ಮಂತ್ರಾಲಯ ಮಠದ ಗೋಶಾಲೆಯಲ್ಲಿ ಅಗ್ನಿ ಅವಘಡ – ಲಕ್ಷಾಂತರ ರೂ. ಮೌಲ್ಯದ ಮೇವು ಭಸ್ಮ

Public TV
1 Min Read

ರಾಯಚೂರು: ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ (Mantralayam Mutt) ಗೋ ಶಾಲೆಯಲ್ಲಿ ಅಗ್ನಿ ಅವಘಡ (Fire Accident) ಸಂಭವಿಸಿದೆ. ಮೇವು ಸಂಗ್ರಹಿಸಿಟ್ಟಿದ್ದ ಮೇವಿನ ಗೋದಾಮಿನಲ್ಲಿ ಅವಘಡ ಸಂಭವಿಸಿದ್ದು, ಲಕ್ಷಾಂತರ ರೂ. ಮೌಲ್ಯದ ಮೇವು ಬೆಂಕಿಗಾಹುತಿಯಾಗಿದೆ.

ಬೆಂಕಿ ಕಾಣಿಸಿಕೊಳ್ಳುತ್ತಿದ್ದಂತೆ ಗೋ ಶಾಲೆ ಸಿಬ್ಬಂದಿ ನೂರಾರು ಗೋವುಗಳನ್ನು ಹೊರಗೆ ಬಿಟ್ಟಿದ್ದಾರೆ. ಕೂಡಲೇ ಸ್ಥಳಕ್ಕೆ ಧಾವಿಸಿದ ಆಂಧ್ರಪ್ರದೇಶದ ಎಮ್ಮಿಗನೂರು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಇದರಿಂದಾಗಿ ದೊಡ್ಡ ಅನಾಹುತ ತಪ್ಪಿದಂತಾಗಿದೆ. ಇದನ್ನೂ ಓದಿ: ರಾಜಣ್ಣ ವಜಾ ಬೆನ್ನಲ್ಲೇ ಹೊಸ ಬಾಂಬ್‌ ಸಿಡಿಸಿದ ಕುಣಿಗಲ್‌ ರಂಗನಾಥ್‌

ಗೋಶಾಲೆಯ ಗೋವುಗಳು ಸುರಕ್ಷಿತವಾಗಿವೆ. ಮಂತ್ರಾಲಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಇದನ್ನೂ ಓದಿ: Ramanagara | ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಅಡ್ಡೆ ಮೇಲೆ ದಾಳಿ – ಇಬ್ಬರ ಮೇಲೆ ಪ್ರಕರಣ ದಾಖಲು

Share This Article