ಶಿವಮೊಗ್ಗ: ನಗರದ ಆಟೋ ಕಾಂಪ್ಲೆಕ್ಸ್‌ನಲ್ಲಿರುವ ಗ್ಯಾರೇಜ್ ಒಂದರಲ್ಲಿ ಅಗ್ನಿ ಅವಘಡ ಸಂಭವಿಸಿ 2 ಕಾರುಗಳು ಸುಟ್ಟು ಕರಕಲಾದ ಘಟನೆ ನಡೆದಿದೆ.
ಭಾನುವಾರ ಆಗಿದ್ದರಿಂದ ಗ್ಯಾರೇಜ್ ಬಂದ್ ಮಾಡಲಾಗಿತ್ತು. ಗ್ಯಾರೇಜ್ ಬಂದ್ ಆಗಿದ್ದಾಗ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಡಸ್ಟರ್, ಇಕೋ ಸ್ಪೋರ್ಟ್ಸ್ ಕಾರುಗಳು ಸಂಪೂರ್ಣ ಸುಟ್ಟು ಕರಕಲಾಗಿವೆ. ಅವಘಡದಲ್ಲಿ ಟಾಟಾ ಸುಮೋ ವಾಹನ ಅರ್ಧದಷ್ಟು ಸುಟ್ಟು ಕರಕಲಾಗಿದೆ. ಇದನ್ನೂ ಓದಿ: ತುಮಕೂರು | ಮಹಿಳೆ ಆತ್ಮಹತ್ಯೆ – ವರದಕ್ಷಿಣೆ ಕಿರುಕುಳ ಆರೋಪ
ಮಾಹಿತಿ ಸಿಕ್ಕ ಬಳಿಕ ಅಗ್ನಿ ಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಗ್ಯಾರೇಜ್ ಮಾಲೀಕರು ಸಹ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ನಿ ಅವಘಡಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ.
ವಿನೋಬ ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅವಘಡ ಸಂಭವಿಸಿದೆ. ಇದನ್ನೂ ಓದಿ: ಪತ್ನಿ, ಇಬ್ಬರು ಮಕ್ಕಳನ್ನು ಹತ್ಯೆ ಮಾಡಿ ವ್ಯಕ್ತಿ ಪರಾರಿ