ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ನಾಲ್ವರು ಸ್ಥಳದಲ್ಲೇ ಸಾವು

1 Min Read

ರಾಮನಗರ: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ (Bengaluru-Mysuru Expressway) ಬೆಳ್ಳಂಬೆಳಗ್ಗೆ ಡಿವೈಡರ್‌ಗೆ ಬಸ್‌ ಡಿಕ್ಕಿಯಾಗಿ (Accident) ನಾಲ್ವರು ಪ್ರಯಾಣಿಕರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.

- Advertisement -

ಮೃತರನ್ನು ಕೇರಳ ಮೂಲದ ಮಹಮ್ಮದ್ ಪರಾನ್ (22), ರಫೀಜ್ (45) ಹಾಗೂ ಬೆಂಗಳೂರು ಮೂಲದ ರಶೀದ್‌(45), ಸಕೀರ್ (27) ಎಂದು ಗುರುತಿಸಲಾಗಿದೆ. ಕೇರಳ (Kerala) ಮೂಲದ ಟ್ರಾವೆಲ್ಸ್ ಕಂಪನಿಗೆ ಸೇರಿದ ಬಸ್‌ ಕೇರಳದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಈ ವೇಳೆ ಚನ್ನಪಟ್ಟಣ (Channapatna) ತಾಲೂಕಿನ ಪುಟ್ಟಪ್ಪನದೊಡ್ಡಿ ಬಳಿ ಬಸ್‌ ಡಿವೈಡರ್‌ಗೆ ಡಿಕ್ಕಿಯಾಗಿದೆ. ಪರಿಣಾಮ ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕ ನಿದ್ದೆ ಮಂಪರಿನಲ್ಲಿ ಇದ್ದಿದ್ದರಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಇದನ್ನೂ ಓದಿ: ಡಿಜೆ ಹಳ್ಳಿಯಲ್ಲಿ ಅಪ್ರಾಪ್ತೆ ಕೊಲೆಗೈದಿದ್ದ ಹಂತಕ ಅಜ್ಮೀರ್​​ನಲ್ಲಿ ಅರೆಸ್ಟ್

- Advertisement -

- Advertisement -

ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ. ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಬೆಂಗಳೂರು | ನಿಂತಿದ್ದ ಕ್ಯಾಂಟರ್‌ಗೆ ಟಾಟಾ ಏಸ್ ಡಿಕ್ಕಿ – ಸ್ಥಳದಲ್ಲೇ ಮೂವರು ಸಾವು

- Advertisement -

ಹೆಚ್ಚಿನ ಹಣದ ಆಸೆಗೆ ಬಸ್ ಡ್ರೈವರ್, ಸೀಟ್ ಇಲ್ಲದಿದ್ರೂ ಮುಂಭಾಗದ ಕ್ಯಾಬಿನಲ್ಲಿ ನಾಲ್ವರನ್ನೂ ಕೂರಿಸಿದ್ದರಿಂದ ಅಪಘಾತದ ರಭಸಕ್ಕೆ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

Share This Article