ಡ್ರಿಫ್ಟಿಂಗ್ ಬಳಿಕ ರಿಕ್ಕಿ ರೈ ವಿರುದ್ಧ ಮತ್ತೊಂದು FIR – ಕಾರು ರಿಜಿಸ್ಟರ್ ಮಾಡದೇ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚನೆ

1 Min Read

ಬೆಂಗಳೂರು: ಡ್ರಿಫ್ಟಿಂಗ್ ಪ್ರಕರಣದ ಬಳಿಕ ಈಗ ರಿಕ್ಕಿ ರೈ ವಿರುದ್ಧ ಮತ್ತೊಂದು ಎಫ್‌ಐಆರ್ ದಾಖಲಾಗಿದೆ. ಕಾರು ರಿಜಿಸ್ಟರ್ ಮಾಡದೇ ಕಲರ್ ಬದಲಿಸಿ ಟ್ಯಾಕ್ಟ್ ಕಟ್ಟದೇ ಸರ್ಕಾರಕ್ಕೆ ವಂಚಿಸಿರೋ ಆರೋಪ ಕೇಳಿಬಂದಿದೆ.

ಡ್ರಿಫ್ಟಿಂಗ್ ಕೇಸ್ ಸಂಬಂಧ ಕಬ್ಬನ್ ಪಾರ್ಕ್ ಸಂಚಾರಿ ಪೊಲೀಸರು ದಾಖಲೆ ಪರಿಶೀಲನೆ ವೇಳೆ ಅಕ್ರಮ ಬಯಲಾಗಿದೆ. ದೆಹಲಿಯಲ್ಲಿ ಆರ್‌ಟಿಓ ಹರಾಜಿನಲ್ಲಿ ಲ್ಯಾಂಬೋರ್ಗಿನಿ ಕಾರು ಖರೀದಿಸಿದ್ದ. ಬಳಿಕ ಕಲರ್ ಬದಲಿಸಿ, ಅದಕ್ಕೆ ಞಚಿ 05 ಓಖ 0009 ನಂಬರ್‌ನ ಫ್ಯಾನ್ಸಿ ನಂಬರ್ ಪಡೆದಿದ್ದಾರೆ. ಅದನ್ನು ರಿಜಿಸ್ಟರ್ ಮಾಡಿಸಿದ್ದರೆ ಲಕ್ಷಾಂತರ ರೂ. ಟ್ಯಾಕ್ಸ್ ಕಟ್ಟಿಬೇಕಿತ್ತು. ಹೀಗಾಗಿ ಇದ್ಯಾವುದನ್ನೂ ಮಾಡದೇ ನಿಯಮ ಉಲ್ಲಂಘನೆ ಮಾಡಿ ಸರ್ಕಾರಕ್ಕೆ ವಂಚಿಸಿದ್ದಾರೆ. ಇದೇ ಕಾರಣಕ್ಕೆ ಆರಂಭದಲ್ಲಿ ಕಾರಿನ ನಂಬರ್ ಪತ್ತೆಯಾಗಿದ್ದರೂ ಸಹ ಕಾರಿನ ಮಾಲೀಕರು ಪತ್ತೆಯಾಗಿರಲಿಲ್ಲ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಕಾರು ಡ್ರಿಫ್ಟಿಂಗ್ ಕೇಸ್ – ವಿಚಾರಣೆ ಬಳಿಕ ರಿಕ್ಕಿ ರೈಯನ್ನ ಹಿಂಬಾಗಿಲಿನಿಂದ ಕಳುಹಿಸಿದ ಪೊಲೀಸರು

ವಂಚನೆ ಹಿನ್ನೆಲೆ ಕಬ್ಬನ್ ಪಾರ್ಕ್ ಸಂಚಾರ ಪೊಲೀಸರು ನೀಡಿದ ದೂರಿನನ್ವಯ ಕಾನೂನು ಸುವ್ಯವಸ್ಥೆ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದರ ನಡುವೆ ಅನಿಲ್ ಕುಂಬ್ಳೆ ಸರ್ಕಲ್‌ನಲ್ಲಿ ಡ್ರಿಪ್ಟಿಂಗ್ ಕೇಸ್ ಸ್ಥಳ ಪರಿಶೀಲನೆಗೆ ಪೊಲೀಸರು ನೋಟಿಸ್ ನೀಡಿದ್ದಾರೆ. ಈವರೆಗೆ ರಿಕ್ಕಿ ರೈ ಯಾವುದೇ ಉತ್ತರ ನೀಡಿಲ್ಲ.

ಈಗ ಕಾನೂನು ಸುವ್ಯವಸ್ಥೆ ಪೊಲೀಸರಿಂದಲೂ ಪ್ರಕರಣದ ತನಿಖೆ ನಡೆಯುತ್ತಿದ್ದು, ಸಂಚಾರ ಪೊಲೀಸರು ಕಾರನ್ನು ತಮ್ಮ ವಶದಲ್ಲಿಯೇ ಇಟ್ಟುಕೊಂಡಿದ್ದಾರೆ.ಇದನ್ನೂ ಓದಿ: ಬೆಂಗಳೂರಿನಲ್ಲಿ ಲ್ಯಾಂಬೋರ್ಗಿನಿ ಕಾರು ಡ್ರಿಫ್ಟಿಂಗ್ – ರಿಕ್ಕಿ ರೈಗೆ ನೋಟಿಸ್

Share This Article