ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಬಿಇ ಪದವೀಧರೆ ಆತ್ಮಹತ್ಯೆ

Public TV
2 Min Read

– ಕಿರುಕುಳದ ಬಗ್ಗೆ ಡೆತ್‌ನೋಟ್‌ನಲ್ಲಿ ಉಲ್ಲೇಖ

ಬೆಂಗಳೂರು: ವರದಕ್ಷಿಣೆ (Dowry) ಕಿರುಕುಳಕ್ಕೆ ಬೇಸತ್ತು ವಿವಾಹಿತ ಮಹಿಳೆಯೊಬ್ಬರು (Woman) ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನ (Bengaluru) ಕಬ್ಬನ್ ಪೇಟೆಯಲ್ಲಿ (Kabban Pete) ನಡೆದಿದೆ.

ಐಶ್ವರ್ಯ (24) ಆತ್ಮಹತ್ಯೆಗೆ ಶರಣಾದ ವಿವಾಹಿತೆ. ಕಬ್ಬನ್ ಪೇಟೆಯ 2ನೇ ಮುಖ್ಯರಸ್ತೆಯಲ್ಲಿರುವ ಮನೆಯಲ್ಲಿ ಘಟನೆ ನಡೆದಿದ್ದು, ಮನೆಯಲ್ಲಿ ಯಾರೂ ಇಲ್ಲದ ವೇಳೆ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ವಿವಾಹಿತೆ ಬಿಇ (B.E) ಪದವೀಧರೆಯಾಗಿದ್ದು, 2020ರಲ್ಲಿ ಆಕೆಯ ಪೋಷಕರು ಮಂಜುನಾಥ್ ಎಂಬಾತನೊಂದಿಗೆ ವಿವಾಹ ಮಾಡಿಕೊಟ್ಟಿದ್ದರು. ಇದನ್ನೂ ಓದಿ: ಉಡುಪಿ ವಿಡಿಯೋ ಚಿತ್ರೀಕರಣ ಕೇಸ್ – ವಿದ್ಯಾರ್ಥಿನಿಯರು, ಕಾಲೇಜ್ ವಿರುದ್ಧ ಎಫ್‌ಐಆರ್ ದಾಖಲು

ಮಂಜುನಾಥ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಐಶ್ವರ್ಯ ಕುಟುಂಬಸ್ಥರು ಮದುವೆ ಸಂದರ್ಭದಲ್ಲಿ 240 ಗ್ರಾಂ ಚಿನ್ನಾಭರಣ ಹಾಗೂ ಮೊದಲಿಗೆ 2 ಲಕ್ಷ ರೂ. ಹಣ ನೀಡಿದ್ದರು. ನಂತರ ವರದಕ್ಷಿಣೆಗಾಗಿ ಪೀಡಿಸಿದ ಕಾರಣ ಐಶ್ವರ್ಯ ಕುಟುಂಬಸ್ಥರು ಮತ್ತೆ 5 ಲಕ್ಷ ರೂ. ಹಣವನ್ನು ಕೊಟ್ಟಿದ್ದರು. ಮೃತ ಐಶ್ವರ್ಯ ದಂಪತಿಗೆ ಒಂದೂವರೆ ವರ್ಷದ ಮುದ್ದಾದ ಮಗು ಇದೆ. ವರದಕ್ಷಿಣೆ ಕಿರುಕುಳದಿಂದ ಬೇಸತ್ತ ಐಶ್ವರ್ಯ ಇಂದು ಕುಟುಂಬಸ್ಥರಿಗೆ ಡೆತ್ ನೋಟ್ (Death Note) ಬರೆದು ವಾಟ್ಸಪ್ ಮೂಲಕ ಕಳುಹಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇದನ್ನೂ ಓದಿ: ಬದುಕಿದ್ದವನ ಹೆಸರಲ್ಲಿ ನಕಲಿ ಡೆತ್ ಸರ್ಟಿಫಿಕೇಟ್ ಸೃಷ್ಟಿಸಿ 35 ಎಕರೆಗೆ ಸ್ಕೆಚ್ – ಐವರು ಅರೆಸ್ಟ್

ಘಟನಾ ಸ್ಥಳಕ್ಕೆ ಹಲಸೂರುಗೇಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮರಣೋತ್ತರ ಪರೀಕ್ಷೆಗಾಗಿ ಐಶ್ವರ್ಯ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ. ಡೆತ್ ನೋಟ್‌ನಲ್ಲಿ ಪತಿ ಮತ್ತು ಕುಟುಂಬಸ್ಥರು ನೀಡುತ್ತಿದ್ದ ಕಿರುಕುಳದ ಕುರಿತು ಉಲ್ಲೇಖವಿದ್ದು, ಪತಿ ಮಂಜುನಾಥ್, ಮಾವ ರಾಜೇಂದ್ರನ್, ಅತ್ತೆ ರತ್ನ ಹಾಗೂ ನಾದಿನಿ ಸುಧಾ ವಿರುದ್ದ ದೂರು ದಾಖಲಿಸಲಾಗಿದೆ. ಇದನ್ನೂ ಓದಿ: ಮದ್ಯವ್ಯಸನ ಮುಕ್ತ ಕೇಂದ್ರಕ್ಕೆ ಸೇರಿದ ಯುವಕ 5 ದಿನಕ್ಕೆ ಸಾವು

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್