ಮಲ್ಲೇಶ್ವರಂ | ಫರ್ನಿಚರ್ ಶಾಪ್‍ನಲ್ಲಿ ಭಾರೀ ಅಗ್ನಿ ಅವಘಡ – 5 ಕೋಟಿ ಮೌಲ್ಯದ ವಸ್ತುಗಳು ಭಸ್ಮ

Public TV
1 Min Read

ಬೆಂಗಳೂರು: ಮಲ್ಲೇಶ್ವರಂನ (Malleshwaram) ಪೈಪ್ ಲೈನ್ ರೋಡ್‍ನಲ್ಲಿರುವ ಫರ್ನಿಚರ್ ಶಾಪ್ ಒಂದರಲ್ಲಿ ಭಾರೀ ಅಗ್ನಿ ಅವಘಡ (Fire Accident) ಸಂಭವಿಸಿದೆ.

ರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಐದು ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೇ ಬೆಂಕಿ ಅಕ್ಕಪಕ್ಕದ ಅಪಾರ್ಟ್‍ಮೆಂಟ್‍ನ 3 ಮನೆಗಳಿಗೂ ಆವರಿಸಿದೆ. 13 ಅಗ್ನಿಶಾಮಕ ಸಿಬ್ಬಂದಿಯಿಂದ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಇದನ್ನೂ ಓದಿ: ಮಂಗಳೂರು | ಬೈಕಂಪಾಡಿಯಲ್ಲಿ ಅಗ್ನಿ ಅವಘಡ – ಅಮೆಜಾನ್ ಸುಗಂಧದ್ರವ್ಯ ತಯಾರಕ ಕಂಪನಿ ಬೆಂಕಿಗಾಹುತಿ

ಅಗ್ನಿ ಅವಘಡದ ವೇಳೆ ಅಂಗಡಿ ಒಳಗಡೆ ಸುಮಾರು 10 ಜನ ಕೆಲಸಗಾರರು ಮಲಗಿದ್ದರು. ಅಕ್ಕಪಕ್ಕದ ನಿವಾಸಿಗಳು ಅವರನ್ನು ಎಚ್ಚರಿಸಿದ್ದಾರೆ. ಶಾರ್ಟ್ ಸಕ್ರ್ಯೂಟ್‍ನಿಂದ ಬೆಂಕಿ ತಗಲಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಆಯಿಲ್ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ – ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

Share This Article