Bengaluru| ಹಣಕಾಸು ವಿಚಾರವಾಗಿ ಗಲಾಟೆ – ಪತ್ನಿಯನ್ನು ಉಸಿರುಗಟ್ಟಿಸಿ ಕೊಂದ ಟೆಕ್ಕಿ

Public TV
1 Min Read

– ಅನಾರೋಗ್ಯದಿಂದ ಅಸ್ವಸ್ಥ ಎಂದು ಹೈಡ್ರಾಮ

ಬೆಂಗಳೂರು: ಹಣಕಾಸಿನ ವಿಚಾರದಲ್ಲಿ ಗಲಾಟೆ ನಡೆದು ಪತಿಯೇ ಪತ್ನಿಯನ್ನು ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ (Bengaluru) ವೈಯಾಲಿಕಾವಲ್‌ನಲ್ಲಿ (Vyalikaval) ನಡೆದಿದೆ.

ಸಾಫ್ಟ್‌ವೇರ್ ಎಂಜಿನಿಯರ್ ಆಗಿರುವ ಶರತ್ ಮತ್ತು ಖಾಸಗಿ ಕಾಲೇಜಿನಲ್ಲಿ ಉಪನ್ಯಾಸಕಿ ಆಗಿರುವ ಚೇತನಾ ಕಳೆದ ಮೂರು ವರ್ಷಗಳಿಂದ ಇಲ್ಲಿ ವಾಸವಾಗಿದ್ದರು. ಆಗಾಗ ಹಣಕಾಸಿನ ವಿಚಾರಕ್ಕೆ ಇಬ್ಬರ ನಡುವೆ ಗಲಾಟೆ ನಡೆಯುತ್ತಿತ್ತು. ಮಂಗಳವಾರ ರಾತ್ರಿ ಕೂಡ ಇಬ್ಬರ ನಡುವೆ ಇದೇ ವಿಚಾರಕ್ಕೆ ಗಲಾಟೆ ನಡೆದಿದೆ. ಈ ವೇಳೆ ಪತ್ನಿ ಚೇತನಾಳನ್ನು ಪತಿ ಶರತ್ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ.‌ ಇದನ್ನೂ ಓದಿ: ವರ್ಗಾವಣೆಯಾಗಿ ಅಥವಾ VRS ತೆಗೆದುಕೊಳ್ಳಿ- ಹಿಂದೂಯೇತರ 18 ಸಿಬ್ಬಂದಿ ವಿರುದ್ಧ ಕಠಿಣ ಕ್ರಮ: ತಿರುಪತಿ ಬೋರ್ಡ್‌

ನಂತರ ತಡರಾತ್ರಿ ಮೂರು ಗಂಟೆ ಹೊತ್ತಿಗೆ ಅನಾರೋಗ್ಯದಿಂದ ಪತ್ನಿ ಪ್ರಜ್ಞೆ ತಪ್ಪಿದ್ದಾಳೆ ಎಂದು ಆಸ್ಪತ್ರೆಗೆ ಸೇರಿದ್ದಾನೆ. ಆ ವೇಳೆಗಾಗಲೇ ಪತ್ನಿ ಸಾವನ್ನಪ್ಪಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಇದರಿಂದ ಅನುಮಾನಗೊಂಡ ಪೊಲೀಸರು, ಪತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ ವೇಳೆ ಕೃತ್ಯ ಬೆಳಕಿಗೆ ಬಂದಿದೆ. ಸದ್ಯ ಪತಿ ಶರತ್‌ನನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಗಾಯಕ್ಕೆ ಹೊಲಿಗೆ ಬದಲು ಫೆವಿಕ್ವಿಕ್ ಹಾಕಿದ್ದ ನರ್ಸ್ ಅಮಾನತು

Share This Article