ಸುಳ್ಳು ಸುದ್ದಿ ಹರಿಬಿಟ್ಟ ಆರೋಪ – ತೇಜಸ್ವಿ ಸೂರ್ಯ ವಿರುದ್ಧ ಪ್ರಕರಣ ರದ್ದುಗೊಳಿಸಿದ ಸುಪ್ರೀಂ

Public TV
1 Min Read

– ರಾಜಕೀಯ ಕೋರ್ಟ್‌ನ ಹೊರಗೆ ನಡೆಯಲಿ ಎಂದು ಟೀಕೆ

ನವದೆಹಲಿ: ಹಾವೇರಿಯ ರೈತ ರುದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಸುಳ್ಳು ಸುದ್ದಿ ಹರಿಬಿಟ್ಟ ಆರೋಪಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದ ತೇಜಸ್ವಿ ಸೂರ್ಯ (Tejasvi Surya) ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣ ರದ್ದತಿ ಪ್ರಶ್ನಿಸಿ ಕರ್ನಾಟಕ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

ಪ್ರಕರಣವನ್ನು ರಾಜಕೀಯಗೊಳಿಸಬಾರದು ಎಂದು ತಿಳಿಸಿರುವ ಸಿಜೆಐ ಬಿಆರ್ ಗವಾಯಿ ಇಂತಹ ಸಮರ ನ್ಯಾಯಾಲಯದ ಹೊರಗೆ ನಡೆಯಲಿ ಎಂದು ಆಕ್ಷೇಪ ಹೊರ ಹಾಕಿದರು, ಬಳಿಕ ಅರ್ಜಿ ವಜಾ ಮಾಡಿದರು. ಇದನ್ನೂ ಓದಿ: ಜಯಮೃತ್ಯುಂಜಯ ಶ್ರೀಗಳಿಗೆ ವಿಷಪ್ರಾಶನ ಪ್ರಯತ್ನ ನಡೆದಿದೆ: ಬೆಲ್ಲದ್‌ ಗಂಭೀರ ಆರೋಪ

ವಕ್ಫ್ ಆಸ್ತಿ ಅಂತ ಪಹಣಿಯಲ್ಲಿ ನಮೂದಾದ ಹಿನ್ನೆಲೆ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಸುಳ್ಳು ಸುದ್ದಿ ಪೋಸ್ಟ್ ಮಾಡಿದ್ದಾರೆಂಬ ಆರೋಪದಲ್ಲಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು. ಇದನ್ನೂ ಓದಿ: ಹಾಸನ – ಸೋಲಾಪುರ ರೈಲಿನಲ್ಲಿ ಕಾಣಿಸಿಕೊಂಡ ದಟ್ಟ ಹೊಗೆ

ಪ್ರಕರಣ ರದ್ದು ಕೋರಿ ಸಂಸದ ತೇಜಸ್ವಿ ಸೂರ್ಯ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ಬಳಿಕ ಹೈಕೋರ್ಟ್ ಪ್ರಕರಣವನ್ನು ರದ್ದು ಮಾಡಿತ್ತು. ಹೈಕೋರ್ಟ್ ಆದೇಶವನ್ನು ಪ್ರಶ್ನೆ ಮಾಡಿ ಹಾವೇರಿಯ ಸಿಇಎನ್ ಪೊಲೀಸ್ ತನಿಖಾಧಿಕಾರಿ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಇದನ್ನೂ ಓದಿ: ಒಡಿಶಾ ಹೋಟೆಲ್‌ನಲ್ಲಿ ಯುವತಿ ಮೇಲೆ ಅತ್ಯಾಚಾರ – ಕಾಂಗ್ರೆಸ್ ಸ್ಟೂಡೆಂಟ್ ಲೀಡರ್ ಅರೆಸ್ಟ್

Share This Article