ದೆಹಲಿಯ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ – ಬಾಲ್ಕನಿಯಿಂದ ಹಾರಿದ ತಂದೆ, ಇಬ್ಬರು ಮಕ್ಕಳು ಸಾವು

Public TV
1 Min Read

ನವದೆಹಲಿ: ದೆಹಲಿಯ (New Delhi) ದ್ವಾರಕಾ ಸೆಕ್ಟರ್ 13ರ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ (Shabad Apartment) ಬೆಂಕಿ ಕಾಣಿಸಿಕೊಂಡ ಪರಿಣಾಮ ಅಪಾಯದಿಂದ ಪಾರಾಗಲು ಬಾಲ್ಕನಿಯಿಂದ ಹಾರಿದ ಇಬ್ಬರು ಮಕ್ಕಳು ಹಾಗೂ ತಂದೆ ಸಾವನ್ನಪ್ಪಿದ್ದಾರೆ.

10 ವರ್ಷ ವಯಸ್ಸಿನ ಇಬ್ಬರು ಮಕ್ಕಳು ಹಾಗೂ ತಂದೆ ಯಾದವ್ (35) ಮೃತ ದುರ್ದೈವಿಗಳು. ಏಕಾಏಕಿ ಭಾರೀ ಬೆಂಕಿ ಕಾಣಿಸಿಕೊಂಡ ಹಿನ್ನೆಲೆ ಪ್ರಾಣಾಪಾಯದಿಂದ ಪಾರಾಗುವ ಸಲುವಾಗಿ ಯಾದವ್ ತನ್ನ ಇಬ್ಬರು ಮಕ್ಕಳೊಂದಿಗೆ ಅಪಾರ್ಟ್ಮೆಂಟ್‌ನ 9ನೇ ಮಹಡಿಯ ಬಾಲ್ಕನಿಯಿಂದ ಕೆಳಗೆ ಹಾರಿದ್ದಾರೆ. ಕೂಡಲೇ ಮೂವರನ್ನೂ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಕ್ಕಳನ್ನು ಆಕಾಶ್ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಅಷ್ಟು ಹೊತ್ತಿಗಾಗಲೇ ಅವರಿಬ್ಬರ ಪ್ರಾಣಪಕ್ಷಿ ಹಾರಿಹೋಗಿತ್ತು. ತಂದೆ ಯಾದವ್ ಐಜಿಐ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಗಳು ತಿಳಿಸಿವೆ. ಇದನ್ನೂ ಓದಿ: ದೆಹಲಿಯ ಶಾಬಾದ್ ಅಪಾರ್ಟ್‌ಮೆಂಟ್‌ನಲ್ಲಿ ಬೆಂಕಿ ಅವಘಡ – ಪಾರಾಗಲು ಮಹಡಿಯಿಂದ ಹಾರಿದ ಜನ

ಬೆಂಕಿ ಅವಘಡ ವೇಳೆ ಅಪಾರ್ಟ್ಮೆಂಟ್‌ನಲ್ಲಿ ಸಿಲುಕಿದ್ದ ಯಾದವ್ ಪತ್ನಿ ಹಾಗೂ ಹಿರಿಯ ಮಗನನ್ನು ಅಗ್ನಿಶಾಮಕ ಸಿಬ್ಬಂದಿ ರಕ್ಷಿಸಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಅಪಾರ್ಟ್ಮೆಂಟ್‌ನಲ್ಲಿದ್ದ ಎಲ್ಲಾ ನಿವಾಸಿಗಳನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದ್ದು, ಅಪಾಯ ತಡೆಗಟ್ಟುವ ಸಲುವಾಗಿ ವಿದ್ಯುತ್ ಹಾಗೂ ಗ್ಯಾಸ್ ಕನೆಕ್ಷನ್‌ಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಇದನ್ನೂ ಓದಿ: ಸೋಷಿಯಲ್ ಮೀಡಿಯಾದಲ್ಲಿ ಭಾವನಾತ್ಮಕ ಪೋಸ್ಟ್ ಹಂಚಿಕೊಂಡು ಮಾಡೆಲ್ ಆತ್ಮಹತ್ಯೆ

Share This Article