ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ FIR ದಾಖಲು – ಕಟೀಲ್‌ ಎ4, ವಿಜಯೇಂದ್ರ ಎ5

Public TV
1 Min Read

ಬೆಂಗಳೂರು: ಅಧಿಕಾರ ದುರುಪಯೋಗ ಪಡಿಸಿಕೊಂಡು ಚುನಾವಣಾ ಬಾಂಡ್‌ ಪಡೆದ ಆರೋಪದ ಮೇಲೆ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್‌ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ನಿರ್ಮಲಾ ಸೀತಾರಾಮನ್‌ ಸೇರಿ ಹಲವರು ಚುನಾವಣಾ ಬಾಂಡ್‌ ಮೂಲಕ ಕೋಟ್ಯಂತರ ರೂ. ಹಣ ಸುಲಿಗೆ ಮಾಡಿದ್ದಾರೆಂದು ಆರೋಪಿಸಿ ಆದರ್ಶ್‌ ಐಯ್ಯರ್‌ ದೂರು ನೀಡಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಎಫ್‌ಐಆರ್‌ ದಾಖಲಿಸಲು ಆದೇಶಿಸಿತ್ತು. ಆದೇಶದ ಬೆನ್ನಲ್ಲೇ ತಿಲಕ್ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಒಟ್ಟು ಐವರ ಮೇಲೆ ಎಫ್‌ಐಆರ್ ದಾಖಲಾಗಿದ್ದು, ಸೀತಾರಾಮನ್ ಅವರು ಎ1 ಆರೋಪಿಯಾಗಿದ್ದಾರೆ. ಇಡಿ ಅಧಿಕಾರಿಗಳು ಎ2, ಕೇಂದ್ರ ಬಿಜೆಪಿ ಪದಾಧಿಕಾರಿಗಳು ಎ3, ನಳಿನ್‌ ಕುಮಾರ್‌ ಕಟೀಲ್‌ ಎ4, ಬಿ.ವೈ.ವಿಜಯೇಂದ್ರ ಎ5, ರಾಜ್ಯ ಬಿಜೆಪಿ ಪದಾಧಿಕಾರಿಗಳು ಎ6 ಆರೋಪಿಗಳಾಗಿದ್ದಾರೆ.

ಐಪಿಸಿ ಸೆಕ್ಷನ್‌ 384 (ಸುಲಿಗೆ), 120b (ಅಪರಾಧಿಕ ಒಳಸಂಚು), 34 (ಸಮಾನ ಉದ್ದೇಶ) ಮೇಲೆ ಕೇಸ್‌ ದಾಖಲಾಗಿದೆ.

Share This Article