ಫೆ.19 ರಿಂದ 28ವರೆಗೆ ದ.ಕ ಜಿಲ್ಲೆಯಲ್ಲಿ ಕಡತ ವಿಲೇವಾರಿ, ಕಂದಾಯ ಮೇಳ

By
2 Min Read

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಬಾಕಿ ಇರುವ ಕಡತಗಳನ್ನು ಫೆ.19 ರಿಂದ 28ರವರೆಗೆ ಕಡತ ವಿಲೇವಾರಿ ಮಾಡುವ ಅಭಿಯಾನವನ್ನು ನಡೆಸಲಿದ್ದು, 28 ರಂದು ಕಂದಾಯ ಮೇಳ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಹೇಳಿದರು.

ನಗರದ ಪತ್ರಿಕಾ ಭವನದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಸಾಕಷ್ಟು ಕಡತ ವಿಲೇವಾರಿಯಾಗದೆ. ಬಾಕಿಯಾಗಿರುವ ದೂರುಬಂದಿದೆ. ಗ್ರಾಮ ಪಂಚಾಯಿತಿಯಿಂದ ಜಿಲ್ಲಾಧಿಕಾರಿ ಕಚೇರಿ ತನಕದ ಕಡತ ವಿಲೇವಾರಿ ನಡೆಯಲಿದೆ. ಇನ್ನು ಮುಂದೆ ಯಾವುದೇ ಅಧಿಕಾರಿ ತನ್ನ ಮೇಜಿನ ಮೇಲೆ ಕಡತ ಇಟ್ಟುಕೊಂಡು ವಿಳಂಬ ಮಾಡುವಂತಿಲ್ಲ ಎಂದು ವಿವರಿಸಿದರು. ಇದನ್ನೂ ಓದಿ: ರಾಜ್ಯಾದ್ಯಂತ ಎರಡು ದಿನ ಶೋಕಾಚರಣೆ

ಜಿಲ್ಲಾಮಟ್ಟದ ಕೆಡಿಪಿ ಸಭೆ ಫೆ.11ರಂದು ನಡೆಸಲಿದ್ದು, ಶಾಸಕರೊಂದಿಗೆ ಚರ್ಚಿಸಿ ಅಭಿವೃದ್ದಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆಯಲಾಗುವುದು ಎಂದರು. ಜಿಲ್ಲೆಯಲ್ಲಿ ಅಕ್ರಮ ಮರಳು ಸಾಗಾಟ, ದುಪ್ಪಟ್ಟು ಬೆಲೆಗೆ ಮಾರಾಟ, ಪೆÇಲೀಸ್-ಗಣಿ ಮತ್ತು ಭೂವಿಜ್ಞಾನ ಇಲಾಖೆಗಳ ನಡುವಿನ ಸಮನ್ವಯದ ಕೊರತೆ ಬಗ್ಗೆ ಫೆ.11ರೊಳಗೆ ಪರಿಹಾರ ಕಂಡುಕೊಳ್ಳಲಾಗುವುದು. ಜನರ ನಿರೀಕ್ಷೆಯಂತೆ ಮರಳು ಕೊಡಲಾಗಿಲ್ಲ ಎಂಬ ಮಾಹಿತಿ ಇದೆ ಎಂದು ಹೇಳಿದರು.

ತುಳುವಿಗೆ ಮಾನ್ಯತೆ
ತುಳುವನ್ನು ರಾಜ್ಯದ ಅಧಿಕೃತ ಭಾಷೆಯಾಗಿ ಘೋಷಿಸುವ ನಿಟ್ಟಿನಲ್ಲಿ ಸಿಎಂ ಮತ್ತು ಕಾನೂನು ಸಚಿವರ ಜೊತೆ ಸಭೆ ಮಾಡಲಿದ್ದೇವೆ. ಕಾನೂನು ಇಲಾಖೆ ಅನುಮೋದನೆ ಪಡೆದು, ಕ್ರಮ ಕೈಗೊಳ್ಳಲಾಗುವುದು. ಬಳಿಕ ಎಂಟನೇ ಪರಿಚ್ಛೇದಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲು ಬದ್ಧ ಎಂದು ಭರವಸೆ ನೀಡಿದರು.

ವಿದ್ಯುತ್ ಬೆಲೆ ಏರಿಕೆ ಇಲ್ಲ
ವಿದ್ಯುತ್ ದರ ಏರಿಕೆ ಮಾಡುವುದು ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗವಾಗಿದ್ದು, ಸರ್ಕಾರದ ಮುಂದೆ ವಿದ್ಯುತ್ ಬೆಲೆ ಏರಿಕೆ ಮಾಡುವ ಯಾವುದೇ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟಪಡಿಸಿದರು.

ವಿದ್ಯುತ್ ಪೂರೈಕೆ, ಕಾರ್ಯಕ್ಷಮತೆ ಹೆಚ್ಚಿಸಿ ಸೋರಿಕೆ ತಡೆಗಟ್ಟುವ ನಿಟ್ಟಿನಲ್ಲಿ ಪರಿಷ್ಕರಿಸಿದ ವಿತರಣಾ ವಲಯದ ಯೋಜನೆಯಡಿ ಎಂಟು ಸಾವಿರ ಕೋಟಿ ರೂ. ರಾಜ್ಯಕ್ಕೆ ಒದಗಿಸುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಅನಧಿಕೃತ ಜೋಡಣೆ, ಸೋರಿಕೆ ತಡೆಯನ್ನು ಸ್ಥಳೀಯಾಡಳಿತ ಮಾಡಬೇಕು ಎಂದು ಹೇಳಿದರು. ಇದನ್ನೂ ಓದಿ: ಲತಾ ಮಂಗೇಶ್ಕರ್ ಅವರನ್ನು ಸಚಿನ್ ತೆಂಡೂಲ್ಕರ್ ಏನೆಂದು ಕರೆಯುತ್ತಿದ್ದರು ಗೊತ್ತಾ?

ರಂಗಮಂದಿರಕ್ಕೆ 5 ಕೋಟಿ ಸೂತ್ರ
ರಾಜ್ಯದ ಜಿಲ್ಲಾ ರಂಗಮಂದಿರಗಳಿಗೆ ಐದು ಕೋಟಿ ರೂ. ಮತ್ತು ತಾಲೂಕು ರಂಗಮಂದಿರಗಳಿಗೆ ಮೂರು ಕೋಟಿ ರೂ.ಮೊತ್ತ ನೀಡುವ ಏಕಸೂತ್ರ ಜಾರಿಗೆ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದರು.

ಶಾಸಕ ಡಿ.ವೇದವ್ಯಾಸ ಕಾಮತ್, ಮೇಯರ್ ಪ್ರೇಮಾನಂದ ಶೆಟ್ಟಿ, ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡುಬಿದಿರೆ ಈ ವೇಳೆ ಉಪಸ್ಥಿತರಿದ್ದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ಇಂದಾಜೆ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು.

Share This Article
Leave a Comment

Leave a Reply

Your email address will not be published. Required fields are marked *