ಕುತ್ತಿಗೆ ಹಿಡಿದು ಕೊಲೆಗೆ ಯತ್ನಿಸಿದ್ದ – ವಿಂಗ್‌ ಕಮಾಂಡರ್‌ ವಿರುದ್ಧ ಕೊನೆಗೂ ಎಫ್‌ಐಆರ್‌ ದಾಖಲು

Public TV
1 Min Read

ಬೆಂಗಳೂರು: ಸುಳ್ಳು ಕಥೆ ಕಟ್ಟಿದ ವಿಂಗ್‌ ಕಮಾಂಡರ್‌ (Wing Commandor) ವಿರುದ್ಧ ಕೊನೆಗೂ ಎಫ್‌ಐಆರ್‌ (FIR) ದಾಖಲಾಗಿದೆ.

ಹಲ್ಲೆಗೆ ಒಳಗಾದ ವಿಕಾಸ್‌ ನೀಡಿದ ದೂರಿನ ಆಧಾರದಲ್ಲಿ ಬೈಯಪ್ಪನಹಳ್ಳಿ ಪೊಲೀಸ್‌ ಠಾಣೆಯಲ್ಲಿ ಕಾರಿನ ನಂಬರ್‌ ಆಧಾರದಲ್ಲಿ ಶಿಲಾದಿತ್ಯಾ ಬೋಸೆ (Shiladitya Bose) ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ವಿವಿಧ ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿದೆ.

ಬಿಎನ್‌ಎಸ್ 109(ಕೊಲೆಯತ್ನ), 115(2)(ಮಾರಣಾಂತಿಕ ಹಲ್ಲೆ), 304(ಬಲವಂತವಾಗಿ ಮೈ ಮೇಲೆ ಇರುವ ವಸ್ತು ಕಿತ್ತುಕೊಳ್ಳುವುದು), 324(ಅರಿವಿಗೆ ಇದ್ದರೂ ವಸ್ತುಗಳನ್ನು ಉದ್ದೇಶ ಪೂರಕವಾಗಿ ಹಾಳು ಮಾಡುವುದು), 352 (ಶಾಂತಿ ಭಂಗ)ಸೆಕ್ಷನ್‌ ಅಡಿ ಎಫ್‌ಐಆರ್‌ ದಾಖಲಾಗಿದೆ. ಇದನ್ನೂ ಓದಿ: ಹಿಂದಿಯಲ್ಲಿ ಬೈದಿದ್ದು ಅರ್ಥ ಆಗಿಲ್ಲ ಎಂದಿದ್ದಕ್ಕೆ ಗಲಾಟೆ: ಯುವಕನ ತಾಯಿ ಅಳಲು

 

ದೂರಿನಲ್ಲಿ ಏನಿದೆ?
ಸೋಮವಾರ ಬೆಳಗ್ಗೆ ಸ್ನೇಹಿತನ ಬೈಕ್ ವಾಪಸ್ ನೀಡಲು ನಾನು ಹೋಗುತ್ತಿದ್ದೆ. ಟಿನ್‌ ಫ್ಯಾಕ್ಟರಿಯ ಬಳಿ ಬೈಕ್‌ಗೆ ಕಾರು ತಾಗಿದೆ. ಇದಕ್ಕೆ ಕಾರನ್ನು ಅಡ್ಡ ಹಾಕಿ ಗುದ್ದಿದ್ದು ಯಾಕೆ ಎಂದು ಕೇಳಿದೆ. ಪ್ರಶ್ನೆ ಮಾಡಿದ್ದಕ್ಕೆ ಕಾರಿನಲ್ಲಿದ್ದ ವ್ಯಕ್ತಿ ಕಾಲಿನಿಂದ ಒದ್ದು ಬೈಕನ್ನು ಕೆಳಗೆ ಬೀಳಿಸಿದ್ದಾನೆ.

ನಾನು ಆಕ್ಷೇಪ ವ್ಯಕ್ತಪಡಿಸಿದಾಗ ನಿರಂತರವಾಗಿ ಹಲ್ಲೆ ಮಾಡಿದ್ದಾನೆ. ಸ್ನೇಹಿತನಿಗೆ ಕರೆ ಮಾಡಲು ಮುಂದಾದಾಗ ಮೊಬೈಲ್ ಎಸೆದಿದ್ದಾನೆ. ಜೊತೆಗೆ ಬೈಕ್‌ ಕೀ ಎಸೆಯುತ್ತಾನೆ. ಕುತ್ತಿಗೆ ಹಿಡಿದು ಸಾಯಿಸಲು ಯತ್ನಿಸಿದ್ದ ಎಂದು ವಿಕಾಸ್‌ ದೂರು ನೀಡಿದ್ದಾರೆ. ಇದನ್ನೂ ಓದಿ: ನೆಲಕ್ಕೆ ಬಿದ್ರೂ ಬಿಡದೇ ಡೆಲಿವರಿ ಬಾಯ್ ಮೇಲೆ ಹಲ್ಲೆ ಮಾಡಿ ವಿಂಗ್ ಕಮಾಂಡರ್ ದರ್ಪ

Share This Article