ಸಮಾಜದಲ್ಲಿ ದ್ವೇಷಪೂರಿತ ಭಾಷಣ ಮಾಡುವವರ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ

1 Min Read

– ಸಿಎಂ ಆಗಿ ಮುಂದುವರಿಯುವುದರಲ್ಲಿ ಹೈಕಮಾಂಡ್ ತೀರ್ಮಾನವೇ ಅಂತಿಮ

- Advertisement -

ಮಂಗಳೂರು/ಬೆಂಗಳೂರು: ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು (Hatred Speech) ಯಾರು ಮಾಡಿದರೂ ಅವರ ಮೇಲೆ ಪ್ರಕರಣ ದಾಖಲಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ತಿಳಿಸಿದರು.

- Advertisement -

ಕಲ್ಲಡ್ಕ ಪ್ರಭಾಕರ್ ಭಟ್ (Kalladka Prabhakar Bhat) ಅವರ ಭಾಷಣದ ಬಗ್ಗೆ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ದ್ವೇಷಪೂರಿತ ಭಾಷಣ ಮಾಡುವವರ ಮೇಲೆ ಎಫ್‌ಐಆರ್ ದಾಖಲಾಗುತ್ತದೆ. ಅವರು ಭಾಷಣದಲ್ಲಿ ಮಹಿಳೆಯರಿಗೆ ಅಗೌರವವಾಗಿ ಮಾತನಾಡಿದ್ದಾರೆ ಎಂದರು. ಇದನ್ನೂ ಓದಿ: CJI ಗವಾಯಿ ಮೇಲೆ ಶೂ ಎಸೆದ ಕೇಸ್ – ಆರೋಪಿ ರಾಕೇಶ್‌ಗೆ ನೋಟಿಸ್ ನೀಡಲು ನಿರಾಕರಿಸಿದ ಸುಪ್ರೀಂ

- Advertisement -

ಧರ್ಮಸ್ಥಳ ಪ್ರಕರಣದ ಬಗ್ಗೆ ಎಸ್‌ಐಟಿ ವರದಿ ಸಲ್ಲಿಕೆ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸುತ್ತಾ, ಎಸ್‌ಐಟಿಯಲ್ಲಿ ಮಧ್ಯಪ್ರವೇಶ ಮಾಡುವುದಿಲ್ಲ. ಈ ತಿಂಗಳಾಂತ್ಯದಲ್ಲಿ ಎಸ್‌ಐಟಿ ವರದಿಯ ಸಲ್ಲಿಕೆಯಾಗಲಿದೆ ಎಂದು ಎಸ್‌ಐಟಿ ಹೇಳಿದೆ ಎಂದು ಗೃಹಸಚಿವರು ತಿಳಿಸಿರುವುದಾಗಿ ಹೇಳಿದರು. ಇದನ್ನೂ ಓದಿ: ಡಿಕೆಶಿ, JDS ಟ್ರಂಕ್ ವಾರ್ – ಹೆಚ್‌ಡಿಕೆ ಸಾಧನೆ ಪಟ್ಟಿ ಬಿಡುಗಡೆ ಮಾಡಿ ಟಾಂಗ್

- Advertisement -

ವಾರ್ತಾ ಇಲಾಖೆಗೆ ವಾಹನ ಸೌಲಭ್ಯದ ಬಗ್ಗೆ ಪ್ರತಿಕ್ರಿಯೆ ನೀಡಿ, ಪತ್ರಕರ್ತರ ಅನುಕೂಲಕ್ಕಾಗಿ ವಾರ್ತಾ ಇಲಾಖೆ ವಾಹನ ಒದಗಿಸುವ ಬಗ್ಗೆ ಪರಿಶೀಲಿಸಲಾಗುವುದು ಎಂದರು. ಇದನ್ನೂ ಓದಿ: 21 ವರ್ಷದ ಬಳಿಕ ದೇಶಾದ್ಯಂತ ಎಸ್‌ಐಆರ್‌: ಚುನಾವಣಾ ಆಯೋಗ

ಹೈಕಮಾಂಡ್‌ನದ್ದೇ ಅಂತಿಮ ತೀರ್ಮಾನ:
ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿವಿಧ ಸಚಿವರು ಹೇಳಿಕೆ ನೀಡುತ್ತಿರುವ ಬಗ್ಗೆ ತಮ್ಮ ಅಭಿಪ್ರಾಯ ತಿಳಿಸುತ್ತಾ, ಪ್ರಜಾಪ್ರಭುತ್ವದಲ್ಲಿ ಮುಖ್ಯಮಂತ್ರಿಗಳ ಸ್ಥಾನಕ್ಕೆ ಸ್ಪರ್ಧಿಸುವ ಹಕ್ಕು ಎಲ್ಲರಿಗೂ ಇದೆ. ಆದರೆ ಈ ಬಗ್ಗೆ ಅಂತಿಮ ನಿರ್ಧಾರ ಹೈಕಮಾಂಡ್‌ಗೆ ಸೇರಿದ್ದಾಗಿದೆ. ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುವುದರಲ್ಲಿಯೂ ಹೈಕಮಾಂಡ್ ತೀರ್ಮಾನವೇ ಅಂತಿಮ ಎಂದು ತಿಳಿಸಿದರು. ಇದನ್ನೂ ಓದಿ: ಬ್ರಿಮ್ಸ್ ವೈದ್ಯರಿಗೆ 9 ತಿಂಗಳಿಂದ ನೋ ಸ್ಯಾಲರಿ – ಇತ್ತ ನೋಟಿಸ್ ನೀಡದೇ 40 ವೈದ್ಯರು ಕೆಲಸದಿಂದ ವಜಾ

Share This Article