Ramanagara | ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಟೈಯರ್ ಫ್ಯಾಕ್ಟರಿಗೆ ಬೆಂಕಿ – ತಪ್ಪಿದ ಭಾರೀ ಅನಾಹುತ

Public TV
1 Min Read

ರಾಮನಗರ: ಶಾರ್ಟ್ ಸರ್ಕ್ಯೂಟ್‌ನಿಂದಾಗಿ (Short Circuit) ಟೈಯರ್ ಫ್ಯಾಕ್ಟರಿಗೆ ಬೆಂಕಿ ಬಿದ್ದಿರುವ ಘಟನೆ ಭಾನುವಾರ ರಾಮನಗರದ ಹಾರೋಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರೋ ಕಾರ್ಖಾನೆಯಲ್ಲಿ ನಡೆದಿದೆ.

ಹಳೇ ಟೈಯರ್‌ಗಳನ್ನು ರೀಬೆಲ್ಟ್‌ ಮಾಡುತ್ತಿದ್ದ ರಮೇಶ್ ಎಂಬುವವರಿಗೆ ಸೇರಿದ ಟೈಯರ್‌ ಕಾರ್ಖಾನೆಗೆ ಬೆಂಕಿ ಬಿದ್ದಿದೆ. ಈ ವೇಳೆ ಫ್ಯಾಕ್ಟರಿ ಯೂನಿಟ್ ಹೊತ್ತಿ ಉರಿದಿದೆ. ಭಾನುವಾರ ಕಾರ್ಮಿಕರು ಇಲ್ಲದೇ ಇರುವುದರಿಂದ ಭಾರೀ ಅನಾಹುತ ತಪ್ಪಿದ ಅನಾಹುತ ತಪ್ಪಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿದ ಸ್ಥಳಕ್ಕೆ ಅಗ್ನಿಶಾಮಕ ದಳ ಬೆಂಕಿ ನಂದಿಸಲು ಹರಸಾಹಸ ಪಟ್ಟಿದೆ. ಇದನ್ನೂ ಓದಿ: ಬಸಂತ ಪಂಚಮಿ – ಪ್ರಯಾಗ್‌ರಾಜ್‌ನಲ್ಲಿ ಸೋಮವಾರ 3 ಕೋಟಿ ಭಕ್ತರಿಂದ ಪವಿತ್ರ ಸ್ನಾನ

ಈ ಹಿಂದೆಯೂ ಇದೇ ಟೈಯರ್ ಕಾರ್ಖಾನೆಯಲ್ಲಿ ಅಗ್ನಿ ಅವಘಡ ಸಂಭವಿಸಿತ್ತು. ಬಳಿಕ ಆ ಕಾರ್ಖಾನೆ ಲೈಸೆನ್ಸ್ ರದ್ದು ಮಾಡಲಾಗಿತ್ತು. ಇದೀಗ ಲೈಸೆನ್ಸ್ ಇಲ್ಲದೇ ಕಾರ್ಖಾನೆ ನಡೆಸುತ್ತಿದ್ದಾರೆಂಬ ಆರೋಪವೂ ಕೇಳಿಬಂದಿದೆ. ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ISRO | ಯಶಸ್ವಿಯಾಗಿ ಉಡಾವಣೆಯಾಗಿದ್ದ ಇಸ್ರೋದ 100ನೇ ರಾಕೆಟ್‌ನಲ್ಲಿ ತಾಂತ್ರಿಕ ದೋಷ

Share This Article