ಎಫ್‍ಡಿಎ ಪರೀಕ್ಷೆ ಅಕ್ರಮ ತನಿಖೆ ಚುರುಕು – ಕಿಂಗ್‍ಪಿನ್‍ನಿಂದ ಜಾಮೀನಿನ ಮೊರೆ

Public TV
1 Min Read

ಯಾದಗಿರಿ: ಎಫ್‍ಡಿಎ ಪರೀಕ್ಷೆ ಅಕ್ರಮದ (FDA Exam Scam) ತನಿಖೆ ವೇಳೆ ಕಿಂಗ್‍ಪಿನ್ ಆರ್.ಡಿ ಪಾಟೀಲ್ (R.D Patil) ಹೆಸರು ಕೇಳಿ ಬರುತ್ತಿದ್ದಂತೆ ನಿರೀಕ್ಷಣಾ ಜಾಮೀನಿಗೆ (Anticipatory Bail) ಅರ್ಜಿ ಸಲ್ಲಿಸಿದ್ದಾನೆ.

ಈಗಾಗಲೇ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳು ಆರ್.ಡಿ ಪಾಟೀಲ್ ಹೆಸರನ್ನು ಬಾಯ್ಬಿಟ್ಟಿದ್ದಾರೆ. ಈ ಹಿನ್ನೆಲೆಯಲ್ಲಿ ಪೊಲೀಸರು (Police) ಆತನಿಗಾಗಿ ಭಾರೀ ಹುಡುಕಾಟ ನಡೆಸುತ್ತಿದ್ದಾರೆ. ಇದರಿಂದಾಗಿ ಆರ್.ಡಿ ಪಾಟೀಲ್ ಯಾದಗಿರಿಯ (Yadgir) ಜಿಲ್ಲಾ ಕೋರ್ಟ್‍ಗೆ ಜಾಮೀನಿಗಾಗಿ ವಕೀಲರ ಮೂಲಕ ಮೊರೆ ಹೋಗಿದ್ದಾನೆ. ಯಾದಗಿರಿ ನಗರ ಠಾಣೆಯಲ್ಲಿ ದಾಖಲಾಗಿರುವ ಐದು ಪ್ರಕರಣಗಳ ಪೈಕಿ ನಾಲ್ಕು ಪ್ರಕರಣಗಳಿಗೆ ಜಾಮೀನು ಅರ್ಜಿ ಸಲ್ಲಿಸಿದ್ದಾನೆ. ಇದನ್ನೂ ಓದಿ: ಇಲ್ಲೇ ಇದ್ದು ಉತ್ತರ ಪ್ರದೇಶದ ಮೊಬೈಲ್ ಲೊಕೇಶನ್ – ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ ಆರ್.ಡಿ ಪಾಟೀಲ್

ಬಂಧನಕ್ಕೆ ಸಿದ್ಧತೆ ನಡೆಸುತ್ತಿರುವ ಪೊಲೀಸರ ಕಣ್ಣನ್ನು ಪದೇ ಪದೇ ತಪ್ಪಿಸುತ್ತಿರುವ ಆರ್.ಡಿ ಪಾಟೀಲ್ ನಿರಂತರ ಜಾಗ ಬದಲಿಸುತ್ತಿದ್ದಾನೆ. ಬುಧವಾರ ಪೊಲೀಸರು ಆತನ ಇಬ್ಬರು ಸಹಚರರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಪಾಟೀಲ್ ಮಹಾರಾಷ್ಟ್ರದಲ್ಲಿ ತಲೆ ಮರೆಸಿಕೊಂಡಿರುವ ಮಾಹಿತಿ ತಿಳಿದು ಬಂದಿತ್ತು. ಈ ಹಿನ್ನೆಲೆ ಪೊಲೀಸರು ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ಹುಡುಕಾಟ ನಡೆಸಿದ್ದರು.

ಆರೋಪಿ ಆರ್.ಡಿ ಪಾಟೀಲ್ ಮೊಬೈಲ್ ಲೊಕೇಶನ್ ಉತ್ತರ ಪ್ರದೇಶವನ್ನು ತೋರಿಸಿತ್ತು. ಈ ಬಗ್ಗೆ ತನಿಖೆ ನಡೆಸಿದಾಗ ಉತ್ತರ ಪ್ರದೇಶಕ್ಕೆ ಇನ್ನೊಬ್ಬನ ಬಳಿ ಮೊಬೈಲ್ ಕೊಟ್ಟು ಕಳಿಸಿರುವುದು ಬೆಳಕಿಗೆ ಬಂದಿತ್ತು. ಇದನ್ನೂ ಓದಿ: ಬೆಂಗಳೂರಿನಲ್ಲಿ ರೌಡಿಶೀಟರ್‌ ಬರ್ಬರ ಹತ್ಯೆ

Share This Article