ಬರಗಾಲ ಘೋಷಣೆಗೆ ಒತ್ತಾಯ – ಶಾಸಕರ ಕಾರ್ಯಕ್ರಮಗಳ ಘೇರಾವ್‍ಗೆ ರೈತ ಸಂಘ ನಿರ್ಧಾರ

Public TV
1 Min Read

ಹಾವೇರಿ: ಜಿಲ್ಲೆಯ ಶಿಗ್ಗಾಂವಿ, ಹಾನಗಲ್ ಮತ್ತು ಬ್ಯಾಡಗಿ ತಾಲೂಕುಗಳನ್ನು ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಿಕೊಳ್ಳಬೇಕು ಎಂದು ರೈತ ಸಂಘ (Farmers Union) ಒತ್ತಾಯಿಸಿದೆ. ಈ ವಿಚಾರವಾಗಿ ಈ ಮೂರು ಕ್ಷೇತ್ರಗಳ ಶಾಸಕರ ಕಾರ್ಯಕ್ರಮಗಳಿಗೆ ಘೇರಾವ್ ಹಾಕುವಂತೆ ಜನರಿಗೆ ರೈತ ಮುಖಂಡರು ಮನವಿ ಮಾಡಿದ್ದಾರೆ.

ಜಿಲ್ಲೆಯಲ್ಲಿ (Haveri) ಬರಗಾಲದ ಛಾಯೆ ಆವರಿಸಿದೆ. ಎಂಟು ತಾಲೂಕುಗಳಲ್ಲಿ ಐದನ್ನು ಬರಗಾಲ ಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸಲಾಗಿದೆ. ಆದರೆ ಮೂರು ತಾಲೂಕುಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಬೆಳೆಗಳು ದಿನದಿಂದ ದಿನಕ್ಕೆ ಒಣಗಿ ಹೋಗುತ್ತಿವೆ. ಈಗಾಗಲೇ ರೈತರು ಮೂರು ಬಾರಿ ಬಿತ್ತನೆ ಮಾಡಿ ಕೈಸುಟ್ಟುಕೊಂಡಿದ್ದಾರೆ. ಆದರೆ ಸರ್ಕಾರ ಬರಗಾಲ ಘೋಷಿಸದೆ ವಂಚಿಸಿದೆ ಎಂದು ರೈತ ಸಂಘ ದೂರಿದೆ. ಇದನ್ನೂ ಓದಿ: ಸಾಮೂಹಿಕ ಆತ್ಮಹತ್ಯೆಗೆ ಯತ್ನಿಸಿದ 14 ವಿದ್ಯಾರ್ಥಿನಿಯರು- ಕಾರಣ ನಿಗೂಢ

ಈ ವಿಚಾರವನ್ನು ಈ ಮೂರು ಕ್ಷೇತ್ರದ ಶಾಸಕರು ರಾಜ್ಯ ಸರ್ಕಾರದ ಗಮನಕ್ಕೆ ತರಬೇಕು. ಇದಕ್ಕಾಗಿ ಮೂರು ತಾಲೂಕುಗಳ ಶಾಸಕರ ಕಾರ್ಯಕ್ರಮಗಳಿಗೆ ರೈತರು ಘೇರಾವ್ ಹಾಕಬೇಕು. ಶಿಗ್ಗಾಂವಿ ಶಾಸಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai), ಬ್ಯಾಡಗಿ ಶಾಸಕ ಬಸವರಾಜ್ ಶಿವಣ್ಣನವರ್ ಹಾಗೂ ಹಾನಗಲ್ ಶಾಸಕ ಶ್ರೀನಿವಾಸ ಮಾನೆ ಕಾರ್ಯಕ್ರಮಗಳಿಗೆ ರೈತರು ಘೇರಾವ್ ಹಾಕಬೇಕು. ಈ ಮೂಲಕ ರಾಜ್ಯ ಸರ್ಕಾರಕ್ಕೆ ಸಂದೇಶ ರವಾನಿಸಬೇಕು ಎಂದು ರೈತ ಮುಖಂಡರು ಆಗ್ರಹಿಸಿದ್ದಾರೆ.

ಬಿತ್ತನೆ ಮಾಡಿರುವ ಬೆಳೆಗಳು ಮಳೆ ಇಲ್ಲದೆ ಹಾಳಾಗಿವೆ. ಇದರಿಂದ ರೈತರು ಸಾಲಕ್ಕೆ ಗುರಿಯಾಗಿದ್ದಾರೆ. ಇದಕ್ಕಾಗಿ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ನೀಡುವಂತೆ ರೈತ ಸಂಘ ಒತ್ತಾಯಿಸಿದೆ. ಇದನ್ನೂ ಓದಿ: ಅಂದರ್‌ಗೂ ಮುನ್ನ ಬಚಾವ್ ಆಗಲು ಕಾರನ್ನೇ ಮುಚ್ಚಿಟ್ಟಿದ್ದ ಚೈತ್ರಾ ಕುಂದಾಪುರ!

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್