ಸಾಕಿದ ನಾಯಿಯ ಮೇಲೆ ಮಾರಣಾಂತಿಕ ಹಲ್ಲೆ – ಕರುಳು ಕಿತ್ತು ಬರುವಂತಿದೆ ಈ ದೃಶ್ಯ

Public TV
1 Min Read

– ದೊಣ್ಣೆಯಿಂದ ಮನಬಂದಂತೆ ಹಲ್ಲೆ ನಡೆಸಿದ ವೃದ್ಧರು

ಆನೇಕಲ್: ಸಾಕಿದ ನಾಯಿಯನ್ನು ಕಟ್ಟಿಹಾಕಿ ಮಾರಣಾಂತಿಕ ಹಲ್ಲೆ ನಡೆಸಿರುವ ಅಮಾನವೀಯ ಘಟನೆ ಹೊಸೂರು (Hosuru) ಸಮೀಪದ ಇರುತುಕೋಟೆ (Irutukote) ಗ್ರಾಮದಲ್ಲಿ ನಡೆದಿದೆ.

ಕೋಳಿ, ಮೇಕೆಗಳನ್ನು ಕಚ್ಚುತ್ತಿದೆ ಎಂದು ನಾಯಿಯನ್ನು ಕಂಬಕ್ಕೆ ಕಟ್ಟಿಹಾಕಿ, ಇಬ್ಬರು ವೃದ್ಧರು ದೊಣ್ಣೆಯಿಂದ ಮನಬಂದಂತೆ ಹಲ್ಲೆ ನಡೆಸಿದ್ದಾರೆ.ಇದನ್ನೂ ಓದಿ: ಬಸ್ಸಿನಲ್ಲಿ ಪುತ್ರಿಗೆ ಲೈಂಗಿಕ ಕಿರುಕುಳ – ಚಾಲಕನ ಬಟ್ಟೆ ಬಿಚ್ಚಿ ಥಳಿಸಿದ ತಾಯಿ

ಹಲ್ಲೆ ಮಾಡುವಾಗ ಸ್ಥಳದಲ್ಲೇ ಇದ್ದ ಜನರು ವಿಡಿಯೋ ಮಾಡಿ, ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದಾರೆ. ಈ ದೃಶ್ಯಗಳನ್ನು ನೋಡಿದರೆ ಕರುಳು ಕಿತ್ತು ಬರುವಂತಿದೆ. ನಾಯಿ ಎಷ್ಟೇ ಕಿರುಚಾಡಿದರೂ ಕೂಡ ಅಲ್ಲಿದ್ದವರು ಯಾರು ನಾಯಿಯ ರಕ್ಷಣೆಗೆ ಬಂದಿಲ್ಲ. ವಿಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳಕ್ಕೆ ಕೃಷ್ಣಗಿರಿ ಜಿಲ್ಲಾ ಪ್ರಾಣಿ ಹಿಂಸೆ ತಡೆ ಸಂಘದ ಸದಸ್ಯರು ಭೇಟಿ ನೀಡಿ, ನಾಯಿಯ ರಕ್ಷಣೆ ಮಾಡಿದ್ದಾರೆ. ಸದ್ಯ ನಾಯಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸಂಬಂಧ ಡೆಂಕಣಿಕೋಟೆ ಪೊಲೀಸ್ ಠಾಣೆಯಲ್ಲಿ ನಾಯಿಯ ಮಾಲೀಕ ಮತ್ತು ಮತ್ತೋರ್ವ ವ್ಯಕ್ತಿ ವಿರುದ್ಧ ಪ್ರಕರಣ ದಾಖಲಾಗಿದೆ.ಇದನ್ನೂ ಓದಿ: ಸತ್ಯದ ಹೋರಾಟದಲ್ಲಿ ಸುಳ್ಳು ಸೃಷ್ಟಿ ಮಾಡಿದ್ರೆ ಶಿಕ್ಷೆ ಅನುಭವಿಸಬೇಕು: ಜಯಂತ್

Share This Article