ಹಾಸನ: ಆಸ್ತಿ ವಿಚಾರಕ್ಕೆ ಮಗನೇ ತಂದೆ ಹಾಗೂ ಸಹೋದರನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ (Holenarasipura) ತಾಲೂಕಿನ ಗಂಗೂರು (Ganguru) ಗ್ರಾಮದಲ್ಲಿ ನಡೆದಿದೆ.
ತಂದೆ ದೇವೇಗೌಡ (70) ಹಾಗೂ ಸಹೋದರ ಮಂಜುನಾಥ್ (50) ಕೊಲೆಯಾದವರು. ಮೋಹನ್ (47) ಕೊಲೆಗೈದ ಆರೋಪಿ. ಮಂಜುನಾಥ್ ಹಾಗೂ ಮೋಹನ್ ಇಬ್ಬರು ಅವಿವಾಹಿತರಾಗಿದ್ದರು. ಮಂಜುನಾಥ್, ತಂದೆ-ತಾಯಿಯೊಂದಿಗೆ ವಾಸವಿದ್ದರು. ಆದರೆ ಮೋಹನ್ ಒಂದೇ ಮನೆಯಲ್ಲಿದ್ದರೂ ಪ್ರತ್ಯೇಕವಾಗಿ ವಾಸವಿದ್ದ. ಇದನ್ನೂ ಓದಿ: ಯುವತಿಯರ ಅಸಭ್ಯ ಫೋಟೋ, ವಿಡಿಯೋ ಪೋಸ್ಟ್ – ಯುವಕ ಅರೆಸ್ಟ್
ತಂದೆ ದೇವೇಗೌಡ, ಕೆಲ ದಿನಗಳ ಹಿಂದೆ ಆಸ್ತಿ ಮಾರಾಟ ಮಾಡಿದ್ದರು. ಆಸ್ತಿ ಮಾರಾಟ ಮಾಡಿದ ಹಣ ನೀಡಿಲ್ಲ ಎಂದು ಮೋಹನ್ ಗಲಾಟೆ ಮಾಡಿದ್ದ. ಇದೇ ವಿಚಾರವಾಗಿ ಕೋಪಗೊಂಡಿದ್ದ ಮೋಹನ್, ಬುಧವಾರ ಮಧ್ಯರಾತ್ರಿ 1 ಗಂಟೆ ಸುಮಾರಿಗೆ ಕುಡಿದ ಮತ್ತಿನಲ್ಲಿ ಮನೆಯ ಗೋಡೆ ನೆಗೆದು, ಮಲಗಿದ್ದ ಅಣ್ಣನ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದ. ಇದನ್ನೂ ಓದಿ: ಗಾಂಜಾ ಮತ್ತಿನಲ್ಲಿ ಬಾಲಕಿಯ ರೇಪ್ ಮಾಡಿ ಹತ್ಯೆ – ಕಾಮುಕ ಅರೆಸ್ಟ್
ಈ ವೇಳೆ ತಂದೆ ದೇವೇಗೌಡ ಅವರು ಹಿರಿಯ ಮಗ ಮಂಜುನಾಥ್ ಮೇಲೆ ಹಲ್ಲೆಯಾಗುತ್ತಿರುವುದನ್ನು ತಡೆಯಲು ಬಂದಿದ್ದರು. ಈ ವೇಳೆ ಮೋಹನ್, ತಂದೆಯ ಮೇಲೆಯೂ ಮಚ್ಚಿನಿಂದ ಹಲ್ಲೆ ಮಾಡಿದ್ದ. ಮಗನನ್ನ ತಡೆಯಲು ಬಂದ ತಾಯಿ ಜಯಮ್ಮನ ಮೇಲೂ ಮೋಹನ್ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಜಯಮ್ಮ, ಮನೆಯಿಂದ ಹೊರಗೆ ಓಡಿಹೋಗಿ ಪ್ರಾಣ ಉಳಿಸಿಕೊಂಡು, ರಾತ್ರಿ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದರು. ಇದನ್ನೂ ಓದಿ: ಅಕ್ರಮ ಸಂಬಂಧಕ್ಕೆ ಅಡ್ಡಿ – ಪತಿಯನ್ನು ಕೊಂದು ಅಪಘಾತದಂತೆ ಬಿಂಬಿಸಿದ್ದ ಪತ್ನಿ, ಪ್ರಿಯಕರ ಅರೆಸ್ಟ್
ತಂದೆ ಹಾಗೂ ಸಹೋದರ ಕೊಲೆ ಮಾಡಿ ಮನೆಯ ಮತ್ತೊಂದು ಭಾಗದಲ್ಲಿ ಮೋಹನ್ ಮಲಗಿದ್ದ. ಬಳಿಕ ಅಪ್ಪ ಹಾಗೂ ಅಣ್ಣನನ್ನ ಕೊಲೆ ಮಾಡಿದ್ದೇನೆ. ನನಗೂ ಏಟಾಗಿದೆ ಬಂದು ಆಸ್ಪತ್ರೆಗೆ ಸೇರಿಸು ಎಂದು ಅಕ್ಕನಿಗೆ ಕರೆ ಮಾಡಿ ಮಾಹಿತಿ ನೀಡಿದ್ದ. ಇದರಿಂದ ಗಾಬರಿಗೊಂಡ ಸಹೋದರಿ ಊರಿಗೆ ಬಂದಿದ್ದರು.
ಘಟನಾ ಸ್ಥಳಕ್ಕೆ ಎಸ್ಪಿ ಮೊಹಮ್ಮದ್ ಸುಜೇತಾ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೊಲೆ ಮಾಡಿ ಮನೆಯಲ್ಲೇ ಮಲಗಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೊಳೆನರಸೀಪುರ ಗ್ರಾಮಾಂತರ ಪೊಲೀಸ್ ಠಾಣೆ (Holenarasipura Rural Police Station) ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.