Tamil Nadu | ಹೊಸೂರಲ್ಲಿ ಭಾರೀ ಅಗ್ನಿ ಅವಘಡ – ಹೊತ್ತಿ ಉರಿದ ಟಾಟಾ ಫ್ಯಾಕ್ಟರಿ

Public TV
1 Min Read

ಆನೆಕಲ್‌: ಕರ್ನಾಟಕ ಹಾಗೂ ತಮಿಳುನಾಡಿನ (Tamil Nadu) ಗಡಿಭಾಗದ ಹೊಸೂರು (Hosuru) ಸಮೀಪದ ಕೂತನಹಳ್ಳಿ ಗ್ರಾಮದಲ್ಲಿರುವ ಟಾಟಾ ಕಂಪನಿಯಲ್ಲಿ (Tata Electronics Factory) ಭಾರೀ ಅಗ್ನಿ ಅವಘಡ ಸಂಭವಿಸಿದೆ.

ಕಂಪನಿಯ ಕೆಮಿಕಲ್ ಘಟಕದಲ್ಲಿ ಬೆಂಕಿ ಕಾಣಸಿಕೊಂಡಿದ್ದು, ಬೆಂಕಿಯ ಕೆನ್ನಾಲಿಗೆಗೆ ಕಂಪನಿ ಧಗಧಗನೇ ಹೊತ್ತಿ ಉರಿದಿದೆ. ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿದೆ. ಈ ವೇಳೆ ಸಾವಿರಾರು ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಕಾರ್ಮಿಕರು ಹೊರಗೆ ಓಡಿ ಬಂದಿದ್ದಾರೆ. ಇದರಿಂದ ಭಾರೀ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ: ಭಯೋತ್ಪಾದಕ ದಾಳಿ ಎಚ್ಚರಿಕೆ – ಮುಂಬೈನಾದ್ಯಂತ ಪೊಲೀಸರು ಹೈಅಲರ್ಟ್‌

ಸ್ಥಳಕ್ಕೆ ರಾಯಕೋಟೆ ಮತ್ತು ಡೆಂಕಣಿಕೋಟೆ ಅಗ್ನಿಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಐದಕ್ಕೂ ಹೆಚ್ಚು ಅಗ್ನಿಶಾಮಕ ತಂಡದಿಂದ ಬೆಂಕಿ ನಂದಿಸುವ ಕೆಲಸ ನಡೆದಿದೆ.

ಈ ಕಂಪನಿಯಲ್ಲಿ ಕಾರು ಮತ್ತು ಫೋನ್ ಬಿಡಿಭಾಗಗಳನ್ನು ತಯಾರಿಸಲಾಗುತ್ತಿತ್ತು. ಇದನ್ನೂ ಓದಿ: Madhya Pradesh | ಅತ್ಯಾಚಾರವೆಸಗಿ ಕಾಡಲ್ಲಿ ತಲೆಮರೆಸಿಕೊಂಡಿದ್ದವನ ಪತ್ತೆಗೆ ನೈಟ್ ವಿಷನ್ ಡ್ರೋನ್ ಬಳಕೆ

Share This Article