ಬೈಕ್‌ನಲ್ಲಿ ತೆರಳುವಾಗ ಏಕಾಏಕಿ ಆನೆ ದಾಳಿ – ಅಪ್ಪ ಸಾವು, ಮಗನ ಸ್ಥಿತಿ ಗಂಭೀರ

1 Min Read

ಆನೇಕಲ್: ಕಾಡಾನೆ (Elephant) ದಾಳಿಗೆ ರೈತರೊಬ್ಬರು (Farmer) ಸಾವನ್ನಪ್ಪಿದ ಘಟನೆ ತಮಿಳುನಾಡು – ಕರ್ನಾಟಕ ಗಡಿ ಭಾಗದ ಬ್ಯಾಲದ ಕೆರೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ವೆಂಕಟೇಶ್ ಮೃತ ದುರ್ದೈವಿ. ಇಂದು ಸಂಜೆ (ಫೆ.7) ಬೈಕ್‌ನಲ್ಲಿ ಮಗನೊಂದಿಗೆ ತೆರಳುತ್ತಿದ್ದ ವೆಂಕಟೇಶ್‌ ಅವರ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ದಾಳಿಯಲ್ಲಿ ಅವರ ಮಗ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇದನ್ನೂ ಓದಿ: ಕೇರಳದಲ್ಲಿ ಕಾರಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾದ ಕೊಡಗಿನ ಉದ್ಯಮಿ – ಹೆಂಡತಿ ಮಕ್ಕಳ ಸ್ಥಿತಿ ಗಂಭೀರ

ಆನೆಯನ್ನು ಕಾಡಿಗೆ ಓಡಿಸುವಲ್ಲಿ ಅರಣ್ಯ ಇಲಾಖೆ ವಿಫಲವಾಗಿದೆ ಎಂದು ಅರಣ್ಯ ಇಲಾಖೆ ವಿರುದ್ಧ ಸ್ಥಳೀಯರು ಆಕ್ರೋಶ ಹೊರ ಹಾಕಿದ್ದಾರೆ. ಗಂಗನಹಳ್ಳಿ ಬಳಿ ರೈತನ ಮೃತದೇಹವನ್ನು ಮುಖ್ಯರಸ್ತೆಯಲ್ಲಿ ಇಟ್ಟು ಗ್ರಾಮಸ್ಥರು ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರನ್ನು ಮನವೊಲಿಸಲು ಯತ್ನಿಸಿದರು. ಈ ವೇಳೆ ಹಿರಿಯ ಅಧಿಕಾರಿಗಳು ಹಾಗೂ ಸಚಿವರು ಸ್ಥಳಕ್ಕೆ ಬರಲೇಬೇಕು ಎಂದು ಗ್ರಾಮಸ್ಥರು ಪಟ್ಟು ಹಿಡಿದಿದ್ದಾರೆ. ಇದನ್ನೂ ಓದಿ: ಜನರಿಗೆ, ಶಾಸಕರಿಗೆ ಎಲ್ಲರಿಗೂ ನಾನು ಸಿಎಂ ಆಗಬೇಕು ಅಂತ ಇದೆ: ಡಿಕೆಶಿ

Share This Article