Bidar | ಲೋ ಬಿಪಿಯಿಂದ ಮಹಿಳಾ ಪೊಲೀಸ್ ಪೇದೆ ಸಾವು

Public TV
1 Min Read

ಬೀದರ್: ಲೋ ಬಿಪಿಯಿಂದ (Low BP) ಮಹಿಳಾ ಪೊಲೀಸ್ ಪೇದೆ (Police Constable) ಸಾವನ್ನಪ್ಪಿದ ಘಟನೆ ಬೀದರ್‌ನಲ್ಲಿ (Bidar) ನಡೆದಿದೆ.

ಮಹಿಳಾ ಪೊಲೀಸ್ ಪೇದೆ ಸರಿತಾ (28) ಲೋ ಬಿಪಿಯಿಂದ ಸಾವನ್ನಪ್ಪಿದ್ದಾರೆ. ಬೀದರ್‌ನ ಸಬ್ ಅರ್ಬನ್ ಪೊಲೀಸ್ ಠಾಣೆಯ ಪೊಲೀಸ್ ಪೇದೆಯಾಗಿದ್ದ ಸರಿತಾ ಹೆರಿಗೆ ಬಳಿಕ ಲೋ ಬಿಪಿಯಾಗಿ ಸಾವನ್ನಪ್ಪಿದ್ದಾರೆ. ಮೂಲತಃ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನ ಕೊಂಚಾವರಂ ಗ್ರಾಮದ ಪೊಲೀಸ್ ಪೇದೆಯಾಗಿದ್ದು, ಹಲವು ವರ್ಷಗಳಿಂದ ಬೀದರ್‌ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇದನ್ನೂ ಓದಿ: ಭೂಮಿಗೆ ಮರಳಿದ ಶುಕ್ಲಾಗೆ ಪತ್ನಿ, ಪುತ್ರನಿಂದ ಅಪ್ಪುಗೆಯ ಸ್ವಾಗತ

ಒಂದು ವಾರದ ಹಿಂದೇ ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದ ಸರಿತಾ ಹೆರಿಗೆ ಬಳಿಕ ಒಂದು ವಾರ ನಾರ್ಮಲ್ ಆಗಿಯೇ ಇದ್ದರು. ಆದರೆ ಬುಧವಾರ ತಡರಾತ್ರಿ ಏಕಾಏಕಿ ಲೋ ಬಿಪಿಯಾಗಿ ಮಹಿಳಾ ಪೊಲೀಸ್ ಪೇದೆ ಸಾವನ್ನಪ್ಪಿದ್ದು, ಠಾಣೆಯ ಪೊಲೀಸ್ ಸಿಬ್ಬಂದಿ ಭಾವುಕಾಗಿದ್ದಾರೆ. ಬೀದರ್‌ನ ನ್ಯೂ ಟೌನ್ ಪೊಲೀಸ್ ಠಾಣೆಯಲ್ಲಿ ಸರಿತಾ ಪತಿ ಕುಪೇಂದ್ರ ಇನ್ಸ್ಪೆಕ್ಟರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಇದನ್ನೂ ಓದಿ: ಥೈಲ್ಯಾಂಡ್‌ನಲ್ಲಿ ಡೆವಿಲ್ ಸಾಂಗ್ ಶೂಟಿಂಗ್ – ದರ್ಶನ್ ಫೋಟೋ ರಿವೀಲ್

Share This Article