ಬಂಧನ ಭೀತಿ – ಜಿ20 ಸಭೆಗೆ ಭಾರತಕ್ಕೆ ಬಾರದೇ ಇರಲು ಪುಟಿನ್ ನಿರ್ಧಾರ

Public TV
1 Min Read

ಮಾಸ್ಕೋ: ಯುದ್ಧ ಅಪರಾಧಗಳ ಆರೋಪದ ಮೇಲೆ ಅಂತಾರಾಷ್ಟ್ರೀಯ ಕ್ರಿಮಿನಲ್ ಕೋರ್ಟ್‌ನಲ್ಲಿ ವಾರಂಟ್ ಹೊರಡಿಸಿರುವ ಹಿನ್ನೆಲೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ (Vladimir Putin) ಭಾರತದಲ್ಲಿ (India) ನಡೆಯಲಿರುವ ಜಿ20 ಸಭೆಯಲ್ಲಿ (G20 Summit) ಭಾಗಿಯಾಗದಿರಲು ನಿರ್ಧರಿಸಿದ್ದಾರೆ ಎಂದು ಕ್ರೆಮ್ಲಿನ್ ಶುಕ್ರವಾರ ತಿಳಿಸಿದೆ.

ಅಂತಾರಾಷ್ಟ್ರೀಯ ಪ್ರಯಾಣದ ವೇಳೆ ಅವರ ಬಂಧನ ಸಾಧ್ಯತೆ ಹಿನ್ನೆಲೆ ಅವರು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ವರದಿಯಾಗಿದೆ. ಇದೇ ಭೀತಿ ಹಿನ್ನೆಲೆ ದಕ್ಷಿಣ ಆಫ್ರಿಕಾದಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಬ್ರಿಕ್ಸ್ ಶೃಂಗಸಭೆಯಲ್ಲೂ ಅವರು ವೀಡಿಯೋ ಲಿಂಕ್ ಮೂಲಕ ಭಾಗವಹಿಸಿದರು. ಇದನ್ನೂ ಓದಿ: ಆನ್‍ಲೈನ್ ಬೆಟ್ಟಿಂಗ್- ಮಾಧ್ಯಮಗಳಿಗೆ ಕೇಂದ್ರ ಖಡಕ್ ಸೂಚನೆ

ಜಿ20 ಶೃಂಗಸಭೆಯು ಸೆಪ್ಟೆಂಬರ್ 9 ರಿಂದ 10 ರವರೆಗೆ ಭಾರತದಲ್ಲಿ ನಡೆಯಲಿದ್ದು, ದೆಹಲಿಯಲ್ಲಿ ನಡೆಯಲಿರುವ ಶೃಂಗಸಭೆಯ ಕೊನೆಯಲ್ಲಿ ಜಿ20 ನಾಯಕರ ಘೋಷಣೆಯನ್ನು ಮಾಡಲಾಗುತ್ತದೆ. ಈ ವೇಳೆ ಎಲ್ಲ ದೇಶದ ನಾಯಕರು ಇರುವುದು ವಾಡಿಕೆ. ಆದಾಗ್ಯೂ ಸಭೆಯಿಂದ ದೂರ ಉಳಿಯಲು ಪುಟಿನ್ ನಿರ್ಧರಿಸಿದ್ದಾರೆ. ಇದನ್ನೂ ಓದಿ: ಕಾವೇರಿ ನದಿ ನೀರು ವಿವಾದ: ತಮಿಳುನಾಡು ಮನವಿಗೆ ಆದೇಶ ನೀಡಲು ಸುಪ್ರೀಂ ನಕಾರ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್