಮಾಡುವತ್ತ ಮನಸ್ಸು ಮಾಡಬೇಕು ಎಂದು ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ವಿಷ್ಣು ಸೇವಾ ಸಮಿತಿಯ ಪದಾಧಿಕಾರಿಗಳು ಒತ್ತಾಯಿಸಿದ್ದಾರೆ.

ಸಾಹಸಸಿಂಹ ವಿಷ್ಣುವರ್ಧನ್ ಅವರ 68 ನೇ ಹುಟ್ಟುಹಬ್ಬವನ್ನು ಅಭಿಮಾನಿಗಳು ಸಮಾಧಿ ಮುಂದೆ ಕೇಕ್ ಕಟ್ ಮಾಡೋದರ ಮೂಲಕ ಸಂಭ್ರಮಿಸಿದರು. ಇದೇ ವೇಳೆ ವಿಷ್ಣುವರ್ಧನ್ ಅಭಿಮಾನಿಯೊಬ್ಬರು ಪಬ್ಲಿಕ್ ಟಿವಿ ಜೊತೆ ಮಾತನಾಡಿ, ವಿಷ್ಣು ದಾದಾ ಅವರ 69ನೇ ಹುಟ್ಟು ಹಬ್ಬವನ್ನು ಆಚರಿಸುತ್ತಿದ್ದೇವೆ. ಪ್ರತೀ ವರ್ಷದಂತೆ ಈ ವರ್ಷವೂ ಮಧ್ಯರಾತ್ರಿ 12 ಗಂಟೆಯ ಸುಮಾರಿಗೆ ಅಭಿಮಾನಿಗಳು ಸೇರಿ ಹುಟ್ಟುಹಬ್ಬವನ್ನು ಆಚರಿಸುತ್ತೇವೆ. ಬೆಳಗ್ಗೆ ಇತಿಶ್ರೀ ಡಾ. ವಿಷ್ಣುವರ್ಧನ್ ಅಭಿಮಾನಿಗಳ ಬಳಗದಿಂದ ರಕ್ತದಾನ ಶಿಬಿರ, ಮನರಂಜನಾ ಕಾರ್ಯಕ್ರಮ, ಡೆಂಟಲ್ ಹಾಗೂ ನೇತ್ರದಾನ ಶಿಬಿರಗಳನ್ನು ಮಾಡುತ್ತಿದ್ದೇವೆ ಎಂದು ಹೇಳಿದರು.

ಸ್ಯಾಂಡಲ್‍ವುಡ್‍ನ ರಿಯಲ್ ಸ್ಟಾರ್ ಉಪೇಂದ್ರ, ಸಾಹಸಸಿಂಹ ವಿಷ್ಣುವರ್ಧನ್ ಹಾಗೂ ನಟಿ ಶೃತಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಗರದ ಕತ್ರಿಗುಪ್ಪೆಯ ತಮ್ಮ ನಿವಾಸದಲ್ಲಿ ಉಪೇಂದ್ರ ಅವರ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ 51 ನೇ ಬರ್ತ್ ಡೇ ಆಚರಿಸಿಕೊಂಡರು. ಅಭಿಮಾನಿಗಳು ಅದ್ಧೂರಿಯಿಂದ ರಿಯಲ್ ಸ್ಟಾರ್ ಬರ್ತ್ ಡೇ ಆಚರಣೆ ಮಾಡಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *