ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ 10 ಶೆಡ್‌ಗಳಿಗೆ ಬೆಂಕಿ

1 Min Read

ಬೆಂಗಳೂರು: ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಶೆಡ್‌ಗೆ ಬೆಂಕಿ ಬಿದ್ದು 10 ಶೆಡ್‌ಗಳು ಹೊತ್ತಿ ಉರಿದ ಘಟನೆ ಕೂಡ್ಲು ಕೆರೆ ಸಮೀಪ ನಡೆದಿದೆ.

ಇಂದು ಬೆಳಗ್ಗೆ 5:30 ಸಮಯದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಎಲೆಕ್ಟ್ರಾನಿಕ್ ಸಿಟಿ , ಹುಳಿಮಾವು , ಸರ್ಜಾಪುರ ಹಾಗು ಡೈರಿ ಸರ್ಕಲ್‌ನಿಂದ ಬಂದ ಅಗ್ನಿಶಾಮಕದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.  ಇದನ್ನೂ ಓದಿ: ಮಹಿಳಾ ಅಧಿಕಾರಿಯ ಬೆಡ್‌ರೂಮ್‌ ವಿಡಿಯೋ ಸೆರೆ ಹಿಡಿದು 50 ಲಕ್ಷಕ್ಕೆ ಬ್ಲ್ಯಾಕ್‌ಮೇಲ್‌ – ನಕಲಿ ಪತ್ರಕರ್ತರು ಅರೆಸ್ಟ್‌

 

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಶೆಡ್‌ಗಳು ಹಾಗೂ ಸ್ಕ್ರಾಪ್ ವಸ್ತುಗಳು ಬೆಂಕಿಗಾಹುತಿಯಾಗಿವೆ. ಪರಪ್ಪನ ಅಗ್ರಹಾರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಆ ಪ್ರದೇಶದಲ್ಲಿ 10 ಶೆಡ್‌ಗಳಿದ್ದವು. ಅಲ್ಲೇ ಸಮೀಪದಲ್ಲಿದ್ದ ಬಿಬಿಎಂಪಿಯ ಕಸದ dump yard ನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದ್ದರಿಂದ ಸಮೀಪದ ವಿದ್ಯುತ್‌ ಮಾರ್ಗದ Power line conductors ಗೂ ಬೆಂಕಿ ಹೊತ್ತಿಕೊಂಡಿತ್ತು. ಅಗ್ನಿ ಶಾಮಕ ದಳದವರು ಬೆಂಕಿ ನಂದಿಸಿದ್ದು, ಕೆಪಿಟಿಸಿಎಲ್‌ ಸಿಬ್ಬಂದಿ ಬೆಳಗ್ಗಿನಿಂದ ಕಾರ್ಯ ಪ್ರವೃತ್ತರಾಗಿ ವಿದ್ಯುತ್‌ ಮಾರ್ಗದ ದುರಸ್ತಿ ಮಾಡಿದ್ದಾರೆ. ಅಲ್ಲದೇ, ಈ ಸಂದರ್ಭದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ, ಬೇರೆ ವಿದ್ಯುತ್‌ ಮಾರ್ಗದಿಂದ ಆ ಪ್ರದೇಶಕ್ಕೆ ವಿದ್ಯುತ್‌ ಸರಬರಾಜು ಮಾಡಲಾಗಿದೆ ಎಂದು ಕೆಪಿಟಿಸಿಎಲ್‌ ಹಿರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Share This Article