ಅಂತರ್ಜಾತಿ ಪ್ರೇಮ – ಮಗಳ ಕತ್ತು ಹಿಸುಕಿ ಕೊಂದ ತಂದೆ

Public TV
1 Min Read

– ಪ್ರಿಯಕರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಕೋಲಾರ: ಅಂತರ್ಜಾತಿ (Inter Caste) ಪ್ರೀತಿ ವಿಚಾರದಲ್ಲಿ ತಂದೆಯೇ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದು, ಘಟನೆಯಿಂದ ಮನನೊಂದ ಪ್ರಿಯಕರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಲಾರದಲ್ಲಿ (Kolar) ನಡೆದಿದೆ.

ಕೋಲಾರ ಜಿಲ್ಲೆಯ ಬಂಗಾರಪೇಟೆ ತಾಲೂಕು ಕಾಮಸಮುದ್ರ ಹೋಬಳಿ ಬೋಡಗುರ್ಕಿ ಗ್ರಾಮದ ಗೊಲ್ಲ ಸಮುದಾಯಕ್ಕೆ ಸೇರಿದ ಕೀರ್ತಿ (20) ಮತ್ತು ಪರಿಶಿಷ್ಟ ಜಾತಿ ಸಮುದಾಯದ ಗಂಗಾಧರ್ (24) ಮೃತ ದುರ್ದೈವಿಗಳಾಗಿದ್ದಾರೆ. ಇವರಿಬ್ಬರೂ ಸಹ ಕಳೆದ ಒಂದು ವರ್ಷದಿಂದ ಪರಸ್ಪರ ಪ್ರೀತಿಸುತ್ತಿದ್ದರು. ಪ್ರೀತಿ (Love) ವಿಚಾರವನ್ನು ಗಂಗಾಧರ್, ಕೀರ್ತಿಯ ತಂದೆ ಕೃಷ್ಣಮೂರ್ತಿಗೆ ತಿಳಿಸಿ ಮದುವೆ ಮಾಡಿಕೊಡಲು ಕೇಳಿದ್ದಾರೆ. ಆದರೆ ಪ್ರೀತಿಗೆ ಜಾತಿಯು ಎದುರಾಗಿ ಕೀರ್ತಿಯ ಮನೆಯವರು ಮದುವೆಗೆ ಒಪ್ಪಲಿಲ್ಲ ಎನ್ನಲಾಗಿದೆ. ಕೀರ್ತಿಯ ಪೋಷಕರು ಗಂಗಾಧರ್‌ನನ್ನು ಮರೆತುಬಿಡು ಎಂದು ಹಲವು ಬಾರಿ ಬುದ್ದಿವಾದ ಹೇಳಿದ್ದಾರೆ. ಆದರೆ ಇದ್ಯಾವುದಕ್ಕೂ ಕ್ಯಾರೇ ಎನ್ನದ ಪ್ರೇಮಿಗಳಿಬ್ಬರು ತಮ್ಮ ಪ್ರೀತಿಯನ್ನು ಮುಂದುವರೆಸಿದ್ದಾರೆ. ಇದನ್ನೂ ಓದಿ: ಕೋಲಾರದ ರೆಸಾರ್ಟ್‌ನಲ್ಲಿ ಹೈಟೆಕ್ ವೇಶ್ಯಾವಾಟಿಕೆ – 14 ಜನರ ಬಂಧನ, 6 ಮಹಿಳೆಯರ ರಕ್ಷಣೆ

ಪ್ರೀತಿಯ ವಿಚಾರವಾಗಿ ಮಂಗಳವಾರ ಬೆಳಗ್ಗೆ ಕೀರ್ತಿ ಹಾಗೂ ಆಕೆಯ ತಂದೆ ಕೃಷ್ಣಮೂರ್ತಿ ನಡುವೆ ಮಾತುಕತೆ ನಡೆದಿದೆ. ಮಾತಿನ ನಡುವೆ ಕೋಪಗೊಂಡ ಕೃಷ್ಣಮೂರ್ತಿ (42) ಮಗಳನ್ನು ಕತ್ತು ಹಿಸುಕಿ ಸಾಯಿಸಿದ್ದಾನೆ. ಗಾಢವಾಗಿ ಪ್ರೀತಿಸುತ್ತಿದ್ದ ಕೀರ್ತಿ ಸತ್ತಿರುವುದನ್ನು ನೋಡಿದ ಗಂಗಾಧರ್ ಅದೇ ಗ್ರಾಮದ ಬಳಿ ಚಲಿಸುತ್ತಿದ್ದ ಲಾಲ್‌ಬಾಗ್ ಎಕ್ಸ್ಪ್ರೆಸ್ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಘಟನೆಗೆ ಸಂಬಂಧಿಸಿದಂತೆ ಕಾಮಸಮುದ್ರ ಪೊಲೀಸ್ ಠಾಣೆಯಲ್ಲಿ ಕೃಷ್ಣಮೂರ್ತಿ ವಿರುದ್ದ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಮಕ್ಕಳೆದುರೇ ಪತ್ನಿಯ ಗುಪ್ತಾಂಗಕ್ಕೆ ಚಾಕು ಇರಿದು ವಿಕೃತಿ ಮೆರೆದ ರೌಡಿಶೀಟರ್!

Share This Article
ಹೊಸ ಲುಕ್‌ನಲ್ಲಿ ಹಾಟ್ ಆಗಿ ಮಿಂಚಿದ ಮಿಲ್ಕಿ ಬ್ಯೂಟಿ ಹೊಸ ಫೋಟೋಶೂಟ್‌ನಲ್ಲಿ ಹರ್ಷಿಕಾ ಹಾಟ್ ಪೋಸ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡ ಕೆಜಿಎಫ್ ನಟಿ ಹಾಟ್‌ ಲುಕ್‌ನಲ್ಲಿ ಕಾಣಿಸಿಕೊಂಡ ನಟಿ ಆಶಿಕಾ ರಂಗನಾಥ್‌ ಹಾಟ್‌ ಲುಕ್‌ನಲ್ಲಿ ನಟಿ ನಭಾ ನಟೇಶ್ ಹಾಟ್‌ ಲುಕ್‌ ಬೆಡಗಿ ಸಾನ್ಯಾ ಹಾಟ್ ಬ್ಯೂಟಿ ಲಕ್ಷ್ಮಿ ರೈ: ಬೆಳಗಾವಿ ಸುಂದರಿಯ ಫೋಟೋ ವೈರಲ್ ಹಾಟ್ ಫೋಟೋಶೂಟ್ ಮಾಡಿ ಪಡ್ಡೆಹುಡುಗರ ನಿದ್ದಕದ್ದ ಶರಣ್ಯಾ ಹಾಟ್ ಆಗಿ ಕಾಣಿಸಿಕೊಂಡ ಸ್ಯಾಮ್..! ಹಾಟ್ ಅವತಾರದಲ್ಲಿ ಮಾನ್ವಿತಾ