ಯೋಗಿ ಆದಿತ್ಯನಾಥ್ ಡೀಪ್‍ಫೇಕ್ ವೀಡಿಯೋ ವೈರಲ್

Public TV
2 Min Read

ಲಕ್ನೋ: ಕೆಲವು ದಿನಗಳ ಹಿಂದೆ ಸದ್ದು ಮಾಡಿ ತಣ್ಣಗಾಗಿದ್ದ ಡೀಪ್‍ ಫೇಕ್ ವೀಡಿಯೋ (Deep Fake Video) ಇದೀಗ ಮತ್ತೆ ಸದ್ದು ಮಾಡಿದೆ. ಉತ್ತರ ಪ್ರದೇಶ (Uttar Pradesh) ಸಿಎಂ ಯೋಗಿ ಆದಿತ್ಯನಾಥ್ (Yogi Adityanath) ಅವರ ಡೀಪ್‍ ಫೇಕ್ ವೀಡಿಯೋ ವಿಚಾರವಾಗಿ ಲಕ್ನೋದ ಸೈಬರ್ ಪೊಲೀಸ್ (Police) ಠಾಣೆಯಲ್ಲಿ 2 ಎಫ್‍ಐಆರ್‌ಗಳು ದಾಖಲಾಗಿವೆ.

ಡೀಪ್‍ ಫೇಕ್ ವಿಡಿಯೋದಲ್ಲಿ ಯೋಗಿ ಆದಿತ್ಯನಾಥ್ ಅವರ ಚಿತ್ರ ಬಳಸಿ ಔಷಧ ಖರೀದಿಸುವಂತೆ ಮನವಿ ಮಾಡಲಾಗುತ್ತಿದೆ. ಮಧುಮೇಹ ಔಷಧವನ್ನು ಪ್ರಚಾರ ಮಾಡಲು ಯೋಗಿಯವರ ಚಿತ್ರವನ್ನು ದುರುಪಯೋಗ ಪಡಿಸಿಕೊಂಡಿದ್ದಾರೆ. ಇದಲ್ಲದೇ ಮತ್ತೊಂದು ವೀಡಿಯೋದಲ್ಲಿ ಯೋಗಿ ಆದಿತ್ಯನಾಥ್ ಅವರ ಹೆಸರಿನಲ್ಲಿ ಮತ್ತೊಂದು ಔಷಧಿ ಖರೀದಿಸುವಂತೆ ಮನವಿ ಮಾಡಲಾಗಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಫೇಸ್‍ಬುಕ್ ಕೇಂದ್ರ ಕಚೇರಿಯಿಂದ ಮಾಹಿತಿ ಕೇಳಿದ್ದಾರೆ. ಪ್ರಕರಣದ ತನಿಖೆಗಾಗಿ ಎರಡು ತಂಡಗಳನ್ನು ರಚಿಸಲಾಗಿದೆ.

ಕೆಲ ತಿಂಗಳುಗಳ ಹಿಂದೆ ಅನೇಕ ನಟ, ನಟಿಯರ ಡೀಪ್‍ಫೇಕ್ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. ಆರಂಭದಲ್ಲಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್‍ ಫೇಕ್ ವೀಡಿಯೋ ವೈರಲ್ ಆಗಿತ್ತು. ಈ ಸಂಬಂಧ ಪೊಲೀಸರು ಆರೋಪಿಯನ್ನು ಬಂಧಿಸಿದ್ದರು.

ಏನಿದು ಡೀಪ್‌ಫೇಕ್?
ಯಾರದ್ದೋ ದೇಹಕ್ಕೆ ಯಾರದ್ದೋ ತಲೆಯನ್ನು ಫೋಟೋ ಎಡಿಟಿಂಗ್‌ ಟೂಲ್‌ ಮೂಲಕ ಜೋಡಿಸುವುದು ಹಳೇಯ ವಿಚಾರ. ಈ ಫೋಟೋಗಳನ್ನು ನೋಡುವಾಗ ಸ್ವಲ್ಪವಾದರೂ ಅನುಮಾನ ಬರುತ್ತದೆ. ಆದರೆ ಡೀಪ್‌ ಫೇಕ್‌ ತಂತ್ರಜ್ಞಾನದಲ್ಲಿ ಯಾವುದೇ ಅನುಮಾನ ಬಾರದಂತೆ ಫೋಟೋ ಅಲ್ಲ ವಿಡಿಯೋವನ್ನೇ ಸೃಷ್ಟಿ ಮಾಡಲಾಗುತ್ತದೆ. ವಿಡಿಯೋ ಎಷ್ಟು ನೈಜತೆ ಇರುತ್ತದೆ ಅಂದರೆ ವ್ಯಕ್ತಿಯ ದೇಹಕ್ಕೂ ಮತ್ತು ಮುಖಕ್ಕೆ ನೇರ ಸಂಬಂಧ ಇದ್ದಂತೆ ಇರುತ್ತದೆ. ಮೂಲ ವಿಡಿಯೋ ಬೇರೆ ಆಗಿದ್ದರೂ ಈ ವ್ಯಕ್ತಿಯೇ ವಿಡಿಯೋದಲ್ಲಿ ನಟಿಸುತ್ತಿದ್ದಂತೆ ಬಿಂಬಿಸಲಾಗುತ್ತದೆ.

ಆರ್ಟಿಫಿಷಿಯಲ್ ಇಂಟೆಲಿಜೆನ್ಸ್+ಮೆಷಿನ್ ಲರ್ನಿಂಗ್ ಸಹಾಯದಿಂದ ಮಾರ್ಫಿಂಗ್ ವಿಡಿಯೋ, ಫೋಟೋಗಳು ಸೃಷ್ಟಿ ಮಾಡುವುದಕ್ಕೆ ಡೀಪ್‌ಫೇಕ್‌ ಎಂದು ಕರೆಯಲಾಗುತ್ತದೆ. ಒಬ್ಬ ಒಬ್ಬ ವ್ಯಕ್ತಿಯಂತೆಯೇ ಸೇಮ್ ಟು ಸೇಮ್ ಡೂಪ್ ಸೃಷ್ಟಿಸಬಹುದು. ಥಟ್ಟನೇ ನೋಡಿದಾಗ ಯಾವುದೇ ವ್ಯತ್ಯಾಸವೇ ಗೊತ್ತಗುವುದಿಲ್ಲ. ಮೃತ ನಟನನ್ನು ಮತ್ತೆ ಸ್ಕ್ರೀನ್‌ ಮೇಲೆ ಮೇಲೆ ಈ ತಂತ್ರಜ್ಞಾನದ ಸಹಾಯದಿಂದ ತೋರಿಸಬಹುದು.

Share This Article