ರಾಜ್ಯದಲ್ಲಿ ರಸಗೊಬ್ಬರ ಕೊರತೆಗೆ ಕಳ್ಳದಂಧೆ ಕಾರಣ – ನಾಳೆ ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ: ವಿಜಯೇಂದ್ರ

Public TV
1 Min Read

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ರಸಗೊಬ್ಬರ (Fertilizer) ಅಭಾವ ವಿರುದ್ಧ ಸೋಮವಾರ (ಜು.28) ರಾಜ್ಯಾದ್ಯಂತ ಬಿಜೆಪಿ ಹೋರಾಟ ಹಮ್ಮಿಕೊಂಡಿದೆ. ಬೆಂಗಳೂರಿನಲ್ಲಿ ಮಾತಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ (BY Vijayendra) ಸರ್ಕಾರದ ವಿರುದ್ಧ ಹೋರಾಟ ಮಾಡೋದಾಗಿ ಘೋಷಿಸಿದರು.

ಬೆಂಗಳೂರು (Bengaluru) ಹೊರತುಪಡಿಸಿ ಉಳಿದ ಎಲ್ಲಾ ಜಿಲ್ಲಾ ಕೇಂದ್ರಗಳಲ್ಲಿ ರೈತ ಮೋರ್ಚಾ ವತಿಯಿಂದ ಬಿಜೆಪಿಯಿಂದ ಹೋರಾಟ ಹಮ್ಮಿಕೊಳ್ಳಲಾಗಿದೆ. ಯಡಿಯೂರಪ್ಪ ಸಿಎಂ ಆಗಿದ್ದಾಗ ದಾಸ್ತಾನು ಇಡ್ತಿದ್ರು, ಅದಕ್ಕೆ ಅನುದಾನವೂ ಇಡ್ತಿದ್ರು. ಈ ಸರ್ಕಾರ ಕಾಪು ದಾಸ್ತಾನು ಅನುದಾನಕ್ಕೂ ಕಡಿತ ಮಾಡಿದೆ. ಸಾವಿರ ಕೋಟಿ ದಾಸ್ತಾನು ಅನುದಾನ 400 ಕೋಟಿಗೆ ಇಳಿಸಿದೆ ಎಂದು ಅಸಮಾಧಾನ ಹೊರಹಾಕಿದ್ರು. ಇದನ್ನೂ ಓದಿ: ಕೇಂದ್ರದಿಂದ 1.50 ಲಕ್ಷ ಟನ್‌ ರಸಗೊಬ್ಬರ ಕೊರತೆಯಾಗಿದೆ – ಸಚಿವ ಚಲುವರಾಯಸ್ವಾಮಿ

ಮುಂಗಾರು ಶೀಘ್ರ ಆರಂಭವಾದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಲಿಲ್ಲ. ಮುಂಚೆಯೇ ಸಿದ್ಧತೆ ಮಾಡಿಕೊಂಡಿಲ್ಲ, ಮುಂಚೆಯೇ ಕೇಂದ್ರಕ್ಕೆ ಪತ್ರ ಬರೆಯಬೇಕಿತ್ತು. ಈಗ ಪತ್ರ ಬರೆಯೋದಲ್ಲ. ರೈತರನ್ನು (Farmers) ಈ ಸರ್ಕಾರ ಬೀದಿಗೆ ತಂದಿದೆ ಎಂದು ವಿಜಯೇಂದ್ರ ಕಿಡಿ ಕಾರಿದರು.  ಇದನ್ನೂ ಓದಿ: ಕರ್ಮ ಯಾರ ಮನೆ ಬಾಗಿಲನ್ನು ಬಿಡಲ್ಲ, ನಂದೇನಾದ್ರೂ ತಪ್ಪಿದ್ರೆ ದೇವ್ರು ನೋಡಿಕೊಳ್ಳಲಿ – ರಕ್ಷಕ್ ಬುಲೆಟ್

ಕೇಂದ್ರದಿಂದ 8 ಲಕ್ಷ ಮೆಟ್ರಿಕ್ ಟನ್ ರಸಗೊಬ್ಬರ ಬಂದಿದೆ, ಏನಾಯ್ತು? ರಾಜ್ಯದಲ್ಲಿ ರಸಗೊಬ್ಬರ ಕಳ್ಳ ದಂಧೆ ನಡೆಯುತ್ತಿದೆ. ರಸಗೊಬ್ಬರ ಅಭಾವ, ನಕಲಿ ಕೃಷಿ ಬೀಜಗಳಿಗೆ ಸರ್ಕಾರವೇ ಹೊಣೆ. ನಕಲಿ ಬಿತ್ತನೆ ಬೀಜ, ರಸಗೊಬ್ಬರ ಅಭಾವ, ಯಾರು ಕಳ್ಳಸಾಗಣೆ ಮಾಡ್ತಿದ್ದಾರೆ? ಇದನ್ನು ಪತ್ತೆ ಹಚ್ಚಿ ಸರ್ಕಾರ ಕ್ರಮ ತಗೋಬೇಕು. ರಸಗೊಬ್ಬರ ಕಳ್ಳದಂಧೆಗೆ ಬ್ರೋಕರ್‌ಗಳು ಕಾರಣ. ಬ್ರೋಕರ್‌ಗಳಿಗೆ ಸಹಕಾರ ಕೊಡುವ ಕೆಲಸ ಸರ್ಕಾರದಲ್ಲಿ ಆಗ್ತಿದೆ ಎಂದು ಇದೇ ವೇಳೆ ವಿಜಯೇಂದ್ರ ಆರೋಪಿಸಿದರು.  ಇದನ್ನೂ ಓದಿ: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರ ಮ್ಯೂಸಿಕಲ್ ಚೇರ್ ಆಸೆಗೆ ರಾಜ್ಯದ ಜನ ಬಲಿಯಾಗುತ್ತಿದ್ದಾರೆ: ನಿಖಿಲ್

Share This Article