ಸರಗೂರಿನಲ್ಲಿ ಹುಲಿ ದಾಳಿಗೆ ರೈತ ಬಲಿ – ಅಧಿಕಾರಿಗಳ ನಿರ್ಲಕ್ಷ್ಯ ಇದ್ರೆ ಕ್ರಮ ಗ್ಯಾರಂಟಿ: ಈಶ್ವರ್‌ ಖಂಡ್ರೆ

Public TV
1 Min Read

ಮೈಸೂರು: ಸರಗೂರು ತಾಲೂಕು ಬೆಣ್ಣೆಗೆರೆ (ಮುಳ್ಳೂರು) ಬಳಿ ನಿನ್ನೆ ನಡೆದ ಹುಲಿ ದಾಳಿ (Tiger Attack) ತೀವ್ರ ನೋವು ತಂದಿದೆ. ಇಂತಹ ಘಟನೆಗಳು ಮರುಕಳಿಸದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್‌ ಖಂಡ್ರೆ (Eshwar Khandre) ತಿಳಿಸಿದ್ರು.

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗಿಯಾಗಲು ಮೈಸೂರಿಗೆ ಆಗಮಿಸಿದ್ದ ಅವರು ಕೆ.ಆರ್. ಆಸ್ಪತ್ರೆಯ ಶವಾಗಾರಕ್ಕೆ ಭೇಟಿ ನೀಡಿ, ನಿನ್ನೆ ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರ್ ಮೃತದೇಹಕ್ಕೆ ಅಂತಿಮ ನಮನ ಸಲ್ಲಿಸಿದರು. ಇದನ್ನೂ ಓದಿ: ಮುಂದಿನ ತಿಂಗಳಿಂದಲೇ ಭಾರತ್ ಟ್ಯಾಕ್ಸಿ ಶುರು – ಖಾಸಗಿ ಕ್ಯಾಬ್ ಸೇವೆಗಳ ಕಮಿಷನ್ ಹಾವಳಿಗೆ ಬ್ರೇಕ್!

ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ, ಹುಲಿ ಹಾವಳಿಯ ಬಗ್ಗೆ ದೂರು ಬಂದಿದ್ದರೂ ಬೋನು ಇಡುವಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಅಲ್ಲದೇ ಹೆಚ್.ಡಿ ಕೋಟೆ, ಸರಗೂರಿನಲ್ಲೇ ಮರಣೋತ್ತರ ಪರೀಕ್ಷೆ ನಡೆಸಲು ಅವಕಾಶ ಇದ್ದರೂ, ಮೈಸೂರಿಗೆ ಏಕೆ ತಂದರು? ಎಂಬ ಬಗ್ಗೆ ತನಿಖೆ ಮಾಡಿಸಿ ಕ್ರಮ ಜರುಗಿಸಲಾಗುವುದು ಎಂದು ತಿಳಿಸಿದರು.

ಮಾನವ ವನ್ಯಜೀವಿ ಸಂಘರ್ಷ ಇಂದು ನಿನ್ನೆಯದ್ದಲ್ಲ, ಹಿಂದಿನಿಂದಲೂ ಇದೆ. ಅರಣ್ಯ ದಂಚಿನ ಗ್ರಾಮದ ಜನರು ವನ್ಯ ಜೀವಿಗಳೊಂದಿಗೆ ಸಹಬಾಳ್ವೆ ನಡೆಸುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಅಧಿಕಾರಿಗಳು ಪತ್ರಿಕೆ ಓದಿಲ್ಲವೇ? – ಬೀದಿ ನಾಯಿಗಳ ವಿಚಾರದಲ್ಲಿ ಪ್ರತಿಕ್ರಿಯೆ ಸಲ್ಲಿಸದ ರಾಜ್ಯಗಳಿಗೆ ಸುಪ್ರೀಂ ಚಾಟಿ

ಸ್ಪಷ್ಟನೆ:
ಸರಗೂರು ಬಳಿ ಹುಲಿ ದಾಳಿಯಿಂದ ಮೃತಪಟ್ಟ ರಾಜಶೇಖರ್ ಮೃತದೇಹವನ್ನು ಮೈಸೂರಿಗೆ ತಂದಿರುವ ವಿಚಾರ ತಮಗೆ ಮೈಸೂರಿಗೆ ಬರುವ ಮಾರ್ಗದಲ್ಲಿ ತಿಳಿಯಿತು. ಅಂತಿಮ ನಮನ ಸಲ್ಲಿಸಲು ಬಂದಿದ್ದೇನೆ. ಮೈಸೂರಿಗೆ ಏಕೆ ಪಾರ್ಥೀವ ಶರೀರ ತಂದಿದ್ದಾರೆ ಎಂಬುದು ತಮಗೆ ತಿಳಿದಿಲ್ಲ ಎಂದು ಪ್ರಶ್ನೆಯೊಂದಕ್ಕೆ ಸಚಿವರು ತಿಳಿಸಿದರು.

Share This Article