ಬೆಂಗಳೂರು: ಅಡ್ರೆಸ್‌ನಲ್ಲಿ ಸಿಂಗಲ್ ಡಿಜಿಟ್ ತಪ್ಪಾಗಿದ್ದಕ್ಕೆ ಗ್ರಾಹಕನ ಮೇಲೆ ಡೆಲಿವರಿ ಬಾಯ್ (Delivery Boy) ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಬಸವೇಶ್ವರ ನಗರದಲ್ಲಿ (Basaveshwar Nagar) ನಡೆದಿದೆ.
ಹಲ್ಲೆಗೊಳಗಾದ ಗ್ರಾಹಕ ಶಶಾಂಕ್ ಹಾಗೂ ಡೆಲಿವರಿ ಬಾಯ್‌ನ್ನು ವಿಷ್ಣುವರ್ಧನ್ ಎಂದು ಗುರುತಿಸಲಾಗಿದೆ.ಇದನ್ನೂ ಓದಿ: ಗಡಿಯಲ್ಲಿ ಭಾರತಕ್ಕೆ ನುಸುಳಲು ಯತ್ನ – ಶಂಕಿತ ಪಾಕಿಸ್ತಾನಿ ಹೊಡೆದುರುಳಿಸಿದ ಬಿಎಸ್‌ಎಫ್
ಮೇ 21ರಂದು ಆ್ಯಪ್‌ವೊಂದರಲ್ಲಿ ಶಶಾಂಕ್ ಪತ್ನಿ ಆರ್ಡರ್ ಮಾಡಿದ್ದರು. ಡೆಲಿವರಿ ಬಾಯ್ ಬಂದಾಗ ಶಶಾಂಕ್ ನಾದಿನಿ ಸಾಮಗ್ರಿ ತೆಗೆದುಕೊಳ್ಳಲು ಹೋದಾಗ ಅಡ್ರೆಸ್ ವಿಚಾರವಾಗಿ ಬಾಯಿಗೆ ಬಂದಹಾಗೇ ಮಾತಾಡುತ್ತಿದ್ದ. ಇದನ್ನು ಕೇಳಿಸಿಕೊಂಡು ಶಶಾಂಕ್ ಹೊರಗಡೆ ಹೋಗಿ ಆತನೊಂದಿಗೆ ಸ್ವಲ್ಪ ಜೋರಾಗಿ ಮಾತನಾಡಿದ್ದರು. ಆಗ ಒಮ್ಮೆಲೆ ಡೆಲಿವರಿ ಬಾಯ್ ಹಲ್ಲೆ ನಡೆಸಿದ್ದು, ಕಣ್ಣಿಗೆ ಗಾಯವಾಗಿದೆ. ಹಲ್ಲೆ ನಡೆಸಿದ ದೃಶ್ಯಗಳು ಅದೇ ಮನೆಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಸದ್ಯ ಈ ಘಟನೆ ಕುರಿತು ಶಶಾಂಕ್ ಬಸವೇಶ್ವರನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು, ಎಫ್‌ಐಆರ್ ದಾಖಲಾಗಿದೆ.
ಈ ಕುರಿತು ಶಶಾಂಕ್ ಮಾತನಾಡಿ, ಹಲ್ಲೆಯಿಂದಾಗಿ ನನ್ನ ಕಣ್ಣಿನ ಕೆಳಗಿನ ಮೂಳೆ ಕಟ್ ಆಗಿದೆ. ಹೀಗಾಗಿ ಡಾಕ್ಟರ್ ಇನ್ನೊಮ್ಮೆ ಚೆಕ್ ಮಾಡುತ್ತೇನೆ ಎಂದಿದ್ದು, ಒಂದು ವೇಳೆ ಸರಿಹೋಗದಿದ್ದರೆ ಆಪರೇಷನ್ ಮಾಡಬೇಕು ಎಂದು ಹೇಳಿದ್ದಾರೆ. ಸಂಬಂಧಪಟ್ಟ ಕಂಪನಿಯವರು, ಪೊಲೀಸರು ನನಗೆ ನ್ಯಾಯಕೊಡಿಸಬೇಕು ಎಂದು ಕೇಳಿಕೊಂಡಿದ್ದಾರೆ.ಇದನ್ನೂ ಓದಿ: Ramanagara | ಸರ್ಕಾರದ ಇ ಸ್ವತ್ತು ಸಾಫ್ಟ್‌ವೇರ್ ಹ್ಯಾಕ್ ಮಾಡಿ ದಾಖಲೆಗಳ ತಿದ್ದುಪಡಿ – ಮೂವರ ಬಂಧನ