ಬೆಂಗಳೂರಿನಲ್ಲಿ ಅಗ್ನಿ ಅವಘಡ – ಕಾರು, ಬೈಕ್‌ ಸೇರಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

By
1 Min Read

ಬೆಂಗಳೂರು: ಜೆಡಿಎಸ್ ಕಚೇರಿ ಪಕ್ಕದ ಮೈದಾನದಲ್ಲಿ ಅಗ್ನಿ ಅವಘಡ ಸಂಭವಿಸಿ 100ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿದೆ.

ಜಪ್ತಿ ಮಾಡಿದ್ದ ವಾಹನಗಳನ್ನು ಪೊಲೀಸರು ಶೇಷಾದ್ರಿಪುರಂ ಬಳಿಯ ಜಕ್ಕರಾಯನ ಕೆರೆ ಗ್ರೌಂಡ್‌ನಲ್ಲಿ ಪಾರ್ಕ್ ಮಾಡಿದ್ದರು. ಈ ಜಾಗಕ್ಕೆ ಇಂದು ಬೆಳಗ್ಗೆ ಬೆಂಕಿ ಬಿದ್ದಿದೆ.

ಈಗಾಗಲೇ ಐದು ಕಾರು, ಐದು ಆಟೋ, 50 ಕ್ಕೂ ಹೆಚ್ಚು ಬೈಕ್‌ಗಳು ಸುಟ್ಟು ಹೋಗಿವೆ. ಮತ್ತಷ್ಟು ವಾಹನಗಳಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದು ನಾಲ್ಕು ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ನಂದಿಸುವ ಕೆಲಸ ಮಾಡುತ್ತಿದೆ.

ಮೈದಾನದಲ್ಲಿ ಹುಲ್ಲು, ಗಿಡ ಬೆಳೆದುಕೊಂಡಿತ್ತು. ಇಂದು ಯಾರೋ ಸಿಗರೇಟ್‌ಗಾಗಿ ಬೆಂಕಿ ಕಡ್ಡಿ ಗೀರಿ ಎಸೆದು ಹೋಗಿದ್ದರಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ.

Share This Article