ಕರ್ನಾಟಕ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ: ಸುಪ್ರೀಂ ಸಲಹೆ

By
1 Min Read

ನವದೆಹಲಿ: ಎಸ್‌ಸಿ ಮೀಸಲಾತಿ ಪಟ್ಟಿಯಿಂದ (SC Reservation List) ಲಂಬಾಣಿ, ಭೋವಿ, ಕೊರಮ ಮತ್ತು ಕೊರಚ ಸಮುದಾಯಗಳನ್ನು ತೆಗೆದು ಹಾಕುವ ವಿಚಾರಕ್ಕೆ ಸಂಬಂಧಿದಂತೆ ರಾಜ್ಯ ಸರ್ಕಾರದ (Karnataka Government) ವಿರುದ್ದ ನ್ಯಾಯಾಂಗ ನಿಂದನೆ (Contempt of Court) ಅರ್ಜಿ ಸಲ್ಲಿಸಲು ಸುಪ್ರೀಂಕೋರ್ಟ್(Supreme Court) ಸಲಹೆ ನೀಡಿದೆ.

ರಾಯಚೂರು ಮೂಲದ ಮಹೇಂದ್ರ ಕುಮಾರ್ ನೇತೃತ್ವದಲ್ಲಿ ನಾಲ್ವರು ಅರ್ಜಿದಾರರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಅರವಿಂದ್ ಕುಮಾರ್ ನೇತೃತ್ವದ ಪೀಠ, ಹೈಕೋರ್ಟ್‌ನಲ್ಲಿ (High Court) ಕಾನೂನು ಹೋರಾಟ ನಡೆಸುವಂತೆ ಮೌಖಿಕ ಸೂಚನೆ ನೀಡಿದೆ.  ಇದನ್ನೂ ಓದಿ: ವಾಟ್ಸಪ್ ಸ್ಟೇಟಸ್ ಜವಾಬ್ದಾರಿಯುತವಾಗಿ ಹಾಕಿ – ಬಾಂಬೆ ಹೈಕೋರ್ಟ್

ವಿಚಾರಣೆ ವೇಳೆ ವಾದ ಮಂಡಿಸಿದ ಅರ್ಜಿದಾರರ ಪರ ವಕೀಲರು, 2020ರಲ್ಲಿ ಸುಪ್ರೀಂಕೋರ್ಟ್ ಲಂಬಾಣಿ, ಭೋವಿ, ಕೊರಮ ಮತ್ತು ಕೊರಚ ಸಮುದಾಯದಗಳನ್ನು ಎಸ್‌ಸಿ ಮೀಸಲಾತಿಯಿಂದ ತೆಗೆಯುವ ಬಗ್ಗೆ ಕ್ರಮ ವಹಿಸಲು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗಕ್ಕೆ ಸೂಚಿಸಿತ್ತು. ಸುಪ್ರೀಂಕೋರ್ಟ್ ಆದೇಶದ ಹಿನ್ನಲೆ ಪ್ರಸ್ತಾವನೆ ಸಲ್ಲಿಸಲು ಪರಿಶಿಷ್ಟ ಜಾತಿಗಳ ರಾಷ್ಟ್ರೀಯ ಆಯೋಗ ರಾಜ್ಯ ಸರ್ಕಾರಕ್ಕೆ ತಿಳಿಸಿ ಮೂರು ವರ್ಷಗಳಾಗಿದೆ. ಆದರೆ ರಾಜ್ಯ ಸರ್ಕಾರ ಈವರೆಗೂ ಪ್ರಸ್ತಾವನೆ ಸಲ್ಲಿಸಿಲ್ಲ. ಈ‌ ನಿಟ್ಟಿನಲ್ಲಿ ಕೋರ್ಟ್ ಸಂಬಂಧಿಸಿದ ಇಲಾಖೆಗಳಿಗೆ ನಿರ್ದೇಶನ ನೀಡುವಂತೆ ಮನವಿ ಮಾಡಿದರು.

ವಾದ ಆಲಿಸಿದ ಪೀಠ, ರಾಜ್ಯಕ್ಕೆ ಸಂಬಂಧಿಸಿದ ವಿಚಾರವಾಗಿರುವ ಹಿನ್ನಲೆ ಈ ಬಗ್ಗೆ ಹೈಕೋರ್ಟ್‌ನಲ್ಲಿ ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿ ಎಂದು ಮೌಖಿಕ ಆದೇಶ ನೀಡಿ, ಅರ್ಜಿಯನ್ನು ಇತ್ಯರ್ಥ ಪಡಿಸಿತು.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್