ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ ಚಿಕಿತ್ಸೆ ಫಲಕಾರಿಯಾಗದೇ ಸಾವು

1 Min Read

ರಾಮನಗರ: ಕಾಡಾನೆ ದಾಳಿಯಿಂದ (Wild Elephant Attack) ಗಂಭೀರ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ರೈತ (Farmer) ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದಾರೆ.

ಕಾಂತರಾಜು (53) ಮೃತ ರೈತ. ಕಳೆದ ಏ.19ರಂದು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಬಳಿ ಕಾಡಾನೆ ವಾಪಸ್ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ನಡೆದಿದ್ದ ರೈತರ ಮೇಲೆ ಕಾಡಾನೆ ದಾಳಿ ಮಾಡಿತ್ತು. ಜಮೀನಿನಲ್ಲಿದ್ದ ರೈತನ ಮೇಲೆ ಏಕಾಏಕಿ ಕಾಡಾನೆ ದಾಳಿ ನಡೆಸಿ ಹೊಟ್ಟೆ ಭಾಗದಲ್ಲಿ ಗಂಭೀರ ಗಾಯ ಮಾಡಿ ತೀವ್ರ ರಕ್ತಸ್ರಾವ ಉಂಟಾಗಿತ್ತು. ಕಾಡಾನೆ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರೈತ ಕಾಂತರಾಜುಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ರೈತ ಸಾವನ್ನಪ್ಪಿದ್ದಾರೆ. ಇದನ್ನೂ ಓದಿ: ಕೌಟುಂಬಿಕ ಕಲಹಕ್ಕೆ ಎರಡು ಕಂದಮ್ಮಗಳು ಬಲಿ: ಮಕ್ಕಳಿಗೆ ವಿಷವಿಕ್ಕಿ ತಾಯಿಯೂ ಆತ್ಮಹತ್ಯೆಗೆ ಯತ್ನ

ಅರಣ್ಯ ಇಲಾಖೆ ಹಾಗೂ ಸರ್ಕಾರದ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದು, ಚನ್ನಪಟ್ಟಣ ಭಾಗದಲ್ಲಿನ ಕಾಡಾನೆ ಹಾವಳಿಗೆ ಬ್ರೇಕ್ ಹಾಕುವಂತೆ ಒತ್ತಾಯ ಮಾಡಿದ್ದಾರೆ. ಇದನ್ನೂ ಓದಿ: ಇಂದಿನಿಂದ ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ

Share This Article