ಕೊಪ್ಪಳದಲ್ಲಿ ಟಿಕೆಟ್‍ಗಾಗಿ ತಂದೆ ಮಗನ ಪೈಪೋಟಿ

Public TV
2 Min Read

ಕೊಪ್ಪಳ: ಕಾಂಗ್ರೆಸ್ ಭದ್ರ ಕೋಟೆಯಾಗಿದ್ದ ಕೊಪ್ಪಳ ಲೋಕಸಭಾಕ್ಷೇತ್ರದಲ್ಲಿ ಲೋಕಸಭೆ ಚುನಾವಣೆ ಟಿಕೆಟ್ ಗಾಗಿ ತಂದೆ ಮಗನ ಪೈಪೋಟಿ ನಡುವೆ ಪೈಪೋಟಿ ಶುರುವಾಗಿದೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ಸೋತಿದ್ದ ಬಸವರಾಜ್ ಹಿಟ್ನಾಳ್ ಮತ್ತು ಅವರ ಮಗ ರಾಜಶೇಖರ್ ಹಿಟ್ನಾಳ್ ಟಿಕೆಟ್ ಪಡೆಯಲು ಪ್ರಯತ್ನ ಪಡುತ್ತಿದ್ದಾರೆ. ಮತ್ತೊಂದೆಡೆ 2009ರ ಚುನಾವಣೆಯಲ್ಲಿ ಬಿಜೆಪಿಯಿಂದ ಆಯ್ಕೆಯಾಗಿದ್ದ ಮಾಜಿ ಸಂಸದ ಶಿವರಾಮೇಗೌಡ ಸದ್ಯ ಕಾಂಗ್ರೆಸ್ ಪಾಳಯದಲ್ಲಿ ಸೇರಿಕೊಂಡಿದ್ದು ಅವರು ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಅದಲ್ಲದೇ ಮಾಜಿ ಸಂಸದ ಕೆ.ವಿರುಪಾಕ್ಷಪ್ಪ, ಸೇರಿದಂತೆ ಶಾಸಕ ಅಮರೇಗೌಡ ಬಯ್ಯಾಪುರ ಸಂಬಂಧಿ ಶರಣೇಗೌಡ ಬಯ್ಯಾಪೂರ ಕೂಡ ಪ್ರಭಲ ಆಕಾಂಕ್ಷಿಯಾಗಿದ್ದಾರೆ.

ಶರಣೇಗೌಡ

ಹಿತ್ನಾಳ ಕುಟುಂಬ ಕಳೆದ ನಾಲ್ಕೈದು ದಿನಗಳಿಂದ ಬೆಂಗಳೂರಿನಲ್ಲಿ ಬೀಡು ಬಿಟ್ಟಿತ್ತು. ಭಾನುವಾರ ರಾತ್ರಿಯೇ ಬೆಂಗಳೂರಿನಿಂದ ದೆಹಲಿಗೆ ಹಿಟ್ನಾಳ್ ಕುಟುಂಬ ಹೋಗಿದೆ. ಟಿಕೆಟ್‍ಗಾಗಿ ತಂದೆ ಬಸವರಾಜ್ ಹಿಟ್ನಾಳ್ ಮತ್ತು ಮಗ ರಾಜಶೇಖರ್ ಹಿಟ್ನಾಳ್ ಮದ್ಯೆ ಪೈಪೋಟಿ ನಡೆಸುತ್ತಿದ್ದಾರೆ. ಕಾಂಗ್ರೆಸ್ ಸಂಭಾವ್ಯ ಅಭ್ಯರ್ಥಿ ಪಟ್ಟಿಯಲ್ಲಿ ಬಸವರಾಜ್ ಹಿಟ್ನಾಳ್ ಹೆಸರು ಸೂಚಿಸಲಾಗಿದ್ದು, ಇದರಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಮಗ ರಾಜಶೇಖರ್ ಹಿಟ್ನಾಳ್‍ಗೆ ನಿರಾಸೆಯಾಗಿದೆ.ಹೇಗಾದರೂ ಮಾಡಿ ನನಗೆ ಟಿಕೆಟ್ ಬೇಕು ಎಂದು ರಾಜಶೇಖರ್ ಹಿಟ್ನಾಳ್ ಪಟ್ಟು ಹಿಡದಿದ್ದು, ಕೊಪ್ಪಳ ಲೋಕಸಭಾ ಟಿಕೆಟ್ ಫೈಟ್ ಇದೀಗ ದೆಹಲಿಗೆ ಶಿಫ್ಟ್ ಆಗಿದೆ.

ಮಾಜಿ ಸಚಿವ ಬಸವರಾಜ ರಾಯರಡ್ಡಿ ಕೂಡ ತೆರೆಮರೆಯಲ್ಲಿ ಟಿಕೆಟ್‍ಗಾಗಿ ಕಸರತ್ತು ನಡೆಸಿದ್ದಾರೆ. ಇದೆಲ್ಲದರ ಮಧ್ಯೆ ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಕೊಪ್ಪಳ ಲೋಕಸಭಾ ಕ್ಷೇತ್ರದಿಂದ ಸ್ಪರ್ಧೆ ಮಾಡಿದರೆ ಸೂಕ್ತ ಎಂದು ಕೊಪ್ಪಳ ಕಾಂಗ್ರೆಸ್ ಪಾಳಯದಲ್ಲಿ ಕೇಳಿಬರುತ್ತಿದೆ. ಸಿದ್ದರಾಮಯ್ಯ ಕೊಪ್ಪಳದಿಂದ ಸ್ಪರ್ಧೆ ಮಾಡಿದರೆ ಉತ್ತರ ಕರ್ನಾಟಕ ಭಾಗಕ್ಕೆ ಆನೆ ಬಲ ಬಂದಂತಾಗುತ್ತದೆ ಎಂದು ಕೊಪ್ಪಳ ಕ್ಷೇತ್ರಕ್ಕೆ ಸಿದ್ದರಾಮಯ್ಯ ಸೂಕ್ತ ಅಭ್ಯರ್ಥಿ ಎಂದು ಹೇಳಲಾಗುತ್ತಿದೆ.

ಕಳೆದ 2009 ಮತ್ತು 2014ರ ಲೋಕಸಭಾ ಚುನಾವಣೆಯಲ್ಲಿ ಸೋತು ಸುಣ್ಣವಾಗಿದ್ದ ಕಾಂಗ್ರೆಸ್, ಈ ಭಾರಿ ಶತಾಯಗತಾಯ ಕೊಪ್ಪಳ ಲೋಕಸಭಾ ಕ್ಷೇತ್ರ ಕಾಂಗ್ರೆಸ್ ತೆಕ್ಕೆಗೆ ಬೀಳಿಸಬೇಕೆಂದು ಕಾಂಗ್ರೆಸ್ ಪಾಳಯದಲ್ಲಿ ಸೂಕ್ತ ಅಭ್ಯರ್ಥಿಗಾಗಿ ಸೆಣಸಾಡುತ್ತಿದೆ. ಆದರೆ ಕಾಂಗ್ರೆಸ್ ಪಾಳಯದಲ್ಲಿ ಟಿಕೆಟ್ ಆಕಾಂಕ್ಷೀಗಳ ಲೀಸ್ಟ ದೊಡ್ಡದಾಗಿದ್ದು, ಆಕಾಂಕ್ಷಿಗಳೆಲ್ಲ ಹೈಕಮಾಂಡ್ ಮುಂದೇ ಬೀಡುಬಿಟ್ಟಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv ಮತ್ತು Live  ವೀಕ್ಷಿಸಲು  ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್  ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *