ರಾಯಚೂರಿನಲ್ಲಿ ಹೃದಯಾಘಾತಕ್ಕೆ ಮತ್ತೊಂದು ಬಲಿ – ಜಮೀನಿನಲ್ಲಿ ಕುಸಿದು ಬಿದ್ದು ರೈತ ಸಾವು

Public TV
1 Min Read

ರಾಯಚೂರು: ಜಮೀನಿನಲ್ಲಿ ಹೃದಯಾಘಾತಕ್ಕೊಳಗಾಗಿ (Heart Attack) ಕುಸಿದು ಬಿದ್ದು ರೈತ ಸಾವನ್ನಪ್ಪಿರುವ ಘಟನೆ ರಾಯಚೂರು (Raichur) ಜಿಲ್ಲೆಯ ಡಿ.ರಾಂಪೂರ ಗ್ರಾಮದಲ್ಲಿ ನಡೆದಿದೆ.

ಉಪ್ಪರ ವೆಂಕಟೇಶ್ (45) ಮೃತ ರೈತ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ರೈತನಿಗೆ ಏಕಾಏಕಿ ಎದೆನೋವು ಕಾಣಿಸಿಕೊಂಡು ಕುಸಿದು ಬಿದ್ದಿದ್ದಾರೆ. ಕೂಡಲೇ ಸ್ಥಳದಲ್ಲಿದ್ದವರು ಆಸ್ಪತ್ರೆಗೆ ಸಾಗಿಸುತ್ತಿದ್ದ ಮಾರ್ಗ ಮಧ್ಯದಲ್ಲೇ ವೆಂಕಟೇಶ್ ಮೃತಪಟ್ಟಿದ್ದಾರೆ. ಆರೋಗ್ಯವಾಗಿದ್ದ ರೈತ ವೆಂಕಟೇಶ್ ಜಮೀನಿನ ಕೆಲಸಗಳನ್ನ ಮಾಡಿಕೊಂಡಿದ್ದರು. ಆದರೆ ಏಕಾಏಕಿ ಕುಸಿದುಬಿದ್ದು ಸಾವನ್ನಪ್ಪಿರುವುದು ಕುಟುಂಬಸ್ಥರು ಹಾಗೂ ಗ್ರಾಮಸ್ಥರಲ್ಲಿ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: Air India Crash | 2 ಎಂಜಿನ್‌ಗಳಿಗೆ ಇಂಧನ ಪೂರೈಕೆ ಆಗದಿದ್ದೇ ದುರಂತಕ್ಕೆ ಕಾರಣ – AAIB ಪ್ರಾಥಮಿಕ ವರದಿ ಬಹಿರಂಗ

ರಾಯಚೂರು ಜಿಲ್ಲೆಯಲ್ಲಿ ಇತ್ತೀಚಿಗೆ ಹೃದಯಾಘಾತದಿಂದ ಸಾವನ್ನಪ್ಪಿದ ಎರಡನೇ ಪ್ರಕರಣ ಇದಾಗಿದೆ. ಜುಲೈ 6 ರಂದು ಮಸ್ಕಿಯಲ್ಲಿ ಯುವಕ ಶರಣಬಸವ (32) ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೆ ಹೃದಯಾಘಾತದಿಂದ ಸಾವನ್ನಪ್ಪಿದ್ದ. ಇದನ್ನೂ ಓದಿ: ಬೆಂಗಳೂರಲ್ಲಿ ಕಿಟ್ಟಿ ಪಾರ್ಟಿ ಆಯೋಜಿಸಿ 50 ಕೋಟಿ ವಂಚನೆ ಕೇಸ್ – ಲಾಯರ್ ಎಂದು ಪೊಲೀಸರಿಗೆ ಅವಾಜ್ ಹಾಕಿದ್ದ ಮತ್ತೋರ್ವ ಅರೆಸ್ಟ್

Share This Article