ಕಬ್ಬಿನ ಬಿಲ್ ಪಾವತಿಗೆ ಆಗ್ರಹಿಸಿ ಜಮಖಂಡಿ ಶುಗರ್ಸ್ ಫ್ಯಾಕ್ಟರಿ ಮುಂದೆ ರೈತರ ಅಹೋರಾತ್ರಿ ಧರಣಿ

Public TV
1 Min Read

ಬಾಗಲಕೋಟೆ: ಕಬ್ಬಿನ ಬಿಲ್‌ (Sugar Cane Bill)  ಪಾವತಿಸದ್ದಕ್ಕೆ  ಜಮಖಂಡಿ ಶುಗರ್ಸ್ ಕಾರ್ಖಾನೆ (Jamkhandi Sugar Factory) ವಿರುದ್ಧ ರೈತರು (Farmers) ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಜಮಖಂಡಿ ತಾಲೂಕಿನ ನಾಗನೂರು ಗ್ರಾಮದಲ್ಲಿರುವ ಕಾರ್ಖಾನೆ ಬಳಿ ಪ್ರತಿಭಟನೆ ಕುಳಿತು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾರ್ಖಾನೆ ಗೇಟ್ ಬಳಿ ಕಟ್ಟಿಗೆ ಸುಟ್ಟು, ಮಾಲೀಕರ ವಿರುದ್ಧ ಧಿಕ್ಕಾರ ಕೂಗಿದ್ದಾರೆ.  ಇದನ್ನೂ ಓದಿ: ಪತ್ನಿ ಮನೆಬಿಟ್ಟು ಹೋಗಿದ್ದಕ್ಕೆ ಬೇಸತ್ತು ಪತಿ ಆತ್ಮಹತ್ಯೆ

ಪ್ರತಿಭಟನೆಯಲ್ಲಿ (Protest) ಜಮಖಂಡಿ ಹಾಗೂ ವಿಜಯಪುರ ಭಾಗದ ರೈತರು ಭಾಗಿಯಾಗಿದ್ದು, ಕೂಡಲೇ ಸಕ್ಕರೆ ಕಾರ್ಖಾನೆ  ಆಡಳಿತ ಮಂಡಳಿಯವರು ಬಿಲ್ ಪಾವತಿಸದಿದ್ದರೆ ಹೋರಾಟ ಉಗ್ರ ರೂಪ ಪಡೆದುಕೊಳ್ಳಲಿದೆ ಎಂಬ ಎಚ್ಚರಿಕೆ ನೀಡಿದ್ದಾರೆ.

ಕಾರ್ಖಾನೆ ಅಧ್ಯಕ್ಷರಾಗಿರುವ ಮಾಜಿ ಶಾಸಕ ಆನಂದ್ ನ್ಯಾಮಗೌಡರಿಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಸ್ಪಂದಿಸುತ್ತಿಲ್ಲ. ಹೀಗಾಗಿ ನಾವು ಹೋರಾಟ ಹಾದಿ ಹಿಡಿದಿದ್ದೇವೆ ಎಂದು ಕಾರ್ಖಾನೆ ಆಡಳಿತ ಮಂಡಳಿ ವಿರುದ್ಧ ರೈತರು ಸಿಟ್ಟು ಹೊರ ಹಾಕಿದ್ದಾರೆ.

Share This Article